ದಾವಣಗೆರೆ:ನಕಲಿ ದಾಖಲೆಗಳನ್ನು ನೀಡಿ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡಿಸಿದ ಆರೋಪದ ಮೇಲೆ 12 ಎಂಎಲ್‌ಸಿಗಳಿಗೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ನೋಟಿಸ್ ಜಾರಿ ಮಾಡಿದ್ದಾರೆ.
ಎಂಎಲ್‌ಸಿಗಳು ನೀಡಿದ ವಿಳಾಸದಲ್ಲಿ ವಾಸವಾವಿಲ್ಲದ ಹಿನ್ನೆಲೆಯಲ್ಲಿ ನೋಟಿಸ್ ನೀಡಲಾಗಿದೆ. ಇಂದು ಸಂಜೆ 5 ಗಂಟೆಯೊಳಗೆ ಅಗತ್ಯ ದಾಖಲೆಗಳೊಂದಿಗೆ ಇ-ಮೇಲ್ ಅಥವಾ ಖುದ್ದು ಹಾಜರಾಗಲು ನೋಟಿಸ್​ನಲ್ಲಿ ಸೂಚಿಸಲಾಗಿದೆ.
ತಪ್ಪಿದ್ದಲ್ಲಿ ತಮ್ಮ ಸಮಜಾಯಿಷಿ ಇಲ್ಲವೆಂದು ಪರಿಗಣಿಸಿ ಪ್ರಜಾಪ್ರತಿನಿಧಿ ಕಾಯ್ದೆಯಡಿ ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದು ನೋಟಿಸ್​ನಲ್ಲಿ ತಿಳಿಸಲಾಗಿದೆ.
ಮೇಯರ್ ಚುನಾವಣೆ ಉದ್ದೇಶಕ್ಕಾಗಿ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೊಳಿಸಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ. ದಾವಣಗೆರೆ ಮಹಾನಗರಪಾಲಿಕೆ ಚುನಾವಣೆ ನಾಳೆ ನಡೆಯಲಿದ್ದು, ಜಿಲ್ಲಾಡಳಿತ ಚುನಾವಣೆಗೆ ಸಕಲ ಸಿದ್ಧತೆ ಮಾಡಿಕೊಂಡಿದೆ. ಚುನಾವಣಾ ನಡೆಯುವ ಬಗ್ಗೆ ಅನುಮಾನ ವ್ಯಕ್ತವಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × one =
Remember me
