ದಾವಣಗೆರೆ:ತಾಯಿ-ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟ ಹೃದಯವಿದ್ರಾವಕ ಘಟನೆ ಜಿಲ್ಲೆಯಲ್ಲಿ ಸಂಭವಿಸಿದೆ.
ಚನ್ನಗಿರಿ ತಾಲೂಕಿನ ಮರವಂಜಿ ಗ್ರಾಮದ ರಾಜಪ್ಪ ವರ ಪತ್ನಿ ಕಮಲಮ್ಮ(55) ಮತ್ತು ಇವರ ಮಗಳು ಶ್ರುತಿ(24), ಮಗ ಸಂಜಯ್(21) ಸೇರಿ ಮೂವರೂ ಬುಧವಾರ ಸಂತೆಬೆನ್ನೂರು ವ್ಯಾಪ್ತಿಯ ಸೂಳೆಕೆರೆ ನಾಲೆಗೆ ಬಿದ್ದು ಪ್ರಾಣ ಕಳೆದುಕೊಂಡಿದ್ದಾರೆ. ಶ್ರುತಿ ಮತ್ತು ಸಂಜಯ್ ಮೃತದೇಹ ಪತ್ತೆಯಾಗಿದ್ದು, ಶುಕ್ರವಾರ ಮಧ್ಯಾಹ್ನ 2 ಗಂಟೆಯಾದರೂ ತಾಯಿ ಶವ ಪತ್ತೆಯಾಗಿರಲಿಲ್ಲ. ಶೋಧಕಾರ್ಯ ಮುಂದುವರಿದಿತ್ತು.ಇದನ್ನೂ ಓದಿರಿಪ್ಲೀಸ್​ ಬಾಗಿಲು ತೆಗಿ.. ನಾವೆಲ್ಲ ಇದ್ದೇವೆ.. ಎಂದು ಗೋಗರೆಯುತ್ತಿದ್ದರೂ ನೋಡನೋಡುತ್ತಿದ್ದಂತೆ ನೇಣಿಗೆ ಶರಣಾದ!
ಕಮಲಮ್ಮ ಅವರ ಪತಿ ರಾಜಪ್ಪ ನಿವೃತ್ತ ಉಪನ್ಯಾಸಕರಾಗಿದ್ದು, ಹೊಳಲ್ಕೆರೆ ತಾಲೂಕು ರಾಮಗಿರಿಯ ಮಣ್ಣಮ್ಮ ಕಾಲೇಜಿನಲ್ಲಿ ಕೆಲಸ ನಿರ್ವಹಿಸಿದ್ದರು. ಮಗಳು ಶ್ರುತಿ ಮದುವೆಗೆ ನಿರ್ಧರಿಸಿದ್ದರು. ಆದರೆ ಆಕೆ ಮದುವೆಗೆ ನಿರಾಕರಿಸಿದ್ದಳು. ಈ ಕಾರಣ ತಂದೆ, ಮಗಳ ನಡುವೆ  ವಾಕ್ಸಮರ ನಡೆದು ಜಗಳವಾಗಿತ್ತು.
ಮಂಗಳವಾರ ತಾಯಿ ಹಾಗೂ ಮಗಳ ಮಧ್ಯೆ ಮಾತುಕತೆ ನಡೆದಿದೆ. ಬುಧವಾರ ಬೆಳಗ್ಗೆ ಹರಿಹರ ತಾಲೂಕಿನ ಕುಂಬಳೂರು ಗ್ರಾಮಕ್ಕೆ ಹೋಗಿ ಬರುವುದಾಗಿ ಹೇಳಿ, ಇಬ್ಬರೂ ತೆರಳಿದ್ದರು. ನಂತರ ಮಗ ಕೂಡ ಚನ್ನಗಿರಿಯಲ್ಲಿ ಇಬ್ಬರನ್ನೂ ಸೇರಿಕೊಂಡಿದ್ದು, ಆತ್ಮಹತ್ಯೆಗೆ ಶರಣಾಗಿದ್ದಾರೆಂದು ಹೇಳಲಾಗಿದೆ. ಸಂತೆಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ಶ್ರುತಿ ಎಂಎ ಪದವೀಧರೆ. ಸಂಜಯ್ ಇಂಜಿನಿಯರಿಂಗ್ ಪದವೀಧರ. ಇವರ ತಂದೆ ರಾಜಪ್ಪ ನಿವೃತ್ತ ಉಪನ್ಯಾಸಕರಾಗಿದ್ದರು.
ಕೊನೆಗೂ ಸಾವಿನ ಮನೆಯ ಕದ ತಟ್ಟಿದ ನಟಿ ಜಯಶ್ರೀ! ಕಳೆದ 7 ತಿಂಗಳಲ್ಲಿ ಆಕೆ ಅನುಭವಿಸಿದ್ದ ನರಕಯಾತನೆ ಇಲ್ಲಿದೆ…

ಬೆಣ್ಣೆಹೊಳೆ ಫಾಲ್ಸ್​ ಬಳಿ ಪ್ರೇಮಿಗಳಿಬ್ಬರ ಶವ ಸಿಕ್ಕ ಮರುದಿನವೇ ಪ್ರಿಯಕರನ ತಂದೆ ಸಾವು! ಮನಕಲಕುತ್ತೆ ಸಾವಿನ ಕಾರಣ

ಹಿರಿಮಗನನ್ನು ಕೊಲ್ಲಲು ಕಿರಿಮಗನಿಗೆ ಸುಪಾರಿ ಕೊಟ್ಟ ಪಾಪಿ ತಂದೆ!ಕಾರಣ ಕೇಳಿದ್ರೆ ಬೆಚ್ಚಿಬೀಳ್ತೀರಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine − 7 =
Remember me
