ದಾವಣಗೆರೆ:ಕಾಲೇಜಿನ ಕಾಂಪೌಂಡ್​ನಿಂದ ಜಾರಿ ಬಿದ್ದು ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟಿರುವ ಘಟನೆ ಹರಿಹರದ ಕುರುಬರಹಳ್ಳಿಯ ಸಮೀಪದ ಮಾನ್ಯತಾ ಪಬ್ಲಿಕ್ ವಸತಿ ಕಾಲೇಜಿನಲ್ಲಿ ನಡೆದಿದೆ.
ಸಿನಿಕ್ಷಾ (16) ಮೃತಪಟ್ಟ ವಿದ್ಯಾರ್ಥಿನಿ. ಕಾಂಪೌಂಡ್​ನಿಂದ ಬಿದ್ದು ಸಿನಿಕ್ಷಾ ತೀವ್ರ ಗಾಯಗೊಂಡಿದ್ದಳು. ತಕ್ಷಣ ಆಕೆಯನ್ನು ದಾವಣಗೆರೆ ಬಾಪೂಜಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ.
ಇದನ್ನೂ ಓದಿ:ನಾನೇ ದೇವರು ನೀನೇಕೆ ಚರ್ಚಿಗೆ ಹೋಗ್ತೀಯಾ ಎಂದು ಮಗನಿಂದ ತಾಯಿಗೆ ಅವಾಜ್​! ಚರ್ಚಿನ ವಸ್ತುಗಳು ಧ್ವಂಸ
ಮೃತ ಸಿನಿಕ್ಷಾ ವಿಜಯನಗರ ಜಿಲ್ಲೆಯ ಹರಪನಹಳ್ಳಿ ಪಟ್ಟಣದ ಶಶಿಕಾಂತ್​ ಎಂಬುವರ ಪುತ್ರಿ. ಮಾನ್ಯತಾ ವಸತಿ ಕಾಲೇಜಿನಲ್ಲಿ ಸೈನ್ಸ್ ವಿಭಾಗದ ಪ್ರಥಮ ಪಿಯುಸಿಗೆ ಪ್ರವೇಶ ಪಡೆದಿದ್ದಳು. ಕಳೆದ ನಾಲ್ಕು ದಿನಗಳ ಹಿಂದಷ್ಟೇ ಕಾಲೇಜಿಗೆ ಹಾಜರಾಗಿದ್ದಳು. ಇದೀಗ ಅಕಾಲಿಕವಾಗಿ ಮೃತಪಟ್ಟಿದ್ದು, ಪಾಲಕರ ಆಕ್ರಂದನ ಮುಗಿಲು ಮುಟ್ಟಿದೆ. ಹರಿಹರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಇನ್ನು ಈ ಹಿಂದೆಯೂ ಇದೇ ಕಾಲೇಜಿನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಳು. 2015ರಲ್ಲಿ ವಿಜಯಪುರ ಜಿಲ್ಲೆಯ ಸಿಂದಗಿ ಮೂಲದ ಮಾಲಾಶ್ರೀ ಬಿರಾದಾರ ಎಂಬ‌ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಳು. ಈ ವೇಳೆ ಮಾಲಾಶ್ರೀ ಪಾಲಕರಿಂದ ಸಂಸ್ಥೆ ವಿರುದ್ಧ ದೂರು ದಾಖಲಾಗಿತ್ತು. ಆಗ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಸಂಸ್ಥೆಗೆ ಭೇಟಿ ಆಡಳಿತ ಮಂಡಳಿಯನ್ನು ತರಾಟೆಗೆ ತೆಗೆದುಕೊಂಡಿದ್ದರು.(ದಿಗ್ವಿಜಯ ನ್ಯೂಸ್​)
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ನಿಂದ ಗೀತಾ ಶಿವರಾಜ್ ಕುಮಾರ್ ಸ್ಪರ್ಧೆ? ದೊಡ್ಮನೆ ಸೊಸೆ ನೀಡಿದ ಸ್ಪಷ್ಟನೆ ಹೀಗಿದೆ…

ಜೀನಿಯಸ್​ ಮಾತ್ರ ಕೇವಲ 10 ಸೆಕೆಂಡ್​ಗಳಲ್ಲಿ ಈ ಫೋಟೋದಲ್ಲಿರುವ ಬೆಕ್ಕನ್ನು ಹುಡುಕಬಲ್ಲರು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 − 7 =
Remember me
