ಬೆಂಗಳೂರು:ಜಾನಪದ ತಜ್ಞ, ದಾವಣಗೆರೆಯ ಬಾಪೂಜಿ ವಿದ್ಯಾಸಂಸ್ಥೆಯ ನಿರ್ದೇಶಕರಾಗಿದ್ದ ಡಾ. ಎಂ.ಜಿ. ಈಶ್ವರಪ್ಪ (76) ಅನಾರೋಗ್ಯದಿಂದ ಇಂದು (ಜೂ.01) ಸಂಜೆ ಬೆಂಗಳೂರಿನಲ್ಲಿ ನಿಧನರಾದರು.
ಇದನ್ನೂ ಓದಿ:ಮಲೇರಿಯಾ ನಿಯಂತ್ರಣ ಮಂಗಳೂರು ಮಹಾ ನಗರ ಪಾಲಿಕೆಯಿಂದ ಮುಂಜಾಗ್ರತಾ ಕ್ರಮ
ಈಶ್ವರಪ್ಪ ಅವರಿಗೆ ಪತ್ನಿ, ಒಬ್ಬ ಪುತ್ರ, ಒಬ್ಬ ಪುತ್ರಿ ಇದ್ದಾರೆ. ಶ್ವಾಸಕೋಶ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಕಳೆದ ಒಂದು ವಾರದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಈಶ್ವರಪ್ಪ ಅವರು ಹಿರಿಯ ಜಾನಪದ ತಜ್ಞ ಜೀ.ಶಂ. ಪರಮಶಿವಯ್ಯ ಮಾರ್ಗದರ್ಶನದಲ್ಲಿ ‘ಚಿತ್ರದುರ್ಗ ಜಿಲ್ಲಾ ವ್ಯವಸಾಯ ಜಾನಪದ’ ವಿಷಯದ ಬಗ್ಗೆ ಪಿಎಚ್.ಡಿ. ಪಡೆದಿದ್ದರು.
ಕರ್ನಾಟಕ ಜಾನಪದ ಅಕಾಡೆಮಿ ಹಾಗೂ ನಾಟಕ ಅಕಾಡೆಮಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಅವರಿಗೆ ರಾಜ್ಯ ಸರ್ಕಾರದಿಂದ ‘ಜಾನಪದ ತಜ್ಞ’ ಪ್ರಶಸ್ತಿ ಬಂದಿತ್ತು. ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೂ ಭಾಜನರಾಗಿದ್ದರು. ದಾವಣಗೆರೆಯಲ್ಲಿ ಪ್ರತಿಮಾ ಸಭಾ ಸಂಸ್ಥೆಯನ್ನು ಕಟ್ಟಿ ಬೆಳೆಸುವ ಮೂಲಕ ರಂಗಭೂಮಿ ಕ್ಷೇತ್ರಕ್ಕೂ ಕೊಡುಗೆ ನೀಡಿದ್ದರು.
ಜಡೇಜಾ, ದುಬೆ ಅಲ್ವೇ ಅಲ್ಲ! ಇವರೇ ಟಿ20 ವಿಶ್ವಕಪ್​ನ ನಂ.1 ಆಲ್​ರೌಂಡರ್​ ಎಂದ ಮಂಜ್ರೇಕರ್​; ಯಾರು ಆ ಆಟಗಾರ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 4 =
Remember me
