ಮಂಗಳೂರು:ಮೂಡಬಿದಿರೆಯ ಆಳ್ವಾಸ್ ಕಾಲೇಜ್ ಕ್ಯಾಂಪಸ್​ನಲ್ಲಿ ನಡೆಯುತ್ತಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಅಂತರಾಷ್ಟೀಯ ಜಾಂಬೂರಿಯು ಅನೇಕ ಯುವ ಪ್ರತಿಭೆಗಳಿಗೆ ವೇದಿಕೆ ಒದಗಿಸುತ್ತಿದೆ. ಇದೀಗ ವಿಜ್ಞಾನ ಪ್ರದರ್ಶನ ವೇದಿಕೆಯು ವೀಕ್ಷಕರಿಗೆ ಹೊಸ ಹೊಸ ತಂತ್ರಜ್ಞಾನವನ್ನು ಪರಿಚಯಿಸುವ ಕೆಲಸ ಮಾಡುತ್ತಿದೆ.
ಜಾಂಬೂರಿಯ ವಿಜ್ಞಾನ ಪ್ರದರ್ಶನ ವೇದಿಕೆಯಲ್ಲಿ ದಾವಣಗೆರೆಯ ನಾಲ್ವರು ವಿದ್ಯಾರ್ಥಿಗಳು ಮಹಿಳೆಯರ ಸುರಕ್ಷತೆಗಾಗಿ ಫಿಯರ್‌ಲೆಸ್ ಬೆಲ್ಟ್‌ನ್ನು ಸಂಶೋಧಿಸಿ ಪರಿಚಯಿಸಿದ್ದಾರೆ. ಹೆಚ್ಚುತ್ತಿರುವ ಮಹಿಳಾ ದೌರ್ಜನ್ಯವನ್ನು ತಡೆಯುವ ಸಲುವಾಗಿ ದಾವಣಗೆರೆಯ ಜಿ.ಎಂ.ಐ.ಟಿ ಕಾಲೇಜಿನ ತೃತೀಯ ವರ್ಷದ ಎಲೆಕ್ಟ್ರಾನಿಕ್ ಮತ್ತು ಕಮ್ಯೂನಿಕೇಶನ್ ವಿದ್ಯಾರ್ಥಿಗಳಾದ ಕಾರ್ತಿಕ್.ಎಸ್.ಆರ್, ದರ್ಶನ್ ಜಿ.ಪಿ, ಜಾಫರ್ ಎಸ್ ಮತ್ತು ದೀಪ್ತಿ, ಸುರಕ್ಷಾ ಬೆಲ್ಟ್ ಮಾದರಿಯನ್ನು ರೂಪಿಸಿದ್ದಾರೆ.
ಬ್ಯಾಟರಿ ಮೂಲಕ ಚಾಲ್ತಿಯಾಗುವ ಈ ಬೆಲ್ಟ್​​ನಲ್ಲಿ ಮಹಿಳೆಯರ ರಕ್ಷಣೆಗಾಗಿ ಕರೆಂಟ್ ಶಾಕ್ ಮತ್ತು ಜಿ.ಪಿ.ಎಸ್ ತಂತ್ರಜ್ಞಾನವನ್ನು ಅಳವಡಿಕೆ ಮಾಡಲಾಗಿದೆ. ಮಹಿಳೆಯರಿಗೆ ಅಪಾಯ ಎದುರಾದ ಸಂದರ್ಭದಲ್ಲಿ ಬಟನ್ ಒತ್ತಿದರೆ ದೌರ್ಜನ್ಯ ಎಸಗಲು ಯತ್ನಿಸಿದ ವ್ಯಕ್ತಿಯ ಮೇಲೆ 5 ವೋಲ್ಟ್‌ ಕರೆಂಟ್ ಪ್ರವಹಿಸುವ ಮೂಲಕ ಸ್ವ-ರಕ್ಷಣೆಯನ್ನು ಒದಗಿಸುತ್ತದೆ. ಇದರಲ್ಲಿ ಅಳವಡಿಸಲಾದ ಜಿ.ಪಿ.ಎಸ್ ಮತ್ತು ರಕ್ಷಣಾ ತಂತ್ರಜ್ಞಾನವು ತುರ್ತು ಪರಿಸ್ಥಿತಿಯಲ್ಲಿ ಮಹಿಳೆಯ ಆಪ್ತರಿಗೆ ಹಾಗೂ ಪೊಲೀಸರಿಗೆ ಮಾಹಿತಿ ನೀಡುತ್ತದೆ. ಜೆತೆಗೆ ಮಹಿಳೆ ಇರುವ ಪ್ರದೇಶದ ನಿಖರ ಮಾಹಿತಿಯನ್ನು ರವಾನಿಸುವಂತೆ ಫಿಯರ್‌ಲೆಸ್ ಬೆಲ್ಟ್‌ನ್ನು ರೂಪುಗೊಳಿಸಲಾಗಿದೆ.
‘ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿರುವ ಹೊತ್ತಿನಲ್ಲಿ ಮಹಿಳೆಯರ ಸಂರಕ್ಷಣೆಗಾಗಿ ತಂತ್ರಜ್ಞಾನವನ್ನು ಬಳಸಿಕೊಳ್ಳುವ ಚಿಂತನೆಯಿಂದ ಫಿಯರ್ ಲೆಸ್ ಬೆಲ್ಟ್’ ಪರಿಚಯಿಸಲಾಗಿದೆ. ಇದು ಪ್ರಾರಂಭಿಕ ಹಂತದಲ್ಲಿದ್ದು ಇನ್ನಷ್ಟು ಅಭಿವೃದ್ಧಿಪಡಿಸಿ ಪ್ರತಿಯೊಬ್ಬ ಮಹಿಳೆಯರಿಗೂ ಸುರಕ್ಷತೆ ಒದಗಿಸುವಂತಾಗಬೇಕು ಎಂದು ಸಂಶೋಧನಾ ವಿದ್ಯಾರ್ಥಿ ಕಾರ್ತಿಕ್ ವಿಜಯವಾಣಿಗೆ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen + sixteen =
Remember me
