ಮಂಡ್ಯ:ಕೆಆರ್‌ಎಸ್ ಡ್ಯಾಂನ 20 ಕಿಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಡೆಸದಂತೆ ಆದೇಶ ಹೊರಡಿಸಿದ್ದ ಉಚ್ಚ ನ್ಯಾಯಾಲಯ ಇದೀಗ 6 ತಿಂಗಳೊಳಗೆ ಮತ್ತೆ ಟ್ರಯಲ್ ಬ್ಲಾಸ್ಟಿಂಗ್ ನಡೆಸಿ ವರದಿ ನೀಡುವಂತೆ ಆದೇಶದಲ್ಲಿ ತಿಳಿಸಿದೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದರು.ಟ್ರಯಲ್ ಬ್ಲಾಸ್ಟಿಂಗ್ ನಡೆಸುವ ಸಂಬಂಧ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ವಿವಿಧ ಇಲಾಖಾ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಾವೇರಿ ನೀರಾವರಿ ನಿಗಮ ನಿಯಮಿತ ಇಲಾಖೆಯವರು ಟ್ರಯಲ್ ಬ್ಲಾಸ್ಟಿಂಗ್ ಮಾಡಲು ಈಗಾಗಲೇ ತಜ್ಞರ ಸಮಿತಿಯನ್ನು ರಚನೆ ಮಾಡಿದ್ದು, ತಜ್ಞರ ಸಮಿತಿ ಭೇಟಿ ನೀಡಿ ಟ್ರಯಲ್ ಬ್ಲಾಸ್ಟಿಂಗ್‌ಗೆ ದಿನಾಂಕ ನಿಗದಿಪಡಿಸಬೇಕಿದೆ ಎಂದು ಸ್ಪಷ್ಟಪಡಿಸಿದರು.ಉಚ್ಚ ನ್ಯಾಯಾಲಯ ಆದೇಶದಂತೆ 20 ಕಿಮೀ ವ್ಯಾಪ್ತಿಯೊಳಗೆ ಯಾವುದೇ ಗಣಿಗಾರಿಕೆ ನಡೆಯದಂತೆ ನಿರ್ಬಂಧ ವಿಧಿಸಿ ನಿಗಾ ವಹಿಸಲಾಗುತ್ತಿದೆ ಎಂದರು.ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್, ಭೂ ವಿಜ್ಞಾನಿ ರೇಷ್ಮಾ, ಪಾಂಡವಪುರ ಎಸಿ ನಂದೀಶ್ ಇತರರಿದ್ದರು.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:three × 1 =
Remember me
