ಬೆಂಗಳೂರು:ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ಡಿಸಿಇಟಿ-2024ರ ತಾತ್ಕಾಲಿಕ ಸರಿ ಉತ್ತರಗಳನ್ನು ತನ್ನ ವೆಬ್‌ಸೈಟ್http://kea.kar.nic.inನಲ್ಲಿ ಪ್ರಕಟಿಸಿದೆ.
ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್ ಪ್ರಸನ್ನ ಅವರು ಸೋಮವಾರ ಪತ್ರಿಕಾ ಪ್ರಕಟಣೆ ನೀಡಿ, ಪ್ರಕಟಿಸಿರುವ ತಾತ್ಕಾಲಿಕ ಉತ್ತರಗಳಿಗೆ ಸಂಬಂಧಿಸಿದಂತೆ ಅಭ್ಯರ್ಥಿಗಳು ಆಕ್ಷೇಪಣೆ ಸಲ್ಲಿಸಲು ಬಯಸಿದಲ್ಲಿ, ಪ್ರಾಧಿಕಾರದ ಆನ್‌ಲೈನ್ ಪೋರ್ಟಲ್ ಮೂಲಕ ಮಾತ್ರವೇ ಜೂನ್ 26ರ ಬೆಳಿಗ್ಗೆ 11ರೊಳಗಾಗಿ ಸಲ್ಲಿಸಬಹುದು ಎಂದು ಸೂಚಿಸಿದ್ದಾರೆ.
ಆಕ್ಷೇಪಣೆಗಳನ್ನು ಸಲ್ಲಿಸುವ ಸಂದರ್ಭದಲ್ಲಿ ವರ್ಷನ್ ಕೋಡ್, ಪ್ರಶ್ನೆ ಪತ್ರಿಕೆಯಲ್ಲಿನ ಪ್ರಶ್ನೆ ಸಂಖ್ಯೆಯ ವಿವರಗಳನ್ನು ನಮೂದಿಸಿ, ಅದಕ್ಕೆ ಪೂರಕ ಸಮರ್ಥನೆಗಳನ್ನು ಪಿಡಿಎಫ್ ರೂಪದಲ್ಲಿ ಸಲ್ಲಿಸಬೇಕು. ಪ್ರಶ್ನೆ ಸಂಖ್ಯೆ ಅಥವಾ ವರ್ಷನ್ ಕೋಡ್ ನಮೂದಿಸದೆ ಅಥವಾ ಆಧಾರ ರಹಿತವಾಗಿ ಸಲ್ಲಿಸುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.
ವಿಷಯ ತಜ್ಞರ ಸಮಿತಿಯು ನಿರ್ಧರಿಸಿ ನೀಡುವ ಕೀ ಉತ್ತರಗಳನ್ನು ಅಂತಿಮ ಎಂದು ಪರಿಗಣಿಸಲಾಗುತ್ತದೆ. ವಿವರಗಳಿಗಾಗಿ ಅಭ್ಯರ್ಥಿಗಳು ಪ್ರಾಧಿಕಾರದ ವೆಬ್‌ಸೈಟ್‌ಗೆ ಭೇಟಿ ನೀಡಬಹುದು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − fourteen =
Remember me
