ಬೆಂಗಳೂರುಇಂಜಿನಿಯರಿಂಗ್ ಕೋರ್ಸ್ 2ನೇ ವರ್ಷ ಅಥವಾ 3ನೇ ಸೆಮಿಸ್ಟರ್‌ಗೆ ನೇರ ಪ್ರವೇಶ ನೀಡಲು ನಡೆಸಿದ ಡಿಸಿಇಟಿ-24 ಪರೀಕ್ಷೆಯ ಮೊದಲ ಸುತ್ತಿನ ಸೀಟು ಹಂಚಿಕೆ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ತನ್ನ ವೆಬ್‌ಸೈಟ್‌ನಲ್ಲಿ ಸೋಮವಾರ ಪ್ರಕಟಿಸಿದೆ.
ಚಾಯ್ಸ್ ಆಯ್ಕೆ ಮಾಡಿಕೊಳ್ಳಲು ಜು.24ರ ಬೆಳಿಗ್ಗೆ 11ಗಂಟೆವರೆಗೆ ಅವಕಾಶ ನೀಡಿದ್ದು, ಮೊದಲ ಸುತ್ತಿನ ಪ್ರವೇಶ ಪ್ರಕ್ರಿಯೆ ಜು.26ಕ್ಕೆ ಕೊನೆಯಾಗಲಿದೆ. ಛಾಯ್ಸ್-1 ಮತ್ತು 2 ಅನ್ನು ಆಯ್ಕೆ ಮಾಡಿಕೊಂಡವರು ಜು. 25ರ ಸಂಜೆ 4 ಗಂಟೆಯೊಳಗೆ ಶುಲ್ಕ ಪಾವತಿಸಿ, ಪ್ರವೇಶ ಪತ್ರ ಡೌನ್‌ಲೊಡ್ ಮಾಡಿಕೊಳ್ಳಬೇಕು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.
ಮೊದಲ ಸುತ್ತಿನಲ್ಲಿ ತಮಗೆ ಸಿಕ್ಕಿರುವ ಸೀಟು ಇಷ್ಟವಾದರೆ ಛಾಯ್ಸ್ -1 ಅನ್ನು ಆಯ್ಕೆ ಮಾಡಿ, ಶುಲ್ಕ ಪಾವತಿಸಿ, ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು. ಒಂದು ವೇಳೆ ಸಿಕ್ಕಿರುವ ಸೀಟು ತೃಪ್ತಿ ಇದ್ದ, ಇನ್ನೂ ಉತ್ತಮ ಸೀಟು ಬೇಕಾಗಿದೆ ಎನ್ನುವವರು ಛಾಯ್ಸ್-2 ಅನ್ನು ಆಯ್ಕೆ ಮಾಡಿಕೊಂಡು ಶುಲ್ಕ ಪಾವತಿಸಬೇಕು ಎಂದು ವಿವರಿಸಿದ್ದಾರೆ.
ಅಭ್ಯರ್ಥಿಯು ತನಗೆ ಮೊದಲ ಸುತ್ತಿನಲ್ಲಿ ದೊರಕಿರುವ ಸೀಟು ತೃಪ್ತಿಕರವಾಗದಿದ್ದರೆ ಮುಂದಿನ ಸುತ್ತಿನಲ್ಲಿ ಭಾಗವಹಿಸಲು ಛಾಯ್ಸ್-3 ಅನ್ನು ಆಯ್ಕೆ ಮಾಡಿಕೊಳ್ಳಬೇಕು. ಹಾಗೆಯೇ ಸಿಕ್ಕಿರುವ ಸೀಟು ತೃಪ್ತಿಯಾಗಿಲ್ಲ; ಮುಂದಿನ ಸುತ್ತಿನಲ್ಲೂ ಸೀಟು ತೆಗೆದುಕೊಳ್ಳಲು ಆಸಕ್ತಿ ಇಲ್ಲದಿದ್ದರೆ ಛಾಯ್ಸ್-4 ಅನ್ನು ಆಯ್ಕೆ ಮಾಡಿಕೊಂಡು ಇಡೀ ಪ್ರಕ್ರಿಯೆಯಿಂದ ಹೊರ ಹೋಗಬಹುದು. ಒಟ್ಟಿನಲ್ಲಿ ಛಾಯ್ಸ್ ಆಯ್ಕೆ ಮಾಡಿಕೊಳ್ಳುವಾಗ ಎಚ್ಚರದಿಂದ ಆಯ್ಕೆ ಮಾಡಿಕೊಳ್ಳಬೇಕು. ಎಲ್ಲವೂ ವೆಬ್ ಸೈಟ್‌ನಲ್ಲಿ ವಿವರವಾಗಿ ದಾಖಲಿಸಿದ್ದು, ಆ ಪ್ರಕಾರವೇ ಛಾಯ್ಸ್ ಆಯ್ಕೆ ಮಾಡಬೇಕು ಎಂದು ಅವರು ಸಲಹೆ ನೀಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − sixteen =
Remember me
