ಬೆಂಗಳೂರುಡಿಸಿಇಟಿ-24ರಲ್ಲಿ ಅರ್ಹತೆ ಹೊಂದಿದ ಅಭ್ಯರ್ಥಿಗಳಿಗೆ 2ನೇ ವರ್ಷದ ಅಥವಾ 3ನೇ ಸೆಮಿಸ್ಟರ್‌ನ ಇಂಜಿನಿಯರಿಂಗ್ ಕೋರ್ಸುಗಳ ಪ್ರವೇಶಕ್ಕೆ ಮತ್ತು ಮೊದಲನೇ ವರ್ಷದ ಆರ್ಕಿಟೆಕ್ಟರ್ ಕೋರ್ಸುಗಳಿಗೆ ಜು.9ರಂದು ಮೊದಲ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಆರಂಭವಾಗಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.
ಅಭ್ಯರ್ಥಿಗಳಿಗೆ ತಮಗೆ ಆಸಕ್ತಿ ಇರುವ ಎಲ್ಲ ಕೋರ್ಸುಗಳಿಗೂ ಇಚ್ಛೆಗಳನ್ನು ಆದ್ಯತಾ ಕ್ರಮದಲ್ಲಿ ದಾಖಲಿಸಲು ಜು.9ರಿಂದ 11ರವರೆಗೆ ಅವಕಾಶವಿರುತ್ತದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ತಿದ್ದುಪಡಿ, ಪರಿಶೀಲನೆ:
ಅಭ್ಯರ್ಥಿಗಳ ಹಿತದೃಷ್ಟಿಯಿಂದ ಅರ್ಜಿಗಳಲ್ಲಿನ ತಪ್ಪುಗಳ ತಿದ್ದುಪಡಿಗೆ ವೆಬ್ಸೈಟ್‌ನಲ್ಲಿ ಲಿಂಕ್ ಬಿಡುಗಡೆ ಮಾಡಿದ್ದು ಜುಲೈ 8ರ ಬೆಳಿಗ್ಗೆ 10ಗಂಟೆವರೆಗೆ ಅವಕಾಶ ನೀಡಲಾಗಿದೆ. ದಾಖಲೆಗಳ ಪರಿಶೀಲನೆ ಅಂದು ಬೆಳಿಗ್ಗೆ 11ರಿಂದ ಸಂಜೆ 4 ಗಂಟೆವರೆಗೆ ಮಲ್ಲೇಶ್ವರದ ಕೆಇಎ ಕಚೇರಿಯಲ್ಲಿ ನಡೆಯಲಿದೆ ಎಂದು ಅವರು ವಿವರಿಸಿದ್ದಾರೆ.
ಮೊದಲನೇ ಸುತ್ತಿನ ಸೀಟು ಹಂಚಿಗೆ ಮುನ್ನ ಅಭ್ಯರ್ಥಿಗಳು ದಾಖಲಿಸುವ ಇಚ್ಛೆ / ಆಯ್ಕೆಗಳೇ ಎಲ್ಲ ಸುತ್ತಿನ ಸೀಟು ಹಂಚಿಕೆಗೆ ಉಳಿಯುತ್ತದೆ. ಹೊಸದಾಗಿ ಇಚ್ಛೆ / ಆಯ್ಕೆಗಳನ್ನು ದಾಖಲಿಸಲು ಅಭ್ಯರ್ಥಿಗಳಿಗೆ ಅವಕಾಶವಿರುವುದಿಲ್ಲ. ಅಭ್ಯರ್ಥಿಗಳು ದಾಖಲಿಸಿದ ಮೇಲಿನ ಕ್ರಮಾಂಕದ ಇಚ್ಛೆ / ಆಯ್ಕೆಗಳನ್ನು ತೆಗೆದು ಹಾಕಲು ಅಥವಾ ಕ್ರಮಾಂಕಗಳನ್ನು ಬದಲಾಯಿಸಲು ಅವಕಾಶವಿರುತ್ತದೆ. ಹೊಸದಾಗಿ ಯಾವುದಾದರೂ ಕಾಲೇಜು ಅಥವಾ ಕೋರ್ಸುಗಳು ಸೀಟ್ ಮ್ಯಾಟ್ರಿಕ್ಸ್‌ಗೆ ಸೇರ್ಪಡೆಯಾದಲ್ಲಿ ಮಾತ್ರ ಹೊಸದಾಗಿ ಇಚ್ಛೆ / ಆಯ್ಕೆಗಳನ್ನು ದಾಖಲಿಸಲು ಅವಕಾಶ ಕಲ್ಪಿಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − 8 =
Remember me
