ಬೆಂಗಳೂರು: ರಾಜ್ಯದ ಕೋವಿಡ್‌ ಪರಿಸ್ಥಿತಿ ಹಾಗೂ ನಿರ್ವಹಣೆ ಬಗ್ಗೆ ರಾಜ್ಯ ಕೋವಿಡ್‌ ಕಾರ್ಯಪಡೆ ಮುಖ್ಯಸ್ಥರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಅವರು ಗುರುವಾರ ರಾಜ್ಯಪಾಲರನ್ನು ಭೇಟಿಯಾಗಿ ವಿವರಣೆ ನೀಡಿದರು.
ಕೋವಿಡ್‌ ಕಾರ್ಯಪಡೆಯ ನಿಕಟಪೂರ್ವ ಅಧ್ಯಕ್ಷ ಹಾಗೂ ಇನ್ನೊಬ್ಬ ಉಪ ಮುಖ್ಯಮಂತ್ರಿ  ಗೋವಿಂದ ಕಾರಜೋಳ ಅವರೊಂದಿಗೆ 1.30ಕ್ಕೆ ರಾಜಭವನಕ್ಕೆ ತೆರಳಿದ  ಡಾ.ಅಶ್ವತ್ಥನಾರಾಯಣ, ಈವರೆಗೂ ಸೋಂಕು ತಡೆಗಟ್ಟಲು ಲಾಕ್‌ಡೌನ್‌, ಲಸಿಕೆ ಅಭಿಯಾನ, ವೈದ್ಯಕೀಯ ಮೂಲಸೌಕರ್ಯ ಅಭಿವೃದ್ಧಿ, ಸಿಬ್ಬಂದಿ ನೇಮಕ ಸೇರಿದಂತೆ ಸರಕಾರ ಕೈಗೊಂಡಿರುವ ಎಲ್ಲ ಕ್ರಮಗಳ ಬಗ್ಗೆ ರಾಜ್ಯಪಾಲ ವಜೂಭಾಯಿ ವಾಲಾ ಅವರಿಗೆ ಸಮಗ್ರ  ಮಾಹಿತಿ ನೀಡಿದರು.
ಲಾಕ್‌ಡೌನ್‌ ನಂತರ ರಾಜ್ಯದಲ್ಲಿ ಸೋಂಕಿನ ಪಾಸಿಟಿವಿಟಿ ದರವೂ ಕಡಿಮೆಯಾಗಿ ಸಾವಿನ ಪ್ರಮಾಣವೂ ಕಡಿಮೆಯಾಗಿದೆ. ಇದರ ಜತೆಯಲ್ಲೇ 45 ವರ್ಷ ಮೀರಿದ ಮುಂಚೂಣಿ ಕಾರ್ಯಕರ್ತರು ಹಾಗೂ ಆದ್ಯತಾ ಗುಂಪಿಗೆ ಲಸಿಕೆ ನೀಡವ ಕೆಲಸ ನಡೆಯುತ್ತಿದೆ. ಇಡೀ ರಾಜ್ಯಾದ್ಯಂತ ಆಮ್ಲಜನಕ, ಔಷಧಿ, ರೆಮಿಡಿಸಿವಿರ್‌ ಕೊರತೆಯನ್ನು ನೀಗಿಸಲಾಗಿದೆ ಎಂದು ಡಿಸಿಎಂ ಅವರು ಅಂಕಿ- ಅಂಶಗಳ ಸಮೇತ ರಾಜ್ಯಪಾಲರಿಗೆ ವಿವರಣೆ ಸಲ್ಲಿಸಿದರು.
ಬ್ಲ್ಯಾಕ್‌ ಫಂಗಸ್‌ ಬಗ್ಗೆಯೂ ರಾಜ್ಯಪಾಲರಿಗೆ ಮಾಹಿತಿ ನೀಡಿದ ಡಿಸಿಎಂ ಅವರು, ಈ ಕಾಯಿಲೆಗೆ ಸಂಬಂಧಿಸಿದ ಔಷಧಿಗಳ ಕೊರತೆ ನಿವಾರಣೆಗೆ ಎಲ್ಲ ಪ್ರಯತ್ನ ನಡೆದಿದೆ. ನಿರಂತರವಾಗಿ ಕೇಂದ್ರ ಸರಕಾರದ ಜತೆ ಸಂಪರ್ಕದಲ್ಲಿದ್ದು, ಇಡೀ ಸರಕಾರ ಒಂದು ತಂಡದ ರೂಪದಲ್ಲಿ ಕೆಲಸ ಮಾಡುತ್ತಿದೆ ಎಂದು ರಾಜ್ಯಪಾಲರಿಗೆ ತಿಳಿಸಿದರು.
ಇದನ್ನೂ ಓದಿ;ಫೋಟೋ ಕ್ಲಿಕ್ಕಿಸುವವರೆಗೂ ಇದ್ದ ಜೋಶ್​ ಆಮೇಲೆ ಹಾರಿಹೋಯಿತು! ಫ್ಲಾಟ್​ ಒಳಗೆ ಲಾಕ್​ ಆಗಿದ್ದ ಲೇಡಿಸ್​ ಗ್ಯಾಂಗ್​ ಬಿಚ್ಚಿಟ್ಟ ಭಯಾನಕ ಸ್ಟೋರಿ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 4 =
Remember me
