ಬೆಂಗಳೂರು:ಶನಿವಾರ ರಾತ್ರಿ ಸಂಭವಿಸಿದ ಬೈಕ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿರುವ ಸ್ಯಾಂಡಲ್‌ವುಡ್ ನಟ ಸಂಚಾರಿ ವಿಜಯ್​ರ ಸಂಪೂರ್ಣ ಚಿಕಿತ್ಸಾ ವೆಚ್ಚ ಭರಿಸಲು ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಮುಂದೆ ಬಂದಿದ್ದಾರೆ.
ಸಂಚಾರಿ ವಿಜಯ್‌ ಚಿಕಿತ್ಸೆ ಪಡೆಯುತ್ತಿರುವ ಅಪೋಲೋ ಆಸ್ಪತ್ರೆಯ ಆಡಳಿತ ವರ್ಗದ ಮುಖ್ಯಸ್ಥರಿಗೆ ಇಂದು(ಸೋಮವಾರ) ಬೆಳಗ್ಗೆ ಖುದ್ದು ಡಿಸಿಎಂ ಅವರೇ ಕರೆ ಮಾಡಿ ವಿಜಯ್‌ ಅವರ ಯೋಗ-ಕ್ಷೇಮ ವಿಚಾರಿಸಿದರು. ಅಲ್ಲದೆ ಅವರ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ಡಾ. ಸಿ.ಎನ್.ಅಶ್ವತ್ಥನಾರಾಯಣ ಫೌಂಡೇಶನ್‌ ಭರಿಸುತ್ತದೆ ಎಂದು ಭರವಸೆ ನೀಡಿದರು.
ಸಂಚಾರಿ ವಿಜಯ್​ರ ಚಿಕಿತ್ಸೆಗೆ ಸಂಬಂಧಿಸಿದಂತೆ ಅವರ ಸಂಬಂಧಿಗಳಿಂದಾಗಲೀ ಅಥವಾ ಬೇರೆ ಯಾರಿಂದಲೂ ಹಣ ಪಾವತಿಸಿಕೊಳ್ಳದಂತೆ ಅಶ್ವತ್ಥನಾರಾಯಣ ಅವರು ಆಸ್ಪತ್ರೆ ಆಡಳಿತ ವರ್ಗಕ್ಕೆ ಸೂಚಿಸಿದ್ದಾರೆ.
ಅಪಘಾತದಲ್ಲಿ ಸಂಚಾರಿ ವಿಜಯ್​ರ ಮೆದುಳಿಗೆ ತೀವ್ರಪೆಟ್ಟಾಗಿದ್ದು, ವೈದ್ಯರು ಶಸ್ತ್ರಚಿಕಿತ್ಸೆ ಮಾಡಿದ್ದಾರೆ. ಸದ್ಯ ಪ್ರಜ್ಞಾಹೀನ ಸ್ಥಿತಿಯಲ್ಲಿ ಇದ್ದಾರೆ.
ಅಪಘಾತಕ್ಕೀಡಾದ ನಟ ಸಂಚಾರಿ ವಿಜಯ್ ಸ್ಥಿತಿ ಹೇಗಿದೆ?: ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ ಆಸ್ಪತ್ರೆ

ಯಾರಿಗೂ ತಿಳಿಯದಂತೆ ಪ್ರೇಯಸಿಯನ್ನ ಮನೆಯಲ್ಲೇ 10 ವರ್ಷ ಅಡಗಿಸಿಟ್ಟಿದ್ದ ಪ್ರಿಯಕರ! ಆ ಕೋಣೆಯ ರಹಸ್ಯ ಬಯಲಾಗಿದ್ದೇ ರೋಚಕ

ನನ್ನ ಮೇಲೆ ಅತ್ಯಾಚಾರ-ಕೊಲೆ ಯತ್ನ ನಡೆದಿದೆ, ಯಾರೊಬ್ಬರೂ ನೋವು ಆಲಿಸುತ್ತಿಲ್ಲ… ಎಂದು ಕಣ್ಣೀರಿಟ್ಟ ನಟಿ

38 ಹೆಂಡ್ತಿಯರ ಮುದ್ದಿನ ಗಂಡ, 89 ಮಕ್ಕಳ ತಂದೆ ಇನ್ನಿಲ್ಲ! ಇವರ ವೈವಾಹಿಕ ಬದುಕೇ ಕುತೂಹಲ

ದಾರಿ ತಪ್ಪಿದ ಮಗ, ಬಬ್ರುವಾಹನ, ಸಾರಥಿ.. ಸಿನಿಮಾ ನಿರ್ಮಾಪಕ ಕೆಸಿಎನ್​ ಚಂದ್ರಶೇಖರ್​ ನಿಧನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × two =
Remember me
