ಬೆಂಗಳೂರು:ಕೆಲ ದಿನಗಳ ಹಿಂದೆ ಪ್ರಕಟಗೊಂಡ ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಬಾಗಲಕೋಟೆ ನಿವಾಸಿ ಅಂಕಿತಾ ಚನ್ನಬಸಪ್ಪ ಹಾಗೂ ತೃತೀಯ ಸ್ಥಾನ ಪಡೆದ ಮಂಡ್ಯದ ತುಂಬಕೆರೆ ವಿದ್ಯಾರ್ಥಿ ನವನೀತ್​ರನ್ನು ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್​.ಸಿ. ಮಹದೇವಪ್ಪ ಸನ್ಮಾನಿಸಿದ್ದಾರೆ.
ಈ ಇಬ್ಬರು ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಬರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಓದಿ ರಾಜ್ಯಕ್ಕೆ ಪ್ರಥಮ ಹಾಗೂ ತೃತೀಯ ರ್‍ಯಾಂಕ್​ ಬಂದ ಕಾರಣ ಅವರನ್ನು ಸನ್ಮಾನಿಸಿ ಉನ್ನತ ವ್ಯಾಸಂಗಕ್ಕಾಗಿ ಸರ್ಕಾರದ ವತಿಯಿಂದ ಎಲ್ಲಾ ರೀತಿಯ ನೆರವನ್ನೂ ನೀಡುವುದಾಗಿ ಭರವಸೆ ನೀಡಿದ್ದಾರೆ.
ಈ ಬಾರಿಯ SSLC ಪರೀಕ್ಷೆಯಲ್ಲಿ 625 ಅಂಕಗಳನ್ನು ಗಳಿಸಿ ರಾಜ್ಯಕ್ಕೇ ಪ್ರಥಮ ಸ್ಥಾನ ಗಳಿಸಿದ ಬಾಗಲಕೋಟೆಯ ಸಮಾಜ ಕಲ್ಯಾಣ ಇಲಾಖೆಗೆ ಸೇರಿದ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿ ಕುಮಾರಿ ಅಂಕಿತ ಹಾಗೂ ತೃತೀಯ ಸ್ಥಾನ ಗಳಿಸಿದ ಮಂಡ್ಯದ ತುಂಬಕೆರೆ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿ ನವನೀತ್ ಅವರನ್ನು ಆತ್ಮೀಯವಾಗಿ ಸನ್ಮಾನಿಸಿದೆನು.1/2pic.twitter.com/hr0eAZqbKi
ಇದನ್ನೂ ಓದಿ:LSGvsDC; ಈ ಪಂದ್ಯದಲ್ಲಿ ಯಾರು ಗೆದ್ದರೆ ಆರ್​ಸಿಬಿ ಪಾಲಿಗೆ ಪ್ಲಸ್​
ಇದೇ ವೇಳೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ಅವರು ಕೂಡ ವಿದ್ಯಾರ್ಥಿಗಳಾದ ಅಂಕಿತಾ ಹಾಗೂ ನವನೀತ್​ರನ್ನು ಭೇಟಿ ಮಾಡಿ ಸನ್ಮಾನಿಸಿ ಸರ್ಕಾರದ ವತಿಯಿಂದ ಪ್ರಶಂಸನಾ ಪತ್ರ ನೀಡಿದರು. ಇದಲ್ಲದೆ ವಿದ್ಯಾರ್ಥಿಗಳಾದ ಅಂಕಿತಾಗೆ 5 ಲಕ್ಷ ರೂ., ನವನೀತ್​ಗೆ 2 ಲಕ್ಷ ರೂಪಾಯಿಗಳ ಚೆಕ್​ ವಿತರಿಸಿದರು.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಡಿಸಿಎಂ ಡಿ.ಕೆ. ಶಿವಕುಮಾರ್, SSLC ಪರೀಕ್ಷೆಯಲ್ಲಿ ರಾಜ್ಯಕ್ಕೇ ಪ್ರಥಮ ಸ್ಥಾನ ಪಡೆದ ಬಾಗಲಕೋಟೆಯ ಮುಧೋಳ ಮೂಲದ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಹಾಗೂ ಮೂರನೇ ಸ್ಥಾನ ಪಡೆದ ಮಂಡ್ಯದ ಕನ್ನಲಿ ಗ್ರಾಮದ ನವನೀತ್‌ ಅವರನ್ನು ಇಂದು ಭೇಟಿಯಾಗಿ ಸನ್ಮಾನಿಸಿ ಗೌರವಿಸಿದೆ. ಹಾಗೆಯೇ ಅವರ ಮುಂದಿನ ವಿದ್ಯಾಭ್ಯಾಸಕ್ಕಾಗಿ ಅಂಕಿತಾಗೆ 5 ಲಕ್ಷ ರೂ. ಹಾಗೂ ನವನೀತ್‌ಗೆ 2 ಲಕ್ಷ ರೂ. ಚೆಕ್‌ ವಿತರಿಸಿದೆ. ಸರ್ಕಾರಿ ಶಾಲೆಯ ಮಕ್ಕಳು ಯಾರಿಗೇನೂ ಕಡಿಮೆಯಿಲ್ಲ ಎಂಬುದನ್ನು ಈ ಇಬ್ಬರೂ ಮಕ್ಕಳು ನಿರೂಪಿಸಿದ್ದಾರೆ. ಮುಂದೆ ಕೂಡ ಇದೇ ರೀತಿ ಓದಿ ನಿಮ್ಮ ಶಾಲೆ, ಶಿಕ್ಷಕರು, ಪೋಷಕರಿಗೆ ಕೀರ್ತಿ ತನ್ನಿ ಎಂದು ಶುಭ ಹಾರೈಸಿದ್ದಾಗಿ ಬರೆದುಕೊಂಡಿದ್ದಾರೆ.
SSLC ಪರೀಕ್ಷೆಯಲ್ಲಿ ರಾಜ್ಯಕ್ಕೇ ಪ್ರಥಮ ಸ್ಥಾನ ಪಡೆದ ಬಾಗಲಕೋಟೆಯ ಮುಧೋಳ ಮೂಲದ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಹಾಗೂ ಮೂರನೇ ಸ್ಥಾನ ಪಡೆದ ಮಂಡ್ಯದ ಕನ್ನಲಿ ಗ್ರಾಮದ ನವನೀತ್‌ ಅವರನ್ನು ಇಂದು ಭೇಟಿಯಾಗಿ ಸನ್ಮಾನಿಸಿ ಗೌರವಿಸಿದೆ. ಹಾಗೆಯೇ ಅವರ ಮುಂದಿನ ವಿದ್ಯಾಭ್ಯಾಸಕ್ಕಾಗಿ ಅಂಕಿತಾಗೆ 5 ಲಕ್ಷ ರೂ. ಹಾಗೂ ನವನೀತ್‌ಗೆ 2 ಲಕ್ಷ ರೂ. ಚೆಕ್…pic.twitter.com/iFoqDXzjEe
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × three =
Remember me
