ಬೆಂಗಳೂರು:ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅತ್ತಿಬೆಲೆಯ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ ಅಗ್ನಿ ದುರಂತಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಗಳಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಲಾ 5 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದ್ದಾರೆ.
ಶನಿವಾರ ತಡರಾತ್ರಿ ದುರಂತ ನಡೆದ ಸ್ಥಳಕ್ಕೆ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು, ಸರ್ಕಾರದಿಂದ ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರವನ್ನು ನೀಡಲಾಗುವುದು ಎಂದು ಪ್ರಕಟಿಸಿದ್ದಾರೆ.
PHOTO | "I have spoken to CM Siddaramaiah over the phone regarding the incident. He expressed deep sorrow upon hearing about the tragedy and is en route from Mysore directly to the accident site. He is expected to arrive at around 10 AM (tomorrow). The government will provide a…pic.twitter.com/I8laTOruNu
ಇದನ್ನೂ ಓದಿ:ಜಿಹಾದಿಗಳು ನವರಾತ್ರಿ ಉತ್ಸವಗಳಲ್ಲಿ ಭಾಗಿಯಾಗದಂತೆ ನೋಡಿಕೊಳ್ಳಬೇಕು: ವಿಹಿಂಪ
ಬಳಿಕ ಮಾತನಾಡಿದ ಡಿ.ಕೆ. ಶಿವಕುಮಾರ್, ಇದೊಂದು ಘೋಷರ ದುರಂತ. ಅವಘಡದಲ್ಲಿ ಅಮಾಯಕರು ಮೃತಪಟ್ಟಿದ್ಧಾರೆ. ಪಟಾಕಿ ಗೋದಾಮಿನಲ್ಲಿ ಇನ್ನೂ ಕೆಲವರು ಸಿಲಕಿರುವ ಬಗ್ಗೆ ಶಂಕೆ ವ್ಯಕ್ತವಾಗುತ್ತಿದೆ. ಹಿಂಬದಿ ಬಾಗಿಲು ಒಡೆದು ಪರಿಶೀಲಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಘಟನೆ ನಡೆದಾಗ 30-40 ಮಂದಿ ಗೋದಾಮಿನಲ್ಲಿ ಇದ್ದರು, ಹೆಚ್ಚಿನವರು ತಮಿಳುನಾಡು ಮೂಲದವರು ಎಂದು ತಮಿಳುನಾಡು ಮೂಲದವರು ಎಂದು ತಿಳಿದು ಬಂದಿದೆ. ದುರಂತ ಸಂಭವಿಸಿದ ಸಮಯದಲ್ಲಿ ಕೆಲ ಗ್ರಾಹಕರು ಅಂಗಡಿಯಲ್ಲಿದ್ದರು ಎಂದು ವರದಿಯಾಗಿದೆ. ಪಟಾಕಿ ಅಂಗಡಿಗೆ ಅನುಮತಿ ಪಡೆಯಲಾಗಿದ್ದು, ಗೋದಾಮಿಗೆ ಯಾವುದೇ ಅನುಮತಿಯನ್ನು ಪಡೆದಿಲ್ಲ. ಘಟನೆಗೆ ಸಂಬಂಧಿಸಿದಂತೆ ಅಧಿಕಾರಿಗಳು ತನಿಖೆ ನಡೆಸಿ ವರದಿ ಸಲ್ಲಿಸಲಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:fourteen − three =
Remember me
