ಬೆಂಗಳೂರು:ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಉಪ ಮುಖ್ಯಮಂತ್ರಿ ಆದಮೇಲೆ ಕಿರುತೆರೆಯಲ್ಲೂ ಮಿಂಚುತ್ತಿದ್ದು, ಇದೀಗ ಇನ್ನೊಂದು ಕಾರ್ಯಕ್ರಮದಲ್ಲೂ ಕಾಣಿಸಿಕೊಳ್ಳಲಿದ್ದಾರೆ. ಆ ಕುರಿತು ಖುದ್ದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ ಮಾಹಿತಿ ಹಂಚಿಕೊಂಡಿದ್ದಾರೆ.
ಕಾಂಗ್ರೆಸ್ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದ್ದ ಡಿ.ಕೆ.ಶಿವಕುಮಾರ್ ಉಪ ಮುಖ್ಯಮಂತ್ರಿ ಆಗುತ್ತಿದ್ದಂತೆ, ನಟ-ನಿರ್ದೇಶಕ ರಮೇಶ್ ಅರವಿಂದ್ ನಡೆಸಿಕೊಡುವ ‘ವೀಕೆಂಡ್ ವಿದ್ ರಮೇಶ್’ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಪಾಲ್ಗೊಂಡಿದ್ದರು. ಆ ಮೂಲಕ ತಮ್ಮ ಇದುವರೆಗಿನ ಜೀವನದ ಮಹತ್ವದ ಘಟನೆಗಳನ್ನು ಡಿ.ಕೆ.ಶಿವಕುಮಾರ್ ಸಾರ್ವಜನಿಕವಾಗಿ ಹಂಚಿಕೊಂಡಿದ್ದರು.
ಇದನ್ನೂ ಓದಿ:ಊಟ-ತಿಂಡಿ ಬಿಟ್ಟು ಕಾದರೂ ಸಿಎಂ ಭೇಟಿ ಸಾಧ್ಯವಾಗದೆ ಕುಸಿದು ಬಿದ್ದ ಮಹಿಳೆ!
ಆ ಬಳಿಕ ಇನ್ನೊಮ್ಮೆ ಕಿರುತೆರೆ ಸ್ಟುಡಿಯೋಗೆ ಪ್ರವೇಶ ಮಾಡಿರುವ ಡಿ.ಕೆ.ಶಿವಕುಮಾರ್ ಮತ್ತೊಮ್ಮೆ ಮನೆಮನೆಯಲ್ಲೂ ಕಾಣಿಸಿಕೊಳ್ಳಲಿದ್ದಾರೆ. ಅರ್ಥಾತ್, ಕಿರುತೆರೆಯ ‘ಬೊಂಬಾಟ್ ಭೋಜನ’ ಕಾರ್ಯಕ್ರಮಕ್ಕೂ ಡಿಸಿಎಂ ಅತಿಥಿಯಾಗಿ ಹೋಗಿದ್ದಾರೆ. ಅಲ್ಲಿನ ಅನುಭವದ ಕುರಿತು ಅವರೇ ಮಾಹಿತಿ ಹಂಚಿಕೊಂಡು ಸಂತಸ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:2000 ರೂ. ನೋಟು ಹಿಂಪಡೆ ವಿಚಾರ: ಆರ್​ಬಿಐನಿಂದ ಮತ್ತೆ ಮನವಿ; ಇಲ್ಲಿದೆ ವಿವರ..
‘ನನ್ನ ಆತ್ಮೀಯ ಸ್ನೇಹಿತ‌‌ ಹಾಗೂ ನಟ ಸಿಹಿಕಹಿ‌ ಚಂದ್ರು ಅವರು ನಡೆಸಿಕೊಡುವ ಬೊಂಬಾಟ್ ಭೋಜನ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಪಾಲ್ಗೊಂಡು ರುಚಿಕರ ಆಹಾರ ಸವಿದೆ. ಪಾಕ ಪ್ರವೀಣರೂ ಆಗಿರುವ ಚಂದ್ರು ಅವರ ಕೈರುಚಿಯ ಅಡುಗೆ ಸವಿದು ಬಹಳ ಕಾಲವಾಗಿತ್ತು, ಅದಕ್ಕೆ ಕಾಲ ಕೈಗೂಡಿರುವುದು ಖುಷಿಯ ಸಂಗತಿ’ ಎಂದು ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.
ನನ್ನ ಆತ್ಮೀಯ ಸ್ನೇಹಿತ‌‌ ಹಾಗೂ ನಟ ಶ್ರೀ ಸಿಹಿಕಹಿ‌ ಚಂದ್ರು ಅವರು ನಡೆಸಿಕೊಡುವ ಬೊಂಬಾಟ್ ಭೋಜನ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಪಾಲ್ಗೊಂಡು ರುಚಿಕರ ಆಹಾರ ಸವಿದೆ. ಪಾಕ ಪ್ರವೀಣರೂ ಆಗಿರುವ ಚಂದ್ರು ಅವರ ಕೈರುಚಿಯ ಅಡುಗೆ ಸವಿದು ಬಹಳ ಕಾಲವಾಗಿತ್ತು, ಅದಕ್ಕೆ ಕಾಲ ಕೈಗೂಡಿರುವುದು ಖುಷಿಯ ಸಂಗತಿ.pic.twitter.com/9t7VsBirkC— DK Shivakumar (@DKShivakumar)August 5, 2023
ನನ್ನ ಆತ್ಮೀಯ ಸ್ನೇಹಿತ‌‌ ಹಾಗೂ ನಟ ಶ್ರೀ ಸಿಹಿಕಹಿ‌ ಚಂದ್ರು ಅವರು ನಡೆಸಿಕೊಡುವ ಬೊಂಬಾಟ್ ಭೋಜನ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಪಾಲ್ಗೊಂಡು ರುಚಿಕರ ಆಹಾರ ಸವಿದೆ. ಪಾಕ ಪ್ರವೀಣರೂ ಆಗಿರುವ ಚಂದ್ರು ಅವರ ಕೈರುಚಿಯ ಅಡುಗೆ ಸವಿದು ಬಹಳ ಕಾಲವಾಗಿತ್ತು, ಅದಕ್ಕೆ ಕಾಲ ಕೈಗೂಡಿರುವುದು ಖುಷಿಯ ಸಂಗತಿ.pic.twitter.com/9t7VsBirkC
ನಿದ್ರಿಸಲು ಯಾರಾದರೂ ಅಡ್ಡಿಪಡಿಸಿದರೆ ಅವರ ವಿರುದ್ಧ ಕೇಸು ದಾಖಲಿಸಬಹುದಾ?
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven + eight =
Remember me
