ಬೆಂಗಳೂರು:ಕಾಂಗ್ರೆಸ್​ ಪಕ್ಷ ಬಸ್​ ಇದ್ದಂತೆ ಒಮ್ಮೆ ಹತ್ತಿದರೆ ಕಡೆಯ ತನಕವೂ ಇರುವಂತಹ ದೃಢ ನಿರ್ಧಾರ ಮಾಡಬೇಕು. ಬಸ್ ಹತ್ತುವುದು, ಇಳಿಯುವುದು ಮಾಡಬಾರದು ಹಾಗೆ ಮಾಡಿದರೆ ನಮ್ಮ ಬೆಲೆ ಕಳೆದುಕೊಳ್ಳುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ಹೇಳಿದ್ದಾರೆ.
ಮಾಜಿ ಸಂಸದ, ಶಾಸಕ ಆಯನೂರು ಮಂಜುನಾಥ್​ ಹಾಗೂ ನಾಗರಾಜ್​ ಗೌಡ ಪಕ್ಷ ಸೇರ್ಪಡೆ ಕಾರ್ಯಕ್ರವನ್ನುದ್ದೇಶಿಸಿ ಮಾತನಾಡಿದ ಡಿ.ಕೆ. ಶಿವಕುಮಾರ್​ ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದೇವೆ ಎಂದರೆ ಪ್ರತಿ ನಿಲ್ದಾಣದಲ್ಲೂ ಬಸ್ ಇಳಿದು ಹತ್ತುವಂತೆ ಮಾಡುವುದಲ್ಲ ಎಂದಿದ್ದಾರೆ.
ಪಕ್ಷದಲ್ಲಿ ಹೆಚ್ಚು ಕಾಲ ಇದ್ದಷ್ಟು ಹಿರಿತನ, ಜವಾಬ್ದಾರಿ ಮತ್ತು ಗೌರವ ಬರುತ್ತದೆ. ಬರುವುದು, ಹೋಗುವುದು ಮಾಡಿದರೆ ನಾಯಕತ್ವಕ್ಕೂ ಧಕ್ಕೆಯಾಗುತ್ತದೆ. ಈ ಮಾತನ್ನು ಕೇವಲ ಇಂದು ಪಕ್ಷ ಸೇರ್ಪಡೆಯಾದ ಶಿವಮೊಗ್ಗ ಜಿಲ್ಲೆಯವರಿಗೆ ಮಾತ್ರ ಹೇಳುತ್ತಿಲ್ಲ, ರಾಜ್ಯದ ಸಮಸ್ತ ಕಾರ್ಯಕರ್ತರು, ಮುಖಂಡರಿಗೆ ಹೇಳುತ್ತಿದ್ದೇನೆ.
ಈಗ ನಾವು ಕೊಡುತ್ತಿರುವ ಗ್ಯಾರಂಟಿ ಯೋಜನೆಗಳನ್ನು ಬಿಜೆಪಿ- ಜನತಾದಳದವರಿಗೆ ನೀಡಲು ಸಾಧ್ಯವಾಯಿತೇ ಅರಣ್ಯ ಹಕ್ಕು, ಆದಿವಾಸಿಗಳ ಹಕ್ಕು ಸೇರಿದಂತೆ ಅನೇಕ ಕಾನೂನುಗಳನ್ನು ನೀಡಿದ್ದು ನಮ್ಮ ಕಾಂಗ್ರೆಸ್. ದೇಶದ ಎಲ್ಲಾ ಜಾತಿ, ಧರ್ಮಗಳ ಜನರ ಬದುಕಿನಲ್ಲಿ ಬದಲಾವಣೆ ತಂದಿದ್ದೇವೆ. ದಿವಂಗತ ಬಂಗಾರಪ್ಪ ಅವರು ಆಶ್ರಯ ಯೋಜನೆಗೆ ಹೊಸ ರೂಪ ನೀಡಿದರು, ಗ್ರಾಮ ದೇವತೆಗಳ ದೇವಾಲಯ ಜೀರ್ಣೋದ್ಧಾರಕ್ಕೆ ಆರಾಧನಾ ಯೋಜನೆ ಪ್ರಾರಂಭ ಮಾಡಿದ್ದೇ ಬಂಗಾರಪ್ಪ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ.
ಇದನ್ನೂ ಓದಿ:VIDEO| ಬೈಕ್​ ಶೋರೂಂನಲ್ಲಿ ಬೆಂಕಿ; 300ಕ್ಕೂ ಹೆಚ್ಚು ವಾಹನ ಅಗ್ನಿಗಾಹುತಿ
ಪಕ್ಷ ಸೇರ್ಪಡೆಯಾದ ಆಯನೂರು ಮಂಜುನಾಥ್ ಅವರು ಬಿಜೆಪಿಗೆ ಹೋದರು, ಜೆಡಿಎಸ್‌ ಸೇರಿದರು ಆದರೆ ಕಾಂಗ್ರೆಸ್ ಪಕ್ಷದ ಬಗೆಗಿನ ಒಲವು ಅವರನ್ನು ಮತ್ತೆ ಕರೆತಂದಿದೆ. ಎಲ್ಲಾ ನದಿಗಳು ಸಮುದ್ರ ಸೇರಿದಂತೆ ಎಲ್ಲರೂ ಕಾಂಗ್ರೆಸ್ ಸೇರಲೇ ಬೇಕು, ನಮ್ಮ ಪಕ್ಷ ಸಮುದ್ರ ಇದ್ದಂತೆ. ನಮ್ಮ ಪಕ್ಷ ಸೇರುವವರಿಗೆ ಯಾವುದೇ ಸ್ಥಾನಮಾನ ನೀಡುತ್ತೇವೆ ಎನ್ನುವ ಭರವಸೆ ನೀಡಿಲ್ಲ. ಅವರ ಶಕ್ತಿ, ಸಂಘಟನಾ ಸಾಮರ್ಥ್ಯ ನೋಡಿ ಪರಿಗಣಿಸಲಾಗುವುದು.
ಯಾರು ಪಕ್ಷದ ಬೆಳವಣಿಗೆಗೆ ತಳಮಟ್ಟದಿಂದ ಕೆಲಸ ಮಾಡಿರುತ್ತಾರೆ ಅವರಿಗೆ ಮೊದಲ ಆದ್ಯತೆ, ಹೊಸದಾಗಿ ಬಂದಿರುವವರು ಹಳಬರನ್ನು ತಳ್ಳಿ ಮುಂದೆ ಬರಲು ಅವಕಾಶ ನೀಡುವುದಿಲ್ಲ. ಕಾಂಗ್ರೆಸ್ ಪಕ್ಷ ತಾಯಿ ಇದ್ದಂತೆ, ಮೊದಲು ತಾಯಿ ಆನಂತರ ನಾವೆಲ್ಲಾ, ನಾನು ಮತ್ತು ಮುಖ್ಯಮಂತ್ರಿಗಳು ಸೇರಿ ತೀರ್ಮಾನ ಮಾಡಿದ್ದೇವೆ. ಇದು ಕೇವಲ ನನ್ನೊಬ್ಬನ ತೀರ್ಮಾನವಲ್ಲ ಎಂದಿದ್ದಾರೆ.
ಇಷ್ಟೊಂದು ಮಟ್ಟದಲ್ಲಿ ಪಕ್ಷ ಸೇರ್ಪಡೆಯಾಗುತ್ತಿರುವುದು ನೋಡಿ ಸಂತೋಷವಾಗುತ್ತಿದೆ. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕೆಲವೊಂದು ಕ್ಷೇತ್ರದಲ್ಲಿ ಸೋಷಿಯಲ್‌ ಎಂಜಿನಿಯರಿಂಗ್ ತಿಳಿದುಕೊಳ್ಳದೆ ಎಡವಟ್ಟಾಯಿತು. ಲೋಕಸಭೆಯಲ್ಲಿ ಸರಿಪಡಿಸಿಕೊಳ್ಳುತ್ತೇವೆ. ಕಾಂಗ್ರೆಸ್ ಪಕ್ಷ ಸೇರದೆ ಇಷ್ಟು ದಿನ ಮಾಡಿದ ತಪ್ಪನ್ನು ಮಾಡದೆ,‌ ಎಲ್ಲಾ ನಾಯಕರು ತಮ್ಮ ಕ್ಷೇತ್ರಗಳಲ್ಲಿ ಇಂದಿನಿಂದಲೇ ಪಕ್ಷ ಸಂಘಟನೆಗೆ ಮುಂದಾಗಿ ಎಂದು ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ಕರೆ ನೀಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − thirteen =
Remember me
