ಬೆಂಗಳೂರು:ಗ್ಯಾರಂಟಿ ವಿಚಾರದಲ್ಲಿ ಅನಗತ್ಯ ಗೊಂದಲ ಉಂಟು ಮಾಡುತ್ತಿರುವುದು ಬಿಜೆಪಿ ಮತ್ತು ಜೆಡಿಎಸ್​ನವರು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ಅವರು ಹೇಳಿದರು.
ಸದಾಶಿವನಗರ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸರ್ಕಾರದಿಂದ ಯಾರಿಗೆ ಒಂದು ರೂಪಾಯಿ ಹಣ ಕೊಟ್ಟರೂ ಅದಕ್ಕೆ ಲೆಕ್ಕ, ಹೊಣೆಗಾರಿಕೆ ಇರಬೇಕು. ಫಲಾನುಭವಿ ಆಗುವವರು ಮತದಾರರ ಗುರುತಿನ ಚೀಟಿ, ಬ್ಯಾಂಕ್ ಖಾತೆ, ಆಧಾರ್ ಕಾರ್ಡ್ ಹೊಂದಿರಬೇಕು. ಬೇರೆಯವರ ಬ್ಯಾಂಕ್ ಖಾತೆಗೆ ಹಣ ನೀಡಲಾಗುವುದಿಲ್ಲ ಎಂದರು.
ಇದನ್ನೂ ಓದಿ:ಕೋಚಿಂಗ್ ಕ್ಲಾಸ್​ ಮುಗಿಸಿಕೊಂಡು ಹೋಗುತ್ತಿದ್ದ​ ವಿದ್ಯಾರ್ಥಿನಿಯರ ಮೇಲೆ ಹರಿದ ಬೊಲೆರೋ
ಮನೆ ಯಜಮಾನಿ ಯಾರು ಎಂದು ಮನೆಯವರೇ ತೀರ್ಮಾನ ಮಾಡಬೇಕು. ಅವರ ಮನೆ ವಿಚಾರದಲ್ಲಿ ನಾವು ಹಸ್ತಕ್ಷೇಪ ಮಾಡುವುದಿಲ್ಲ. ಮತದಾರರ ಗುರುತಿನ ಚೀಟಿ, ಎಪಿಎಲ್, ಬಿಪಿಎಲ್ ಕಾರ್ಡ್​ಗಳಲ್ಲಿ ಯಾವ ಮನೆಯಲ್ಲಿ ಯಾರೆಲ್ಲಾ ಇದ್ದಾರೆ ಎಂದು ನಮಗೆ ಮಾಹಿತಿ ಇದೆ ಎಂದು ಹೇಳಿದರು.
ಬಿಜೆಪಿ, ಜನತಾ ದಳದವರಿಗೆ ಈ ಯೋಜನೆ ಜಾರಿಯನ್ನು ಸಹಿಸಿಕೊಳ್ಳಲು ಆಗುತ್ತಿಲ್ಲ. ಅವರ ಅಸೂಯೆಗೆ ಮದ್ದಿಲ್ಲ. ನಮ್ಮ ಯೋಜನೆ ಬಗ್ಗೆ ಮಾತನಾಡುವವರು ಮೊದಲು ಬಿಜೆಪಿಯವರ ಉದ್ಯೋಗ ಭರವಸೆ ಬಗ್ಗೆ ಮಾತಾಡಲಿ. ಎಲ್ಲರ ಖಾತೆಗೆ 15 ಲಕ್ಷ ಹಾಕಿಸಲಿ. ಆ ಬಗ್ಗೆ ಯಾಕೆ ಯಾರೂ ಕೇಳುತ್ತಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆ ಮಾಡುವವರನ್ನು ಬೇಡ ಎನ್ನಲು ಸಾಧ್ಯವೇ? ಎಂದರು.
ಇದನ್ನೂ ಓದಿ:ಸೋಶಿಯಲ್​​ ಮೀಡಿಯಾದಲ್ಲಿ ಫೋಟೋ ಪೋಸ್ಟ್ ಮಾಡಿದ್ದಕ್ಕೆ ಪತ್ನಿಗೆ ತ್ರಿವಳಿ ತಲಾಖ್ ನೀಡಿದ ಪತಿ
ತೆರಿಗೆ ಪಾವತಿದಾರರು ನಿಮಗೆ ಮತ ಹಾಕಿಲ್ಲವೇ ಎಂದು ಕೇಳಿದಾಗ, ‘ನಾವು ಬಡವರಿಗೆ ನೆರವು ನೀಡಲು ನಿರ್ಧರಿಸಿದ್ದೇವೆ. ತೆರಿಗೆ, ಜಿಎಸ್ಟಿ ಪಾವತಿದಾರರು ಈ ಯೋಜನೆ ಬೇಕು ಎಂದು ಕೇಳುತ್ತಿಲ್ಲ. ಅನೇಕರು ಈ ಯೋಜನೆ ಬೇಡ ಎಂದು ನಮಗೆ ಪತ್ರ ಬರೆದಿದ್ದಾರೆ. ವಿದ್ಯುತ್ ಗ್ಯಾರಂಟಿ ವಿಚಾರದಲ್ಲಿ ಬಾಡಿಗೆ ಮನೆಯವರ ಬಗ್ಗೆ ಅಧಿಕಾರಿಗಳು ಒಂದು ಆಯಾಮ ನೀಡಿದ್ದರು. ಆದರೆ ನಾವು ಆ ಬಗ್ಗೆ ಸ್ಪಷ್ಟನೆ ನೀಡಿದ್ದೇವೆ’ ಎಂದು ಹೇಳಿದರು.
ವೈದ್ಯರ ನಿರ್ಲಕ್ಷ್ಯ: ಗಾಯಾಳುವಿನ ತಲೆಯಲ್ಲಿ ಕಬ್ಬಿಣದ ನಟ್ ಬಿಟ್ಟು ಹಾಗೆಯೇ ಹೊಲಿಗೆ ಹಾಕಿದ್ರು…

ಇದು ಜಗತ್ತಿನ ಅತ್ಯಂತ ಹಳೆಯ ಸಂಗೀತ ಸಾಧನ: ಇಲ್ಲಿದೆ ದಿವ್ಜೆ ಬೇಬ್ ಕೊಳಲು ಕುರಿತ ಅಚ್ಚರಿ ಸಂಗತಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 5 =
Remember me
