ಬೆಂಗಳೂರು:ಸರ್ಕಾರ ಬೀಳಿಸಲು ಬಿಜೆಪಿ ರೂಪಿಸುತ್ತಿರುವ ಷಡ್ಯಂತ್ರ ಫಲಿಸುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ.
ಹೈದರಾಬಾದ್​ಗೆ ಶನಿವಾರ ತೆರಳುವ ಮೊದಲು ಸದಾಶಿವನಗರ ನಿವಾಸದ ಬಳಿ, ಮಂಡ್ಯದ ಶಾಸಕ ರವಿ ಗಣಿಗಾ ಅವರಿಗೆ ಬಿಜೆಪಿಯ ಆಮಿಷದ ಹೇಳಿಕೆ ಬಗ್ಗೆ ಮಾಧ್ಯಮಗಳು ಕೇಳಿದಾಗ ಅವರು ಈ ರೀತಿ ಪ್ರತಿಕ್ರಿಯಿಸಿದರು.
“ಈ ಷಡ್ಯಂತ್ರದ ಬಗ್ಗೆ ನಮಗೆ ಗೊತ್ತಿದೆ. ಇದರ ಹಿಂದೆ ದೊಡ್ಡ, ದೊಡ್ಡ ನಾಯಕರು ಇದ್ದಾರೆ. ಆದರೆ ಇದರಿಂದ ಏನೂ ಆಗುವುದಿಲ್ಲ” ಎಂದು ತಿಳಿಸಿದರು.
ಅನಗತ್ಯ ಹೇಳಿಕೆ ಕೊಟ್ಟರೆ ನೊಟೀಸ್ಪಕ್ಷದ ಶಾಸಕರು ಯಾರೇ ಆಗಲಿ ಪಕ್ಷದ ಆಂತರಿಕ ವಿಚಾರ, ಸರ್ಕಾರ ಹಾಗೂ ಅಧಿಕಾರದ ಬಗ್ಗೆ ಮಾಧ್ಯಮಗಳ ಮುಂದೆ ಅನಗತ್ಯ ಹೇಳಿಕೆ ನೀಡಬಾರದು ಎಂದು ಮನವಿ ಹಾಗೂ ಎಚ್ಚರಿಕೆ ನೀಡುತ್ತೇನೆ. ಇಷ್ಟರ ನಂತರವೂ ಹೇಳಿಕೆ ನೀಡಿದರೆ ವಿಧಿಯಿಲ್ಲದೆ ಅವರಿಗೆ ನೊಟೀಸ್ ನೀಡಬೇಕಾಗುತ್ತದೆ ಎಂದು ಡಿಕೆಶಿ ಎಚ್ಚರಿಕೆ ನೀಡಿದರು.
ಬಿ.ಎಸ್​. ಯಡಿಯೂರಪ್ಪ ಅವರ ಮಾಜಿ ಆಪ್ತ ಕಾರ್ಯದರ್ಶಿ ಎನ್​.ಆರ್​. ಸಂತೋಷ್​ ಅವರು ನಮ್ಮ ಶಾಸಕರನ್ನು ಸಂಪರ್ಕ ಮಾಡಿ 50 ಕೋಟಿ ರೂಪಾಯಿ ಆಮಿಷವೊಡ್ಡುತ್ತಿದ್ದಾರೆ ಎಂದು ಮಂಡ್ಯ ಕಾಂಗ್ರೆಸ್​ ಶಾಸಕ ಗಾಣಿಗ ರವಿ ಅವರು ಆರೋಪ ಮಾಡಿರುವುದು ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದೆ. ಸರ್ಕಾರವನ್ನು ಉರುಳಿಸಲು ಬಿಜೆಪಿ ತೆರೆಮರೆಯಲ್ಲಿ ಭಾರೀ ಕಸರತ್ತು ನಡೆಸುತ್ತಿದೆ ಎಂಬ ಆರೋಪವನ್ನು ಕಾಂಗ್ರೆಸ್​ ಮಾಡಿದೆ.
ಕಳುವಾದ ಮೊಬೈಲ್​ ಪತ್ತೆಹಚ್ಚುವಲ್ಲಿ ತೆಲಂಗಾಣ ಪೊಲೀಸರಿಗೆ ಮೊದಲ ಸ್ಥಾನ: ಕರ್ನಾಟಕಕ್ಕೆ ಎಷ್ಟನೇ ಸ್ಥಾನ?

ಕೇರಳದಲ್ಲಿ ಪ್ಯಾಲೆಸ್ತೀನ್​ ಪರ ನಡೆದ ಸಮಾವೇಶ ಉದ್ದೇಶಿಸಿ ಹಮಾಸ್​ ನಾಯಕ ಭಾಷಣ: ವಿವಾದ ಸ್ಫೋಟ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:17 − two =
Remember me
