ಬೆಂಗಳೂರು:ಇಂದು ಕೆಪಿಸಿಸಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, “ರಾಜ್ಯಪಾಲರು ತರಾತುರಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದ್ದಾರೆ. ಇದಕ್ಕೆ ನನ್ನ ಅಧ್ಯಕ್ಷತೆಯಲ್ಲಿ ನಡೆದ ಕಳೆದ ಸಚಿವ ಸಂಪುಟ ಸಭೆಯಲ್ಲಿ ನಾವು ರಾಜ್ಯಪಾಲರಿಗೆ ಕೆಲವು ಸಲಹೆಗಳನ್ನು ನೀಡಿದ್ದೇವೆ. ತನಿಖೆ ಇಲ್ಲದೆಯೇ ಈ ರೀತಿ ಆದೇಶ ಕೊಡುವುದು ತಪ್ಪು. ಇದನ್ನು ನಾವು ಖಂಡಿಸುತ್ತೇವೆ. ಆಗಸ್ಟ್ 31ರಂದು ರಾಜಭವನ ಚಲೋ ನಡೆಸಿ, ವಿಧಾನಸೌಧದ ಗಾಂಧಿ ಪ್ರತಿಮೆಯಿಂದ ರಾಜಭವನಕ್ಕೆ ಹೋಗಿ ಯಾವ ಯಾವ ಪೆಂಡಿಂಗ್ ಪ್ರಾಸಿಕ್ಯೂಷನ್‌ ಇದೆ ಅದನ್ನು ಜಾರಿಗೆ ತರಬೇಕು ಎಂದು ಮನವಿ ಸಲ್ಲಿಸುತ್ತೇವೆ. ಈ ಹಿನ್ನೆಲೆಯಲ್ಲಿ ಎಲ್ಲಾ ಶಾಸಕರು, ಸಚಿವರು, ಪರಿಷತ್ ಸದಸ್ಯರು ಭಾಗಿಯಾಗಬೇಕು” ಎಂದರು.
ಇದನ್ನೂ ಓದಿ:ಡೇರಿ ಕಾರ್ಯದರ್ಶಿಗಳ ಗುಜರಾತ್ ಪ್ರವಾಸ ಆರಂಭ
“ನಮ್ಮ ಬಿಗ್ ಬ್ರದರ್ ಕುಮಾರಸ್ವಾಮಿ ಅವರು ಸಾಚಾ ಕೆಲಸ ಮಾಡುವವರು, ಇವರ ವಿರುದ್ಧ 10 ವರ್ಷಗಳ ಹಿಂದೆಯೇ ಕೇಸ್ ದಾಖಲಾಗಿದೆ. 2023ರ ನವೆಂಬರ್ 21ರಂದು ಲೋಕಾಯುಕ್ತ ಎಸ್​ಐಟಿ ಅಧಿಕಾರಿಗಳು ಕೂಡ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ. ನಾವೇನೂ ತಿರುಚಿ ಮಾತಾಡುತ್ತಿಲ್ಲ. 218 ಪುಟಗಳ ತನಿಖಾ ವರದಿಯನ್ನು ರಾಜ್ಯಪಾಲರಿಗೆ SIT ನೀಡಿದೆ. ಬಹಳ ಸತ್ಯಕ್ಕೆ ಹೆಸರಾದವರು ಕೇಂದ್ರ ಸಚಿವ ಎಚ್​.ಡಿ. ಕುಮಾರಸ್ವಾಮಿ, ನಾನು ಸಹಿಯೇ ಮಾಡಲಿಲ್ಲ” ಎಂದು ಹೇಳಿದರು.
“ನನಗೆ ಅವರ ಹೇಳಿಕೆ ನೋಡಿ ಭಾರೀ ಆಶ್ಚರ್ಯವಾಯ್ತು. ಅವರ ಸಹಿ ಅಲ್ಲ ಅಂದಮೇಲೆ ಯಾರೋ ಫೋರ್ಜರಿ ಮಾಡಿದ್ದಾರೆ. ಸಹಿ ಫೋರ್ಜರಿ ಮಾಡಿದ್ದಾರೆ ಎಂದು ಯಾಕೆ ದೂರು ಕೊಟ್ಟಿಲ್ಲ? ನಕಲು ಆಗಿದ್ರೆ ಒಬ್ಬ ಪಿಸಿಗಾದರೂ ದೂರು ಕೊಡಬೇಕಲ್ವಾ. ಯಾರೇ ಆಗಿರಲಿ, ಫೋರ್ಜರಿ ಮಾಡಿದವರ ಬಗ್ಗೆ ದೂರು ಕೊಡಬೇಕು. ಈ ಹಿಂದೆ ನಾನು ಕುಮಾರಸ್ವಾಮಿ ಅವರ ಆಸ್ತಿ ವಿವರವನ್ನೆಲ್ಲ ಕೇಳಿದ್ದೆ. ಇವರ ಕೇಸ್​ಗಳು ನಮಗೂ ತಿಳಿದಿದೆ. ಅನ್ಯಾಯದ ವಿರುದ್ಧ ನಮ್ಮ ಹೋರಾಟ ನಡೆಯಲಿದೆ” ಎಂದು ಹೇಳಿದರು.
ಮಧ್ಯರಾತ್ರಿ ತಾಯಿ ಜತೆಗೆ ಮಲಗಿದ್ರೂ ಬಿಡಲಿಲ್ಲ! ಆಘಾತಕಾರಿಯಾಗಿದೆ ನಟಿ ಶ್ರೀದೇವಿಕಾ ಆರೋಪ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 + one =
Remember me
