ಬೆಂಗಳೂರು:ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ತಮಿಳುನಾಡು ಹಾಗೂ ಕರ್ನಾಟಕ ನಡುವಿನ ವಿವಾದಕ್ಕೆ ಮೇಕೆದಾಟು ಯೋಜನೆಯೊಂದೇ ಪರಿಹಾರ ಎಂದು ಉಪಮುಖ್ಯಮಂತ್ರಿ, ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್​ ಅಭಿಪ್ರಾಯಪಟ್ಟಿದ್ದಾರೆ.
ಶುಕ್ರವಾರ ಈ ಕುರಿತು ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್​ ಈ ವಿಚಾರವನ್ನು ಸುಪ್ರೀಂ ಕೋರ್ಟ್​ ಗಮನಕ್ಕೂ ತಂದಿದ್ದೇವೆ. ಮೇಕೆದಾಟು ಜಲಾಶಯ ನಿರ್ಮಾಣವಾಗಿದ್ದರೆ ಈ ಸಮಸ್ಯೆ ಉದ್ಭವವಾಗುತ್ತಿರಲಿಲ್ಲ ಎಂದು ಹೇಳಿದ್ದಾರೆ.
ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಬಂದರೆ ತಮಿಳುನಾಡಿಗೆ ನೀರು ಹರಿಸುವ ವಿಚಾರಕ್ಕೆ ಪರಿಹಾರ ಸಿಗುತ್ತದೆ. ಜಲಾಶಯ ನಿರ್ಮಾಣವಾದರೆ ಅದರಲ್ಲಿ ಸಂಗ್ರಹಿಸುವ ನೀರನ್ನು ಕುಡಿಯುವ ಹಾಗೂ ಬೇರೆ ಉದ್ಧೇಶಗಳಿಗೆ ಬಳಸಬಹುದು. ಉಳಿದಂತೆ ಅಗತ್ಯವಿದ್ದ ಸಂದರ್ಭಗಳಲ್ಲಿ ತಮಿಳುನಾಡಿಗೆ ನೀರು ಹರಿಸಬಹುದು ಎಂದಿದ್ದಾರೆ.
ಇದನ್ನೂ ಓದಿ:ಕಾವೇರಿ ಜಲವಿವಾದ; ತಮಿಳುನಾಡು ಮನವಿ ನಿರಾಕರಿಸಿದ ಸುಪ್ರೀಂ ಕೋರ್ಟ್​
ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ತಮಿಳುನಾಡು ಹಾಗೂ ಕರ್ನಾಟಕ ನಡುವಿನ ವಿವಾದಕ್ಕೆ ಮೇಕೆದಾಟು ಯೋಜನೆಯೊಂದೇ ಪರಿಹಾರ. ಈ ವಿಚಾರವನ್ನು ಸುಪ್ರೀಂ ಕೋರ್ಟ್​ ಗಮನಕ್ಕೂ ಸಹ ತಂದಿದ್ದೇವೆ. ಮೇಕೆದಾಟು ಜಲಾಶಯ ನಿರ್ಮಾಣವಾಗಿದ್ದರೆ ಈ ಸಮಸ್ಯೆ ಉದ್ಭವವಾಗುತ್ತಿರಲಿಲ್ಲ ಎಂದು ಹೇಳಿದ್ದಾರೆ.
ತಮಿಳುನಾಡು ತನ್ನ ಪಾಲಿನ ನೀರನ್ನು ಯಾವ ಉದ್ದೇಶಕ್ಕೆ ಬೇಕಾದರೂ ಬಳಸಬಹುದು. ಅದಕ್ಕೆ ನಮ್ಮ ಅಭ್ಯಂತರವಿಲ್ಲ. ತಮಿಳುನಾಡಿಗೆ ನೀರು ಹರಿಸುವ ವಿಚಾರವಾಗಿ ವಿರೋಧ ವ್ಯಕ್ತವಾಗುತ್ತಿದೆ. ಆದರೆ, ನಾವು ನ್ಯಾಯಾಲಯದ ಆದೇಶ ಪಾಲಿಸುವುದು ಅನಿವಾರ್ಯ ಎಂದು ಡಿಸಿಎಂ, ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್​​ ಕಾವೇರಿ ಜಲವಿವಾದದ ಕುರಿತು ಮಾತನಾಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 − two =
Remember me
