ಬೆಂಗಳೂರು:ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್​ ಪುತ್ರ ಸಂಜಯ್​ ಹಾಗೂ ಯಲಹಂಕ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಎಸ್.ಆರ್. ವಿಶ್ವನಾಥ್​ ಅವರ ಪುತ್ರಿ ಅಪೂರ್ವ ಅವರ ನಿಶ್ಚಿತಾರ್ಥವು ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಬುಧವಾರ ಜರುಗಿದೆ.
ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ದಂಪತಿ, ಸಚಿವ ಎಂ.ಸಿ. ಸುಧಾಕರ್, ಶಾಸಕ ಶರತ್​ ಬಚ್ಚೇಗೌಡ ಸೇರಿದಂತೆ ಅನೇಕರು ಪಾಲ್ಗೊಂಡು ಹಸಮಣೆ ಏರಲಿರುವ ನವಜೋಡಿಗೆ ಶುಭಹಾರೈಸಿದ್ದಾರೆ. ಇದೇ ವೇಳೆ ಡಿಸಿಎಂ ಡಿ.ಕೆ. ಶಿವಕುಮಾರ್​ ಹಾಗೂ ರಾಜ್ಯಪಾಲರಾದ ಥಾವರ್​ ಚೆಂದ್​ ಗೆಹ್ಲೋಟ್​​ ಜತೆಯಾಗಿ ಕುಳಿತು ಊಟ ಮಾಡಿದ್ದಾರೆ.
ಇದನ್ನೂ ಓದಿ:ತಮ್ಮ ವಿರುದ್ಧ ಸುದ್ದಿ ಪ್ರಸಾರ ಮಾಡದಂತೆ ಕೋರ್ಟ್​ ಮೆಟ್ಟಿಲೇರಿದ ಸಂಸದ ಬಸವರಾಜ್​ ಬೊಮ್ಮಾಯಿ
ಮುಡಾ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದ ವಿಚಾರ ರಾಜಭವನ ಹಾಗೂ ರಾಜ್ಯ ಸರ್ಕಾರದ ನಡುವಿನ ಸಂಘರ್ಷಕ್ಕೆ ನಾಂದಿ ಹಾಡಿತ್ತು. ಈ ಸಂಬಂಧ ಮಾತನಾಡಿದ್ದ ಡಿಸಿಎಂ ಡಿ.ಕೆ. ಶಿವಕುಮಾರ್​ ರಾಜ್ಯಪಾಲರ ವಿರುದ್ಧ ವಾಗ್ದಾಳಿ ನಡೆಸಿದ್ದರು.
ಇದೀಗ ಸಚಿವ ಬೈರತಿ ಸುರೇಶ್​ ಅವರ ಮಗನ ನಿಶ್ಚಿತಾರ್ಥದಲ್ಲಿ ಈ ಇಬ್ಬರು ಮುಖಾಮುಖಿಯಾಗಿದ್ದು, ಒಟ್ಟಿಗೆ ಕುಳಿತು ಭೋಜನ ಮಾಡಿದ್ದಾರೆ. ಭೋಜನದ ನಂತರ ಇಬ್ಬರು ಆತ್ಮೀಯವಾಗಿ ಕೆಲಕಾಲ ಮಾತುಕತೆ ನಡೆಸಿದ್ದಾರೆ. ಇದರ ಫೋಟೋ ಹಾಗೂ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:three × 4 =
Remember me
