ಬೆಂಗಳೂರು:ಅಂತಿಮ ಸೆಮಿಸ್ಟರ್/ವರ್ಷದ ಪದವಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ತಯಾರಿ ನಡೆದಿದ್ದು, ಬ್ಯಾಕ್​ಲಾಗ್ ವಿಷಯಗಳ ಪರೀಕ್ಷೆಗಳನ್ನೂ ನಡೆಸಲು ಎಲ್ಲ ವಿಶ್ವವಿದ್ಯಾಲಯಗಳಿಗೆ ಉನ್ನತ ಶಿಕ್ಷಣ ಸಚಿವರೂ ಆದ ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ ಸೂಚಿಸಿದ್ದಾರೆ.
ಸಿಇಟಿ ಸುಗಮವಾಗಿ ಪೂರ್ಣಗೊಂಡಿರು ವುದರಿಂದ ಎಲ್ಲ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರು, ರಸ್ತೆ ಸಾರಿಗೆ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರ ಜತೆ ವೀಡಿಯೋ ಸಂವಾದ ನಡೆಸಿದ ನಂತರ ಸುದ್ದಿಗಾರರ ಜತೆ ಮಾತನಾಡಿ, ಕರೊನಾ ಕಾರಣದಿಂದಾಗಿ ಅಂತಿಮ ವರ್ಷ/ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ ನಡೆಸಲು ತೀರ್ವನಿಸಲಾಗಿದೆ. ಈ ನಡುವೆ ಕೆಲ ವಿಶ್ವವಿದ್ಯಾಲಯಗಳು ಅಂತಿಮ ವರ್ಷದ ವಿದ್ಯಾರ್ಥಿಗಳು ಬಾಕಿ ಉಳಿಸಿಕೊಂಡಿರುವ (ಅನುತ್ತೀರ್ಣರಾಗಿರುವ) ಹಿಂದಿನ ಸೆಮಿಸ್ಟರ್​ಗಳ ವಿಷಯಗಳ ಪರೀಕ್ಷೆ ನಡೆಸುವುದಿಲ್ಲ ಎನ್ನುವ ತೀರ್ವನಕ್ಕೆ ಬಂದಿರುವ ಮಾಹಿತಿ ಸಿಕ್ಕಿದ್ದು, ಇದು ಅಕ್ಷಮ್ಯ ಅಪರಾಧ ಎಂದು ಹೇಳಿದರು.
ನಮ್ಮ ಉದ್ದೇಶ ಅಂತಿಮ ವರ್ಷದಲ್ಲಿ ಇರುವ ವಿದ್ಯಾರ್ಥಿಗಳು ಪದವಿ ಮುಗಿಸಿಕೊಂಡು ಹೊರಹೋಗಬೇಕು ಎನ್ನುವುದು. ಇಂಥ ಸನ್ನಿವೇಶ ದಲ್ಲಿ ಕೇವಲ ಅಂತಿಮ ವರ್ಷ/ಸೆಮಿಸ್ಟರ್ ಪರೀಕ್ಷೆ ನಡೆಸಿದರೆ ಸಮಸ್ಯೆ ಬಗೆಹರಿಯುವುದಿಲ್ಲ. ಬದಲಿಗೆ, ಹಿಂದಿನ ವರ್ಷಗಳ, ಅನುತ್ತೀರ್ಣಗೊಂಡಿರುವ ವಿಷಯಗಳ ಪರೀಕ್ಷೆಗಳಿಗೂ ಅವಕಾಶ ಮಾಡಿಕೊಡ ಬೇಕಾಗುತ್ತದೆ. ಈ ಕೆಲಸವನ್ನು ಎಲ್ಲ ವಿವಿಗಳು ಕಡ್ಡಾಯವಾಗಿ ಮಾಡಬೇಕು ಎಂದರು.
ಜಾಗ ಕೊಡಲು ಸೂಚನೆ:ರಾಜ್ಯದ ವಿವಿಧ ಜಿಲ್ಲೆಗಳ 33 ಪದವಿ ಕಾಲೇಜುಗಳಿಗೆ ಜಾಗದ ಸಮಸ್ಯೆ ಇದೆ. ಇಷ್ಟೂ ಕಾಲೇಜುಗಳಿಗೆ ಜಾಗ ಕೊಡಿಸುವ ಜವಾಬ್ದಾರಿ ಜಿಲ್ಲಾಧಿಕಾರಿಗಳಿಗೆ ಸಂಬಂಧಿಸಿದ್ದು. ಬಾಗಲಕೋಟೆ ಜಿಲ್ಲೆಯೊಂದರಲ್ಲೇ ಆರು ಪದವಿ ಕಾಲೇಜುಗಳಿಗೆ ನಿವೇಶನವೇ ಕೊಟ್ಟಿಲ್ಲ ಎಂದು ಡಿಸಿಎಂ ಅಸಮಾಧಾನ ವ್ಯಕ್ತಪಡಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಬಾಗಲಕೋಟೆ ಡಿಸಿ ಕ್ಯಾಪ್ಟನ್ ರಾಜೇಂದ್ರ, ಇಲಾಖೆಯ ಅಧಿಕಾರಿಗಳು ಪ್ರಸ್ತಾವನೆ ಸಲ್ಲಿಸಿದರೆ ತಕ್ಷಣವೇ ಜಾಗ ಕೊಡಿಸುವುದಾಗಿ ತಿಳಿಸಿದರು. ತಕ್ಷಣ ಪ್ರಸ್ತಾವನೆ ಸಲ್ಲಿಸುವಂತೆ ಸಂಬಂಧಪಟ್ಟ ಅಧಿಕಾರಿಗೆ ಡಿಸಿಎಂ ಸೂಚಿಸಿದರು. ಐದು ಡಿಪ್ಲೊಮಾ ಕಾಲೇಜು ಮತ್ತು 28 ಐಟಿಐ ಕಾಲೇಜುಗಳಿಗೆ ರಾಜ್ಯದ ವಿವಿಧೆಡೆ ಜಾಗದ ಕೊರತೆ ಇದ್ದು, ತಕ್ಷಣ ಜಿಲ್ಲಾಧಿಕಾರಿಗಳು ಗಮನ ನೀಡಬೇಕು ಎಂದು ಡಿಸಿಎಂ ಹೇಳಿದರು.
ಸಿಇಟಿ ಯಶಸ್ಸಿಗೆ ಕೃತಜ್ಞತೆ:ಕರೊನಾ ಸಂಕಷ್ಟದ ಸಂದರ್ಭದಲ್ಲಿಯೂ ಸಿಇಟಿಯನ್ನು ಯಶಸ್ವಿಯಾಗಿ ನಡೆಸಲು ಕಾರಣರಾದ ಸರ್ಕಾರದ ಎಲ್ಲ ಹಂತದ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ ಡಾ.ಸಿ.ಎನ್.ಅಶ್ವತ್ಥನಾರಾಯಣ ಕೃತಜ್ಞತೆ ಸಲ್ಲಿಸಿದರು. ಪರೀಕ್ಷೆ ಯಶಸ್ವಿಯಾಗಿ ನಡೆಸಲು ಕಾರಣರಾದ ವಿದ್ಯಾರ್ಥಿಗಳು ಮತ್ತು ಅವರ ಪಾಲಕರಿಗೂ ಕೃತಜ್ಞತೆ ಸಲ್ಲಿಸಿದರು.
ನಾವು ಪರೀಕ್ಷೆ ನಡೆಸಿದ ನಂತರ ನಮ್ಮದೇ ನಿಯಮಗಳನ್ನು ಮುಂದಿಟ್ಟುಕೊಂಡು ಅರುಣಾಚಲ ಪ್ರದೇಶದಲ್ಲಿ ಲೋಕಸೇವಾ ಆಯೋಗದ ಪರೀಕ್ಷೆಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಹಾಗೆಯೇ ಕೆಪಿಎಸ್​ಸಿ ಕೂಡ ಪರೀಕ್ಷೆ ನಡೆಸುವುದಾಗಿ ಹೇಳಿದೆ. ಹೀಗೆ ಅನೇಕರಿಗೆ ಮಾದರಿಯಾದಂತಹ ಕೆಲಸವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಾಡಿರುವುದು ನಿಜಕ್ಕೂ ಮೆಚ್ಚುವಂತಹದ್ದು.
| ಡಾ.ಸಿ.ಎನ್.ಅಶ್ವತ್ಥನಾರಾಯಣ ಡಿಸಿಎಂ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 1 =
Remember me
