ಬೆಂಗಳೂರು: ಸಮುದಾಯವಾರು ಮೂರು ಡಿಸಿಎಂ ಆಗಬೇಕು ಅನ್ನುವ ವಿಚಾರದಲ್ಲಿ ತಪ್ಪೇನಿದೆ ? ಪಕ್ಷದ ಹಿತದೃಷ್ಟಿಯಿಂದ ಪ್ರಸ್ತಾಪ ಮಾಡಿದ್ದೇನೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ತಮ್ಮ‌ ಮಾತನ್ನು ಸಮರ್ಥಿಸಿಕೊಂಡಿದ್ದಾರೆ.
ಹೈಕಮಾಂಡ್‌ಗೆ ಸರಿ ಅನ್ನಿಸಿದರೆ ಮಾಡುತ್ತಾರೆ,ಬೇಡ ಅಂದ್ರೆ ಬಿಡ್ತಾರೆ ಆದರೆ, ಸಿದ್ದರಾಮಯ್ಯನವರು ಈ ಮಾತನ್ನು ನನ್ನಿಂದ ಹೇಳಿಸುತ್ತಿದ್ದಾರೆ ಅನ್ನುವುದು ತಪ್ಪು. ನಾನು ಈ ವಿಚಾರವಾಗಿ ಸಿದ್ದರಾಮಯ್ಯರನ್ನು ಭೇಟಿ ಮಾಡೇ ಇಲ್ಲ ಎಂದರು.
ಹೆಚ್ಚು ಡಿಸಿಎಂ ಮಾಡಿದರೆ ಡಿ.ಕೆ ಶಿವಕುಮಾರ್ ಪ್ರಾಮುಖ್ಯತೆ ಕಡಿಮೆಯಾಗುತ್ತೆ ಅನ್ನೋದೂ ತಪ್ಪು. ಮುಂದಿನ ಲೋಕಸಭಾ ಚುನಾವಣೆ ಬಹಳ ಪ್ರಮುಖವಾದುದು. ಅದರ ಗೆಲುವಿಗಾಗಿ ಈ ಸೂತ್ರ ಹೇಳಿದ್ದೇನೆಯೇ ಹೊರತು, ಬೇರೆ ಯಾವ ಉದ್ದೇಶ ಇಲ್ಲ ಎಂದರು.
ಇವತ್ತಿನ ಚುನಾವಣಾ ವ್ಯವಸ್ಥೆ ನೋಡಿದಾಗ ಜಾತಿ ಬಹಳ ಪ್ರಾಮುಖ್ಯತೆ ವಹಿಸುತ್ತಿದೆ. ಆದ್ದರಿಂದ ಸಮುದಾಯವಾರು ಮೂರು ಡಿಸಿಎಂ ಇದ್ರೆ ಒಳ್ಳೆಯದು ಎನ್ನುವುದು ನನ್ನ ಅಭಿಪ್ರಾಯ.
ನಾನು ನನ್ನ ಅಭಿಪ್ರಾಯಕ್ಕೆ ಈಗಲೂ ಬದ್ಧನಾಗಿದ್ದೇನೆ.ಯಾವ ಚಾಲೆಂಜ್ ಬೇಕಾದರೂ ಎದುರಿಸಲು ಸಿದ್ಧನಿದ್ದೇನೆ. ನನ್ನ ಹೇಳಿಕೆಯಿಂದ ನಾನು ದೂರ ಸರಿಯೋ ಮಾತೇ ಇಲ್ಲ ಎಂದ ಅವರು ಲೋಕಸಭೆ ಚುನಾವಣೆ ಬಳಿಕ ಕೆಲವೊಮ್ಮೆ ಸರ್ಕಾರಗಳನ್ನೇ ವಿಸರ್ಜನೆ ಮಾಡಿದ ಉದಾಹರಣೆ ಇದೆ. ಬಿಡಿ ಜತ್ತಿ, ರಾಮಕೃಷ್ಣ ಹೆಗಡೆ ಕಾಲದಲ್ಲೆಲ್ಲ ಇದು ನಡೆದಿದೆ ಈಗಲೂ ಹಾಗೇ ಆಗೋದಿಲ್ಲ ಎನ್ನುವುದಕ್ಕೆ ಗ್ಯಾರಂಟಿ ಏನಿದೆ ?ಹೀಗಾಗಿ ಸಮುದಾಯವಾರು ಡಿಸಿಎಂ ಸ್ಥಾನ ನೀಡಬೇಕು ಎಂದರು.
ಡಿಕೆಶಿ ಹೇಳಿಕೆಗೆ ನಾನು ವಿರೋಧಿಸುವುದೂ ಇಲ್ಲ ಸಹಮತವೂ ಇಲ್ಲ ಎಂದು ವಿಶೇಷ ಅರ್ಥ ಬರುವ ಅಭಿಪ್ರಾಯ ನೀಡಿದರು.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:5 + fifteen =
Remember me
