ಬೆಂಗಳೂರು:ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರಾಜಧಾನಿ ಬೆಂಗಳೂರಿನ ಅಂದರೆ ಬೃಹತ್ ಬೆಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ಸಂಸದರು-ಶಾಸಕರ ಸಭೆ ಕರೆದಿದ್ದು, ಸಂಬಂಧಿತ ಜನಪ್ರತಿನಿಧಿಗಳೆಲ್ಲೂ ಹಾಜರಾಗಬೇಕು ಎಂಬ ಸಂದೇಶವನ್ನು ರವಾನಿಸಿದ್ದಾರೆ.
ಇದೇ ಜೂ. 5ರ ಸೋಮವಾರ ವಿಧಾನಸೌಧದಲ್ಲಿ ಈ ಸಭೆ ನಡೆಯಲಿದ್ದು, ಬಿಬಿಎಂಪಿ ವ್ಯಾಪ್ತಿಯ ಎಲ್ಲ ಸಂಸದರು, ಶಾಸಕರು ಹಾಗೂ ವಿಧಾನಪರಿಷತ್ ಸದಸ್ಯರು ಈ ಸಭೆಯಲ್ಲಿ ಪಾಲ್ಗೊಳ್ಳಬೇಕು ಎಂದು ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಇದನ್ನೂ ಓದಿ:ವೀರ ಸಾವರ್ಕರ್ ಹೆಸರಿನ ಕಾರ್ಯಕ್ರಮಕ್ಕೆ ಸರ್ಕಾರದಿಂದ ತಡೆ?; ಕೊನೆಗೂ…
ಇತ್ತೀಚೆಗೆ ಬೆಂಗಳೂರು ನಗರದಲ್ಲಿ ಬಿದ್ದ ಭಾರಿ ಮಳೆಯಿಂದ ಕೆಲವು ಪ್ರದೇಶಗಳಲ್ಲಿ ಅನಾಹುತಗಳು ಸಂಭವಿಸಿದ್ದು, ಅಲ್ಲದೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಪ್ರವಾಹದಿಂದ ಉಂಟಾಗಬಹುದಾದ ಹಾನಿಗಳನ್ನು ತಡೆಗಟ್ಟಲು ತೆಗೆದುಕೊಂಡಿರುವ ಮತ್ತು ತೆಗೆದುಕೊಳ್ಳಬಹುದಾದ ಮುಂಜಾಗ್ರತಾ ಕ್ರಮಗಳು ಹಾಗೂ ಬೆಂಗಳೂರಿನ ನಾಗರಿಕರು ಎದುರಿಸುತ್ತಿರುವ ಇತರೆ ಸಮಸ್ಯೆಗಳ ಬಗ್ಗೆ ಚರ್ಚಿಸಲು ಈ ಸಭೆ ಕರೆಯಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಇದನ್ನೂ ಓದಿ:ಕಾಂಗ್ರೆಸಿಗರಿಂದ ಕಾನೂನು ಕಿರುಕುಳ; ಬಿಜೆಪಿ ಕಾರ್ಯಕರ್ತರಿಗಾಗಿ ಹೆಲ್ಪ್​ಲೈನ್​: ಸಂಸದ ತೇಜಸ್ವಿ ಸೂರ್ಯ
ಬೆಂಗಳೂರು ನಗರದ ಹೆಗ್ಗುರುತನ್ನು ಮರುಸ್ಥಾಪಿಸಿ ನಗರದ ಪ್ರತಿಷ್ಠೆಯನ್ನು ಮತ್ತಷ್ಟು ಹೆಚ್ಚು ಮಾಡುವ ಕುರಿತು, ಬಿಬಿಎಂಪಿ ವ್ಯಾಪ್ತಿಯ ಸಂಸದರು, ಶಾಸಕರು ಹಾಗೂ ವಿಧಾನಪರಿಷತ್ ಸದಸ್ಯರಿಂದ ಅಭಿಪ್ರಾಯ-ಸಲಹೆಗಳನ್ನು ಪಡೆದುಕೊಳ್ಳಲು ಈ ಸಭೆ ಕರೆಯಲಾಗಿದೆ ಎಂದೂ ಅವರು ಜನಪ್ರತಿನಿಧಿಗಳಿಗೆ ಪತ್ರಮುಖೇನ ಕೇಳಿಕೊಂಡಿದ್ದಾರೆ.
ಯುವನಿಧಿ ಯೋಜನೆ ಅನುಷ್ಠಾನಕ್ಕೆ ಆದೇಶ; ಏನಿದೆ ಷರತ್ತು? ತಪ್ಪಿಗೆ ದಂಡವೂ ಇದೆ ಎಚ್ಚರಿಕೆ!

ಒಡಿಶಾ ರೈಲು ಅಪಘಾತ: ರೈಲಿಲ್ಲದೆ ಕಂಗಾಲಾದ ಕರ್ನಾಟಕ ವಾಲಿಬಾಲ್ ತಂಡ; ಲಾಡ್ ಸೂಚನೆ ಮೇರೆಗೆ ವಿಮಾನದಲ್ಲಿ ವ್ಯವಸ್ಥೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five + 16 =
Remember me
