ಬೆಂಗಗಳೂರು: ಮೂರು ಡಿಸಿಎಂ ಹುದ್ದೆ ಸೃಷ್ಟಿ ವಿಚಾರವಾಗಿ ಕಾರ್ಮಿಕ‌ ಸಚಿವ ಸಂತೋಷ್ ಲಾಡ್ ಪ್ರತಿಕ್ರಿಯೆ ನೀಡಿದ್ದು, ಹೈಕಮಾಂಡ್ ಅಭಿಪ್ರಾಯವೇ ನಮ್ಮ ಅಭಿಪ್ರಾಯವಾಗಿದೆ ಎಂದಿದ್ದಾರೆ.ಪಕ್ಷಕ್ಕೆ ಇದು ಅನುಕೂಲಕರವೆಂದು ಹೈಕಮಾಂಡ್ ನಿರ್ಧರಿಸಿದರೆ ಅವರಿಗೆ ಬಿಟ್ಟಿದ್ದು. ಪಕ್ಷಕ್ಕೆ ಅಗತ್ಯವಿದೆ ಎಂದು ಕಂಡುಬಂದರೆ ನಿರ್ಧರಿಸಬಹುದು. ನಮಗೆ ಹೈಕಮಾಂಡ್ ಸುಪ್ರೀಂ. ಅವರು ಏನೇ ನಿರ್ಧಾರ ಮಾಡಿದರೂ ಸ್ವಾಗತಿಸುತ್ತೇವೆ ಎಂದರು.ಸಹಕಾರ ಸಚಿವ ಕೆ.ಎನ್ ರಾಜಣ್ಣ ಕಳೆದ ವಾರ ನೀಡಿದ ಡಿಸಿಎಂ ಹುದ್ದೆ ಸೃಷ್ಟಿ ಮಾಡಬೇಕೆಂಬ ಹೇಳಿಕೆ ನೀಡಿದ್ದು, ಸಿದ್ದರಾಮಯ್ಯ ಸಂಪುಟದ ಸಾಕಷ್ಟು ಮಂದಿ ರಾಜಣ್ಣ ಅಭಿಪ್ರಾಯಕ್ಕೆ ದನಿಗೂಡಿದ್ದಾರೆ.ಗೃಹ ಸಚಿವ ಪರಮೇಶ್ವರ, ಸತೀಶ್ ಜಾರಕಿಹೊಳಿ, ನಾಗೇಂದ್ರ ಕೂಡ ಒಲವು ವ್ಯಕ್ತಪಡಿಸಿದ್ದರು. ಇದೀಗ ಸಂತೋಷ್ ಲಾಡ್ ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎನ್ನುವ ಮೂಲಕ‌ ತಟಸ್ಥ ಅಭಿಪ್ರಾಯ ನೀಡಿದ್ದಾರೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:five × one =
Remember me
