ಬೆಂಗಳೂರು:ಕೋವಿಡ್ ಹಿನ್ನೆಲೆಯಲ್ಲಿ ಶಾಲೆ ಆರಂಭ ವಿಳಂಬವಾಗುತ್ತಿದ್ದು, ವಿದ್ಯಾರ್ಥಿಗಳ ಕಲಿಕಾ ನಿರಂತರತೆಗಾಗಿ 8, 9 ಮತ್ತು 10ನೇ ತರಗತಿ ಮಕ್ಕಳಿಕೆ ಸಂವೇದಾ ತರಗತಿಗಳು ನಡೆಯುತ್ತಿವೆ. ಇದೀಗ ಈ ತರಗತಿಯನ್ನು 5, 6 ಮತ್ತು 7ನೇ ಕ್ಲಾಸ್​ನ ವಿದ್ಯಾರ್ಥಿಗಳಿಗೂ ವಿಸ್ತರಿಸಲಾಗಿದೆ.
ಅದರಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಶ್ರಯದಲ್ಲಿ ದೂರದರ್ಶನ ಚಂದನಾ ವಾಹಿನಿಯಲ್ಲಿ ನ.23ರಿಂದ 5, 6 ಮತ್ತು 7ನೇ ತರಗತಿ ವಿದ್ಯಾರ್ಥಿಗಳಿಗೆ ಸಂವೇದಾ ಇ-ಕ್ಲಾಸ್ ಕಲಿಕಾ ಕಾರ್ಯಕ್ರಮ ಪ್ರಸಾರವಾಗಲಿವೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವ ಸಚಿವ ಸುರೇಶ್​ ಕುಮಾರ್​, ಈ ತರಗತಿಗಳು ನಿಗದಿತ ವೇಳಾಪಟ್ಟಿಯಂತೆ ಡಿ.25ರ ವರೆಗೆ 5 ವಾರ ನಡೆಯಲಿವೆ. ಪ್ರಾಥಮಿಕ ಶಾಲಾ ಶಿಕ್ಷಕರು ಕಾರ್ಯಕ್ರಮದ ಅನುಪಾಲನೆ ಮಾಡಲಿದ್ದಾರೆ. ಈ ಪಾಠಗಳು ಮಕ್ಕಳಿಗೆ ತಲುಪುವಂತೆ ಆಯಾ ಜಿಲ್ಲೆಗಳ ಉಪನಿರ್ದೇಶಕರು ಅಗತ್ಯ ಕ್ರಮ ವಹಿಸಬೇಕು ಎಂದು ತಿಳಿಸಿದ್ದಾರೆ.
5, 6 ಮತ್ತು 7ನೇ ತರಗತಿಗಳಿಗೆ ಪ್ರಥಮ ಭಾಷೆ ಕನ್ನಡ, ದ್ವಿತೀಯ ಭಾಷೆ ಇಂಗ್ಲಿಷ್, ತೃತೀಯ ಭಾಷೆ ಹಿಂದಿ ಹಾಗೂ ಕನ್ನಡ ಮಾಧ್ಯಮದಲ್ಲಿ ಗಣಿತ, ವಿಜ್ಞಾನ ಮತ್ತು ಸಮಾಜ ವಿಜ್ಞಾನಗಳ ವಿಷಯಗಳಲ್ಲಿ ವಿಡಿಯೋ ಪಾಠಗಳ ವೇಳಾಪಟ್ಟಿಯನ್ನು ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ (ಡಿಎಸ್ಇಆರ್ ಟಿ) ಬಿಡುಗಡೆ ಮಾಡಿದೆ.
ತರಗತಿಗಳು ಸೋಮವಾರದಿಂದ ಶುಕ್ರವಾರದವರೆಗೆ ಬೆಳಗ್ಗೆ 8ರಿಂದ 9.30 ಮತ್ತು ಸಂಜೆ 5.30 ರಿಂದ 6 ಗಂಟೆಯವರೆಗೆ ಪ್ರಸಾರವಾಗಲಿವೆ. ಪ್ರತಿ ದಿನ 4 ಪಾಠ, ಪ್ರತಿ ಪಾಠ 30 ನಿಮಿಷಗಳ ಅವಧಿಯಂತೆ 2 ಗಂಟೆ ಕಾಲ ನಡೆಸಿಕೊಡಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.
ಇದು ಅಂತಿಂಥ ಮದ್ವೆ ಅಲ್ಲ! ವಿವಾಹ ಆಮಂತ್ರಣದಲ್ಲೇ ಇದೆ ಭಾರಿ ವಿಶೇಷತೆ

ಈ ವಿಚಾರ ಕೇಳಿ ಆಶ್ಚರ್ಯ ಅನಿಸುತ್ತೆ… ಸರ್ಕಾರದ ವಿರುದ್ಧ ಸಿದ್ಧಗಂಗಾ ಶ್ರೀಗಳ ಅಸಮಾಧಾನ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:20 − 9 =
Remember me
