ಚನ್ನರಾಯಪಟ್ಟಣ:ತಾಲೂಕಿನ ಹಿರೀಸಾವೆ ಹೋಬಳಿ ಎಂ.ಹೊನ್ನೇನಹಳ್ಳಿಯ ರಾಷ್ಟ್ರೀಯ ಹೆದ್ದಾರಿ 75ರ ಬದಿಯಲ್ಲಿ ಸಂಪೂರ್ಣ ಸುಟ್ಟು ಹೋಗಿರುವ ಕಾರಿನ ಡಿಕ್ಕಿಯಲ್ಲಿ ಕರಕಲಾದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.
ಗುರುತಿಸಲಾಗದಷ್ಟು ಮಟ್ಟಕ್ಕೆ ಕರಕಲಾಗಿರುವ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಬುಧವಾರ ಬೆಳಗ್ಗೆ ಪತ್ತೆಯಾಗಿದೆ. ಕಳೆದ ರಾತ್ರಿ ವ್ಯಕ್ತಿಯನ್ನು ಹತ್ಯೆಗೈದಿರುವ ದುಷ್ಕರ್ಮಿಗಳು ಸಾಕ್ಷಿ ನಾಶಕ್ಕಾಗಿ ಎಂ.ಹೊನ್ನೇನಹಳ್ಳಿ ಗ್ರಾಮದ ಬಳಿ ಕಾರಿನ ಡಿಕ್ಕಿಯಲ್ಲಿ ಶವ ಇರಿಸಿ ಕಾರಿಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ.
ರಸ್ತೆ ಬದಿಯಲ್ಲಿ ಕಾರು ಹೊತ್ತಿ ಉರಿದರೂ ಬೆಳಗ್ಗೆ ಸ್ಥಳೀಯರು ಗಮನಿಸಿದ ನಂತರವಷ್ಟೇ ಪ್ರಕರಣ ಬೆಳಕಿಗೆ ಬಂದಿದೆ. ಕಾರಿನ ಚಾರ್ಸಿ ನಂಬರ್ ಆಧರಿಸಿ ಅದರ ಮಾಲೀಕರನ್ನು ಪತ್ತೆಹಚ್ಚುವ ಕಾರ್ಯಕ್ಕೆ ಪೊಲೀಸರು ಮುಂದಾಗಿದ್ದಾರೆ. ಸ್ಥಳಕ್ಕೆ ಎಸ್ಪಿ ಆರ್.ಶ್ರೀನಿವಾಸಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಿರೀಸಾವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 + five =
Remember me
