ತುಮಕೂರು:ಯುವಕನೊಬ್ಬನ ಶವ ಮರದಲ್ಲಿ ನೇತಾಡುತ್ತಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸುತ್ತಮುತ್ತಲಿನ ಜಾಗದಲ್ಲಿ ಆತಂಕ ಮೂಡಿಸಿರುವ ಪ್ರಕರಣವೊಂದು ವರದಿಯಾಗಿದೆ. ತುಮಕೂರು ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ.
ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಸುರಿಗೆನಹಳ್ಳಿ ಬಳಿ ಈ ಪ್ರಕರಣ ನಡೆದಿದೆ. ಗುಬ್ಬಿ ತಾಲೂಕಿನ ದೊಡ್ಡಕುನ್ನಾಲ ಗ್ರಾಮದ ಮಂಜುನಾಥ್ ಸಾವಿಗೀಡಾಗಿರುವ ಯುವಕ. ಸುರಿಗೆನಹಳ್ಳಿ ಪ್ರದೇಶದ ಮರವೊಂದರಲ್ಲಿ ಇಂದು ಮಧ್ಯಾಹ್ನ ಈತನ ಶವ ಕಂಡುಬಂದಿತ್ತು.
ಈತ ಯಾವಾಗ ಮನೆಯಿಂದ ಹೋಗಿದ್ದ, ಆತ್ಮಹತ್ಯೆಯಾ, ಕೊಲೆಯಾ ಎಂಬಿತ್ಯಾದಿ ಪ್ರಶ್ನೆಗಳು ಮೂಡಿದ್ದು, ಸಾವಿಗೆ ಕಾರಣವೇನು ಎಂಬುದು ಇನ್ನೂ ನಿಗೂಢವಾಗಿಯೇ ಇದೆ. ಸ್ಥಳಕ್ಕೆ ಸಿ.ಎಸ್.ಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಮುಂದಾಗಿದ್ದಾರೆ.
ಸರ್ಕಾರಿ ಶಿಕ್ಷಕರ ಮಕ್ಕಳು ಕಡ್ಡಾಯವಾಗಿ ಕನ್ನಡ ಮಾಧ್ಯಮದಲ್ಲೇ ಕಲಿಯಬೇಕು: ಸಾಹಿತ್ಯ ಸಮ್ಮೇಳನದಲ್ಲಿ ನಿರ್ಣಯ?

ವಿಶ್ವಪರ್ಯಟನೆಯಲ್ಲಿ ಗಗನಸುಖಿ: ನಮಸ್ಕಾರ ದೇವರು.. ಇದು ಡಾಕ್ಟರ್ ಬ್ರೋ..!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 2 =
Remember me
