ವಿಜಯಪುರ:ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಇಂದು ಕೈ-ಕಾಲು ಇಲ್ಲದ ಸ್ಥಿತಿಯಲ್ಲಿ ಪತ್ತೆಯಾಗಿದೆ. ವಿಜಯಪುರ ಜಿಲ್ಲೆಯಲ್ಲಿ ಈ ಶವ ಸಿಕ್ಕಿದ್ದು, ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.
ಮಲ್ಲನಗೌಡ ಬಿರಾದಾರ (47) ಎಂಬ ವ್ಯಕ್ತಿಯ ಶವ ಇದಾಗಿದೆ. ಈತ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಗರಾಳ ಗ್ರಾಮದಲ್ಲಿ ಎರಡು ದಿನಗಳ ಹಿಂದೆ ಹೊಲದ ಪಕ್ಕದ ನದಿಗೆ ಆಕಳನ್ನು ಸ್ನಾನ ಮಾಡಿಸಲು ಕರೆದೊಯ್ದಿದ್ದ. ಈ ಸಂದರ್ಭದಲ್ಲಿ ಈತ ನಾಪತ್ತೆಯಾಗಿದ್ದು, ಅಗ್ನಿಶಾಮಕ ದಳ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ಹುಡುಕಾಟ ನಡೆಸಿದ್ದರು.
ಅದಾಗ್ಯೂ ಮಲ್ಲನಗೌಡನ ಪತ್ತೆ ಆಗಿರಲಿಲ್ಲ. ಆದರೆ ಇಂದು ಈತನ ಶವ ಕೈ-ಕಾಲು ಇಲ್ಲದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಪರಿಶೀಲನೆ ನಡೆಸಿರುವ ಪೊಲೀಸರು ಕೈಕಾಲನ್ನು ಮೊಸಳೆ ತಿಂದು ಹಾಕಿದಂತೆ ಕಂಡುಬಂದಿರುವುದರಿಂದ ಈತನನ್ನು ಅಂದು ಮೊಸಳೆ ಎಳೆದೊಯ್ದಿರಬಹುದು ಎಂದು ಅಂದಾಜಿಸಿದ್ದಾರೆ.
ಹಿಂದೂ ಸಂಘಟನೆ ಕಾರ್ಯಕರ್ತನ ಕೊಲೆಗೆ ಪ್ರತೀಕಾರ; ಸೇಡಿಗಾಗಿ ಹಾಡಹಗಲೇ ಕೊಚ್ಚಿ ಕೊಂದರು..
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:5 × 4 =
Remember me
