ಬೆಂಗಳೂರು:ಬಡತನ ರೇಖೆಗಿಂತ ಕೆಳಗಿನವರಲ್ಲದ ವಿವಿಧ ಇಲಾಖೆ, ನಿಗಮ, ಮಂಡಳಿ, ಪ್ರಾಧಿಕಾರ ಹಾಗೂ ವಿ.ವಿ.ಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಬಿಪಿಎಲ್ ಪಡಿತರ ಚೀಟಿ ಬಳಸುತ್ತಿರುವುದು ಗಮನಕ್ಕೆ ಬಂದಿದ್ದು, ಹಿಂತಿರುಗಿಸಿ ರದ್ದು ಮಾಡಿಕೊಳ್ಳಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
ಅಧಿಕಾರಿಗಳು, ನೌಕರರು ಅಥವಾ ಅವಲಂಬಿತ ಕುಟುಂಬದ ಸದಸ್ಯ ಈಗಾಗಲೇ ಬಿಪಿಎಲ್ ಕಾರ್ಡ್ ಹೊಂದಿದ್ದರೆ ತಿಂಗಳೊಳಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಗೆ ಒಪ್ಪಿಸಿ ರದ್ದುಪಡಿಸಿಕೊಳ್ಳಬೇಕು ಎಂದು ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಶುಕ್ರವಾರ ಹೊರಡಿಸಿದ ಸುತ್ತೋಲೆಯಲ್ಲಿ ಆದೇಶಿಸಿದ್ದಾರೆ.
ತಿಂಗಳ ನಂತರವೂ ಪಡಿತರ ಚೀಟಿ ಹೊಂದಿರುವ ಬಗ್ಗೆ ಮಾಹಿತಿ ಇಲ್ಲವೆ ದೂರುಗಳು ಸ್ವೀಕೃತವಾದರೆ ಅಂತಹವರ ವಿರುದ್ಧ ಶಿಸ್ತು ಕ್ರಮ ಜರುಗಿಸಿ ಕ್ರಿಮಿನಲ್ ದಾವೆ ಹೂಡಲಾಗುವುದು. ಅಲ್ಲದೆ, ಅವರಿಂದ ಸರ್ಕಾರಕ್ಕೆ ಉಂಟಾಗಿರುವ ನಷ್ಟವನ್ನು ವಸೂಲಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ನಕಲಿ ದಾಖಲೆಗಳನ್ನು ನೀಡಿ ಅನಧಿಕೃತ ರೇಷನ್ ಕಾರ್ಡ್ ಪಡೆದಿರುವ ಸರ್ಕಾರಿ ನೌಕರರಿಗೆ ಈ ಹಿಂದೆಯೇ ಆಹಾರ ಇಲಾಖೆ ಎಚ್ಚರಿಕೆ ನೀಡಿತ್ತು. ಈ ಬಗ್ಗೆ ವಿಜಯವಾಣಿ ವರದಿ ಪ್ರಕಟಿಸಿ ಸರ್ಕಾರದ ಗಮನ ಸೆಳೆದಿತ್ತು.
2ನೇ ಪತ್ನಿ ಮನೆಯಲ್ಲೇ ಇರುತ್ತಿದ್ದ ಪತಿ; ಕಿಡ್ನಾಪ್ ಮಾಡಿಸಿದ ಮೊದಲ ಪತ್ನಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − 15 =
Remember me
