ಬೆಳಗಾವಿ:ತಮ್ಮಷ್ಟಕ್ಕೆ ತಾವಿದ್ದ ಕುರಿಗಳ ಮೇಲೆ ಕಾರೊಂದು ಹರಿದಿದ್ದು, 38 ಕುರಿಗಳು ಸ್ಥಳದಲ್ಲೇ ಮೃತಪಟ್ಟ ಧಾರುಣ ಘಟನೆ ಸವದತ್ತಿ ತಾಲೂಕಿನ ಚಿಕ್ಕಉಳ್ಳಿಗೇರಿ ಗ್ರಾಮದಲ್ಲಿ ಸಂಭವಿಸಿದೆ.
ಭಾನುವಾರ ನಸುಕಿನಲ್ಲಿ ಈ ದುರ್ಘಟನೆ ಸಂಭವಿಸಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮೃತ ಕುರಿಗಳು ಬೈಲಹೊಂಗಲ ತಾಲೂಕಿನ ಹೊಳಿನಾಗಲಾಪುರ ಗ್ರಾಮದ ಕುರಿಗಾಹಿ ಯಲ್ಲಪ್ಪ ಬಿಜ್ಜಣ್ಣವರ ಎಂಬುವರಿಗೆ ಸೇರಿವೆ.ಇದನ್ನೂ ಓದಿರಿದೇವರಿಗೆ ಕೈಮುಗಿಯುತ್ತಿದ್ದಾಗಲೇ ವ್ಯಕ್ತಿಯ ಕುತ್ತಿಗೆ ಕೊಯ್ದು ಬರ್ಬರ ಹತ್ಯೆ!
ಮೇವಿಗಾಗಿ ಕುರಿಗಳೊಂದಿಗೆ ಸವದತ್ತಿಯಿಂದ ನರಗುಂದ ಕಡೆಗೆ ಹೋಗುವ ಸಂದರ್ಭದಲ್ಲಿ ಚಿಕ್ಕಉಳ್ಳಿಗೇರಿ ಗ್ರಾಮದ ಬಳಿ ಅಪಘಾತ ಸಂಭವಿಸಿದೆ. 50ಕ್ಕೂ ಹೆಚ್ಚು ಕುರಿಗಳಿಗೆ ಗಂಭೀರ ಗಾಯಗಳಾಗಿವೆ. ಕುರಿ ಮಾಲೀಕರಿಗೆ ಸುಮಾರು 6 ಲಕ್ಷ ರೂ.ಗೂ ಹೆಚ್ಚು ನಷ್ಟ ಉಂಟಾಗಿದೆ.
“ಬದುಕಿಗೆ ಆಸರೆಯಾಗಿದ್ದ ಕುರಿಗಳ ಸಾವಿನಿಂದಾಗಿ ದಿಕ್ಕು ತೋಚದಂತಾಗಿದೆ” ಎಂದು ಯಲ್ಲಪ್ಪ ಬಿಜ್ಜಣ್ಣವರ ಅಳಲು ತೋಡಿಕೊಂಡಿದ್ದಾರೆ. ಅಪಘಾತದ ಬಳಿಕ ಚಾಲಕ ಕಾರಿನೊಂದಿಗೆ ಪರಾರಿಯಾಗಿದ್ದಾನೆ. ಸವದತ್ತಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಡಿ.ಕೆ. ಶಿವಕುಮಾರ್​ ಒಬ್ಬ ದೊಡ್ಡ ಕಳ್ಳ: ಸಿಪಿವೈ

ಮಿಸ್ಟರ್ ಡಿಕೆಶಿ, ನೀವು ಜಾಮೀನಿನ ಮೇಲೆ ಹೊರಗಿದ್ದೀರಿ ಎಂಬುದನ್ನ ಅರಿತುಕೊಳ್ಳಿ; ಪ್ರಹ್ಲಾದ್ ಜೋಶಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × one =
Remember me
