ಯಾದಗಿರಿ:ಇಲ್ಲೊಂದು ಕಡೆ ನಡೆದ ಸೀಮಂತ ಸಮಾರಂಭದಲ್ಲಿ ಸಂಭವಿಸಿದ ದುರಂತ 15 ಜನರನ್ನು ಈಗ ಜೀವಂತ ಇರದಂತೆ ಮಾಡಿದ್ದರೆ, ಇನ್ನುಳಿದ 9 ಮಂದಿಯಲ್ಲೂ ಭಾರಿ ಆತಂಕ ಮೂಡಿಸಿದೆ. ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿಯಲ್ಲಿ ಫೆ. 25ರಂದು ನಡೆದಿದ್ದ ಸೀಮಂತ ಸಮಾರಂಭದಲ್ಲಿ ಸಂಭವಿಸಿದ ಸ್ಫೋಟದಿಂದಾಗಿ ಸತ್ತವರ ಸಂಖ್ಯೆ ಇಂದು 15ಕ್ಕೆ ಏರಿದೆ.
ಅಂದು ನಡೆದ ಸೀಮಂತ ಸಮಾರಂಭದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು 24 ಮಂದಿ ಗಾಯಗೊಂಡಿದ್ದು, 8 ಜನರ ಪರಿಸ್ಥಿತಿ ಚಿಂತಾಜನಕವಾಗಿತ್ತು. ಅದೇ ದಿನ ನಾಲ್ವರು ಸಾವಿಗೀಡಾಗಿದ್ದು, ಬಳಿಕ ಒಬ್ಬೊಬ್ಬರೇ ಸಾವಿಗೀಡಾಗಿ ಸತ್ತವರ ಸಂಖ್ಯೆ ಮಾ. 3ರಂದು 9ಕ್ಕೆ ತಲುಪಿತ್ತು. ಉಳಿದ ಗಾಯಾಳುಗಳ ಚಿಕಿತ್ಸೆ ಮುಂದುವರಿದಿತ್ತು.ಗಾಯಾಳುಗಳನ್ನು ಕಲಬುರಗಿಯ ಜಿಮ್ಸ್ ಸೇರಿ ಬೇರೆ ಬೇರೆ ಆಸ್ಪತ್ರೆಗಳಲ್ಲಿ ದಾಖಲಿಸಲಾಗಿದ್ದು, ನಿನ್ನೆ ಕಲಬುರಗಿಯ ಬಸವೇಶ್ವರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಾಗಣ್ಣ ಹಳ್ಳದ್ (47) ಕೂಡ ಸಾವಿಗೀಡಾಗಿದ್ದು, ಅಲ್ಲಿಗೆ ಈ ಪ್ರಕರಣದಲ್ಲಿ ಸತ್ತವರ ಸಂಖ್ಯೆ 14ಕ್ಕೆ ತಲುಪಿತ್ತು.
ಇದನ್ನೂ ಓದಿ:ಒಂದು ಭೀಕರ ಸ್ಫೋಟ, ವಾರ ಕಳೆಯುವಷ್ಟರಲ್ಲಿ 14 ಸಾವು; ಸೀಮಂತದ ಬೆನ್ನಿಗೇ ಭಾರಿ ಸೂತಕ…
ಇನ್ನುಳಿದ ಹತ್ತು ಮಂದಿಗೆ ಕಲಬುರಗಿಯ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮುಂದುವರಿದಿದ್ದು, ಇಂದು ಮತ್ತೊಬ್ಬರು ಸಾವಿಗೀಡಾಗಿದ್ದಾರೆ. ಕಲಬುರಗಿಯ ಬಸವೇಶ್ವರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಚಂದ್ರಶೇಖರ್ ಮಲಗೊಂಡ (45) ಇಂದು ಸಾವಿಗೀಡಾಗಿದ್ದು, ಈ ಪ್ರಕರಣದಲ್ಲಿ ಇದುವರೆಗೆ ಸತ್ತವರ ಸಂಖ್ಯೆ 15ಕ್ಕೆ ಏರಿದೆ. ಇನ್ನುಳಿದ 9 ಜನರಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮುಂದುವರಿದಿದ್ದು, ಕುಟುಂಬಸ್ಥರು ಸರಣಿ ಸಾವಿನಿಂದ ಕಂಗಾಲಾಗಿದ್ದಾರೆ. ಮತ್ತೊಂದೆಡೆ ಚಿಕಿತ್ಸೆಯಲ್ಲಿರುವ ಆ 9 ಮಂದಿಯಲ್ಲೂ ಭಾರಿ ಆತಂಕ ಉಂಟಾಗಿದೆ.
52ನೇ ವಯಸ್ಸಲ್ಲಿ ಅಮ್ಮನಿಗೆ ಲವ್ ಮ್ಯಾರೇಜ್​; ಸಂತಸಪಟ್ಟ ಮಗನ ಸಂದೇಶವಿದು..

ಫರ್ನಿಚರ್​ ಮೇಳಕ್ಕೆ ಇಂದು ಕೂಡ ಭರ್ಜರಿ ಸ್ಪಂದನೆ; ಅತ್ಯಾಧುನಿಕ ಉಪಕರಣಗಳ ಖರೀದಿಗೆ ಮುಗಿಬಿದ್ದ ಜನರು..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + 20 =
Remember me
