ಬೆಂಗಳೂರು:ಮುಂಬರುವ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆ, ಬಿಬಿಎಂಪಿ ಹಾಗೂ ಲೋಕಸಭೆ ಚುನಾವಣೆಗಾಗಿ ಪಕ್ಷವನ್ನು ನಗರದಲ್ಲಿ ಸಂಘಟನೆ ಮಾಡುವುದು ಹಾಗೂ ಸದಸ್ಯತ್ವ ಅಭಿಯಾನವನ್ನು ದೊಡ್ಡ ಪ್ರಮಾಣದಲ್ಲಿ ಕೈಗೊಳ್ಳುವ ಬಗ್ಗೆ ಪಕ್ಷದ ಕಚೇರಿ ಜೆಪಿ ಭವನದಲ್ಲಿ ಬುಧವಾರ ವಿಸ್ತೃತವಾಗಿ ಚರ್ಚೆ ನಡೆಸಲಾಯಿತು.
ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಹಾಗೂ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರ ಸೂಚನೆಯ ಮೇರೆಗೆ ನಗರ ಘಟಕದ ಅಧ್ಯಕ್ಷ ಎಚ್.ಎಂ.ರಮೇಶ್ ಗೌಡ ಸಭೆ ನಡೆಸಿ ಹಲವು ವಿಷಯಗಳ ಬಗ್ಗೆ ಸಮಾಲೋಚನೆ ನಡೆಸಿದರು.
ವಿಧಾನ ಪರಿಷತ್ ಸದಸ್ಯರಾದ ಕೆ.ಎ.ತಿಪ್ಪೇಸ್ವಾಮಿ, ಟಿ.ಎ.ಶರವಣ, ಗೊಟ್ಟಿಗೆರೆ ಮಂಜಣ್ಣ ಸೇರಿದಂತೆ ಅನೇಕ ಹಿರಿಯ ಮುಖಂಡರು ಭಾಗಿಯಾಗಿದ್ದರು.ನಗರದ ಎಲ್ಲ ವಿಧಾನಸಭೆ ಕ್ಷೇತ್ರಗಳಲ್ಲಿ ಬೃಹತ್ ಪ್ರಮಾಣದಲ್ಲಿ ಸದಸ್ಯತ್ವ ಅಭಿಯಾನ ಕೈಗೊಳ್ಳುವ ಬಗ್ಗೆ ನಿರ್ಧಾರ ಕೈಗೊಳ್ಳಲಾಯಿತು.ಮುಂಬರುವ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆಯ ಸಿದ್ಧತೆ ಹಾಗೂ ಪಕ್ಷದ ಅಭ್ಯರ್ಥಿಗಳನ್ನು ಉತ್ತಮ ಅಂತರದಲ್ಲಿ ಗೆಲ್ಲಿಸಿಕೊಳ್ಳುವ ಬಗ್ಗೆಯೂ ಸುದೀರ್ಘವಾಗಿ ಚರ್ಚಿಸಲಾಯಿತು.
ಮಾಜಿ ಕಾರ್ಪೊರೇಟರ್ ತಿಮ್ಮೇಗೌಡ, ಪಕ್ಷದ ಕಾನೂನು ಘಟಕದ ರಾಜ್ಯಾಧ್ಯಕ್ಷ ಎ.ಪಿ.ರಂಗನಾಥ್, ಎಲ್ಲ ವಿಧಾನಸಭೆ ಕ್ಷೇತ್ರಗಳ ಅಧ್ಯಕ್ಷರು, ವಿವಿಧ ಘಟಕಗಳ ಅಧ್ಯಕ್ಷರು, ವಾರ್ಡ್ ಮುಖಂಡರು ಉಪಸ್ಥಿತರಿದ್ದರು.ಇದೇ ವೇಳೆ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಘಟಕದ ಅಧ್ಯಕ್ಷರನ್ನಾಗಿ ಎಂ.ನಾಗೇಂದ್ರ ಪ್ರಸಾದ್ (ಬಾಬು) ಅವರನ್ನು ನೇಮಕ ಮಾಡಲಾಗಿದ್ದು, ಅವರಿಗೆ ಅಭಿನಂದನೆ ಸಲ್ಲಿಸಲಾಯಿತು.
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:1 × 2 =
Remember me
