ಬೆಂಗಳೂರು:ಅಯೋಧ್ಯೆ ರಾಮಜನ್ಮಭೂಮಿಯ ರಾಮ ಮಂದಿರದಲ್ಲಿ ಜನವರಿ 22ರಂದು ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ಇರುವುದರಿಂದ ರಾಜ್ಯ ಸರ್ಕಾರವು ಸಾರ್ವತ್ರಿಕ ರಜೆ ಘೋಷಣೆ ಮಾಡಬೇಕು ಎಂದು ಬಿಜೆಪಿ ಆಗ್ರಹಿಸಿದೆ.
ಇದನ್ನೂ ಓದಿ:ಮೊದಲ ಪತ್ನಿಯಿಂದ ವಿಚ್ಛೇದನ ಪಡೆಯದೆ ಸಾನಿಯಾ ಮಿರ್ಜಾ ವರಿಸಲು ಮುಂದಾಗಿದ್ದ ಪಾಕ್​ ಮಾಜಿ ಕ್ರಿಕೆಟಿಗ ಶೋಯಿಬ್​ ಮಲಿಕ್​
ಈ ಸಂಬಂಧ ಪ್ರತಿಪಕ್ಷ ನಾಯಕ ಆರ್.‌ ಅಶೋಕ್‌ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ರಜೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯ ಮಾಡಿದ್ದಾರೆ.
ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಸಮಾರಂಭ ಅಂದು ರಾಜ್ಯದಲ್ಲಿ ಸರ್ಕಾರಿ ರಜೆ ಘೋಷಿಸುವ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದರು. ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದ ವಿಪಕ್ಷ ನಾಯಕ ಆರ್​ ಅಶೋಕ್​ ರಾಜ್ಯ ಸರ್ಕಾರ ರಜೆ ಘೋಷಣೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ವಿಪಕ್ಷ ನಾಯಕ ಆರ್.‌ ಅಶೋಕ್ ಪತ್ರದಲ್ಲೇನಿದೆ?:500 ವರ್ಷಗಳ ಹೋರಾಟ, ತ್ಯಾಗದ ಫಲವಾಗಿ ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ನಿರ್ಮಾಣವಾಗಿ ಜನವರಿ 22 ರಂದು ವಿಗ್ರಹ ಪ್ರಾಣ ಪ್ರತಿಷ್ಠಾಪನೆ ನಡೆಯುತ್ತಿದೆ. ಈ ದಿನದಂದು ಪ್ರತಿ ಮನೆಗಳಲ್ಲಿ ಮತ್ತು ಧಾರ್ಮಿಕ ಕ್ಷೇತ್ರಗಳಲ್ಲಿ ದೀಪ ಬೆಳಗುವುದು, ಭಜನೆ, ಶ್ರೀರಾಮನ ಆರಾಧನೆ ನಡೆಯುತ್ತಿದೆ. ಇಡೀ ರಾಜ್ಯದಲ್ಲಿ ಸಂಭ್ರಮ, ಸಡಗರದ ಆಚರಣೆ ನಡೆಯಲಿದೆ.
ಪ್ರಧಾನಿ ನರೇಂದ್ರ ಮೋದಿಯವರು ಕೂಡ ವಿಗ್ರಹ ಪ್ರಾಣ ಪ್ರತಿಷ್ಠಾಪನೆಯಲ್ಲಿ ಭಾಗವಹಿಸಿದ್ದು, ಈಗಾಗಲೇ ಕೇಂದ್ರ ಸರ್ಕಾರದ ಕಚೇರಿಗಳಿಗೆ ಅರ್ಧ ದಿನದ ರಜೆ ಘೋಷಿಸಿದ್ದಾರೆ. ರಾಜ್ಯದಲ್ಲೂ ದೊಡ್ಡ ಮಟ್ಟದ ಆಚರಣೆ ನಡೆಯುತ್ತಿದ್ದು, ಆ ದಿನ ಕೆಲಸ ಮಾಡುವುದರಿಂದ ಆಚರಣೆಗೆ ತೊಡಕು ಉಂಟಾಗಬಹುದು. ಆದ್ದರಿಂದ ಸರ್ಕಾರಿ ಕಚೇರಿ, ಶಾಲಾ ಕಾಲೇಜುಗಳು, ಸಾರ್ವಜನಿಕ ಉದ್ದಿಮೆ ಸೇರಿದಂತೆ ಎಲ್ಲ ಕಡೆಗಳಲ್ಲಿ ಅನುಕೂಲವಾಗುವಂತೆ ಜನವರಿ 22 ರಂದು ಒಂದು ದಿನದ ಮಟ್ಟಿಗೆ ಸರ್ಕಾರಿ ರಜೆಯನ್ನು ಘೋಷಿಸಬೇಕೆಂದು ತಮ್ಮಲ್ಲಿ ಮನವಿ ಮಾಡುತ್ತೇನೆ” ಎಂದು ಆರ್.‌ ಅಶೋಕ್‌ ಪತ್ರದ ಮೂಲಕ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.
ಕಲಾವಿದನ ಕೈಚಳಕದಲ್ಲಿ ಅರಳಿದ ಅಯೋಧ್ಯಾ ಶ್ರೀರಾಮಮಂದಿರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five + ten =
Remember me
