ಬೆಂಗಳೂರು:ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಹೈ ರೆಸ್ಯೂಲ್ಯೂಷನ್ ಜಾಮರ್ ಹಾಕಿರುವುದರಿಂದ ಸುಮಾರು 800 ಮೀಟರ್ ವ್ಯಾಪ್ತಿಯವರೆಗೂ ಕಾರ್ಯನಿರ್ವಹಿಸುತ್ತದೆ. ಸ್ವಾಭಾವಿಕವಾಗಿ ಕಾಂಪೌಂಡ್​ನಿಂದ ಹೊರಗು ವ್ಯಾಪಿಸಿರುವುದರಿಂದ ಜನರಿಗೆ ತೊಂದರೆಯಾಗಿತ್ತು. ಜಾಮರ್ ಕಾರ್ಯನಿರ್ವಹಣೆಯ ವ್ಯಾಪ್ತಿಯನ್ನು 100 ಮೀಟರ್​ಗೆ ಇಳಿಸಲಾಗಿದೆ. ಆದರೆ ಜಾಮರ್​ಗಳನ್ನು ತೆಗೆಯುವುದಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಸ್ಪಷ್ಟಪಡಿಸಿದರು.
ಇದನ್ನೂ ಓದಿ:ನೀಲಿ ಚಿತ್ರ ತಾರೆ ಜೆಸ್ಸಿ ಜೇನ್ ಸತ್ತಿದ್ದು ಮಿತಿ ಮೀರಿದ ಮಾದಕ ದ್ರವ್ಯ ಸೇವನೆಯಿಂದ; ಪರೀಕ್ಷೆಯಲ್ಲಿ ಬಹಿರಂಗ
ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನಡೆದ ರಾಷ್ಟ್ರಪತಿಗಳ ಸುಧರಣಾ ಸೇವೆ ಪದಕ ಹಾಗೂ ಮುಖ್ಯಮಂತ್ರಿಗಳ ಪದಕ ಪ್ರಧಾನ ಮತ್ತು ಸನ್ನಡತೆಯ ಶಿಕ್ಷಾ ಬಂಧಿಗಳ ಅವಧಿಪೂರ್ವ ಬಿಡುಗಡೆ ಸಮಾರಂಭದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.  ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಹೈ ರೆಸ್ಯೂಲೇಷನ್ ಜಾಮರ್​ಗಳನ್ನು ಅಳವಡಿಸಿದ್ದರಿಂದ ನೆರೆಹೊರೆಯ ನಿವಾಸಿಗಳಿಗೆ ತೊಂದರೆಯಾಗಿದ್ದು, ಇದನ್ನು ನಿವಾರಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ತಿಳಿಸಿದರು.
ಈ ಹಿಂದೆ ಜೈಲಿನ ಒಳಗೆ ಫೋನ್ ತಂದುಕೊಡುತ್ತಾರೆ. ಕೈದಿಗಳು ಹೊರಗಿನವರ ಜೊತೆ ಸಂಪರ್ಕ ಮಾಡುತ್ತಾರೆ ಎಂಬ ಆರೋಪಗಳು ಕೇಳಿ ಬಂದಿವೆ. ಜೈಲಿನಲ್ಲಿ ಬೇರೆ ರಾಜ್ಯದ ಕೈದಿಗಳು ಇದ್ದಾರೆ. ಇಂತಹ ಸಂದರ್ಭದಲ್ಲಿ ಜಾಮರ್ ಅಳವಡಿಸುವುದರಿಂದ ಅಕ್ರಮಗಳನ್ನು ತಡೆಗಟ್ಟಬಹುದು ಎಂದರು.
ನಟ ದರ್ಶನ್​ಗೆ ರಾಜಾತೀಥ್ಯ ಸಿಗುತ್ತಿದೆ ಎಂಬ ಆರೋಪದ ಕುರಿತು ಪ್ರತಿಕ್ರಿಯಿಸಿದ ಅವರು ಜೈಲಿನ ಒಳಗೆ ನೇರವಾಗಿ ಬರಲು ನನಗೆ ಅವಕಾಶವಿಲ್ಲ. ಊಟ ಉಪಚಾರ ವಿಚಾರದಲ್ಲಿ ಬೇರೆ ರೀತಿ ಅತೀಥ್ಯ ನೀಡಿಲ್ಲ. ಜೈಲಿನಲ್ಲಿರುವ ಎಲ್ಲರಂತೆಯೇ ದರ್ಶನ್​ಗೆ ವ್ಯವಸ್ಥೆ ಇದೆ. ಬಿರಿಯಾನಿ ಕೊಟ್ಟರು ಎಂದು ಕೆಲವರು ಆರೋಪಿಸಿದ್ದಾರೆ. ಅಂತಹ ಯಾವುದೇ ಘಟನೆ ನಡೆದಿಲ್ಲ ಎಂದು ಸ್ಪಷ್ಟಪಡಿಸಿದರು.

ಕೆಳಹಂತದ ಅಧಿಕಾರಿಗಳು ಹಲವು ವರ್ಷಗಳಿಂದ ಠಿಕಾಣಿ ಹೂಡಿದ್ದಾರೆ. ಅಂತವರು ಅಕ್ರಮಗಳಿಗೆ ಕೈಜೋಡಿಸುತ್ತಿದ್ದಾರೆ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು ಇದೆಲ್ಲವು ನನ್ನ ಗಮನಕ್ಕೆ ಇದೆ. ಬೇರೆಡೆ ವರ್ಗಾವಣೆಯಾದವರು ಮತ್ತೇ ಅದೇ ಸ್ಥಳಕ್ಕೆ ಮರು ವರ್ಗಾವಣೆಯಾಗಿಲ್ಲ. ನಾನೇ ವರ್ಗಾವಣೆ ಮಾಡುವುದರಿಂದ, ಅಂತಹ ಒಂದು ನಿದರ್ಶನವನ್ನು ತೋರಿಸಿ. ಇದು ಸಾಧ್ಯವೇ ಇಲ್ಲ. ಇಲಾಖೆಯಲ್ಲಿ ಮತ್ತಷ್ಟು ಸುಧಾರಣೆ ತರಲು ಕೆಲವು ನಿಯಮಗಳನ್ನು ರೂಪಿಸಲಾಗುತ್ತಿದೆ ಎಂದು ತಿಳಿಸಿದರು.
ಪ್ರೀತಿಗೆ ಪೋಷಕರ ವಿರೋಧ; ಜೀವ ಉಳಿಸಿಕೊಳ್ಳಲು ಎಸ್‍ಪಿ ಕಚೇರಿಗೆ ಓಡಿದ ಪ್ರೇಮಿಗಳು! ವಿಡಿಯೋ ನೋಡಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − six =
Remember me
