ಕೋಲಾರ:“ರಾಷ್ಟ್ರನಾಯಕರಿಗೆ ಸಂಸತ್​ನಲ್ಲಿ ಗೌರವ ಸಮರ್ಪಣೆ” ಕಾರ್ಯಕ್ರಮದಲ್ಲಿ ಭಾಗವಹಿಸಲು ಕರ್ನಾಟಕದಿಂದ ಕೋಲಾರದ ಎಂ. ಸ್ಫೂರ್ತಿ ಆಯ್ಕೆಯಾಗಿದ್ದು, ನಾಳೆ(ನ.19) ಸಂಸತ್​ನಲ್ಲಿ ಭಾಷಣ ಮಾಡಲಿದ್ದಾರೆ.
ಶಿಕ್ಷಣ ಸಚಿವಾಲಯ, ಕ್ರೀಡಾ ಮತ್ತು ಯುವಜನ ಸಬಲೀಕರಣ ಸಚಿವಾಲಯ ಹಾಗೂ ಪ್ರಜಾಪ್ರಭುತ್ವಕ್ಕಾಗಿ ಸಂಸದೀಯ ಸಂಶೋಧನಾ ಮತ್ತು ತರಬೇತಿ ಸಂಸ್ಥೆ ಜಂಟಿಯಾಗಿ ಈ ಕಾರ್ಯಕ್ರಮ ಆಯೋಜಿಸಿವೆ.
ಕೋಲಾರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ಶಾಸ್ತ್ರ ಪ್ರಾಧ್ಯಾಪಕ ಡಾ.ಎಸ್​.ಮುರಳೀಧರ್​ ಮತ್ತು ಎಸ್​.ಎನ್​. ವಾಣಿಶ್ರೀ ದಂಪತಿಯ ಪುತ್ರಿ ಸ್ಫೂರ್ತಿ ಪ್ರಸ್ತುತ ಬೆಂಗಳೂರಿನ ಬಿಎಂಎಸ್​ ಕಾನೂನು ಮಹಾವಿದ್ಯಾಲಯದಲ್ಲಿ ಪ್ರಥಮ ವರ್ಷದ ಕಾನೂನು ಪದವಿ ವ್ಯಾಸಂಗ ಮಾಡುತ್ತಿದ್ದಾರೆ.
ನೆಹರು ಯುವ ಕೇಂದ್ರ ಸಂಘಟನೆ ಆಯೋಜಿಸಿದ್ದ 2021-22ನೇ ಸಾಲಿನ ಯೂತ್​ ಪಾಲಿರ್ಮೆಂಟ್​ ಸ್ಪರ್ಧೆಯಲ್ಲಿ ವಿಜೇತೆಯಾಗಿರುವ ಸ್ಫೂರ್ತಿ ನ.19ರಂದು ಸಂಸತ್​ ಭವನದ ಸೆಂಟ್ರಲ್​ ಹಾಲ್​ನಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಜನ್ಮ ದಿನಾಚರಣೆಯಲ್ಲಿ ಭಾಷಣ ಮಾಡಲಿದ್ದಾರೆ. ದೇಶದ ವಿವಿಧ ರಾಜ್ಯಗಳ ಯುವ ಪ್ರತಿನಿಧಿಗಳು ಪಾಲ್ಗೊಳ್ಳುತ್ತಿರುವ ಈ ಕಾರ್ಯಕ್ರಮದಲ್ಲಿ ಸ್ಫೂರ್ತಿ ಕರ್ನಾಟಕವನ್ನು ಪ್ರತಿನಿಧಿಸುತ್ತಿದ್ದಾರೆ.
ಕುಕ್ಕೆಯಲ್ಲಿ ನ.20ರಂದು ಮಧ್ಯಾಹ್ನವರೆಗೆ ದೇವರ ದರ್ಶನವಿಲ್ಲ

ಎಸ್​ಐ ನೇಮಕಾತಿಗೆ ಶ್ರೀಘ್ರ ಪರೀಕ್ಷೆ: ಡಿಜಿಪಿ ಪ್ರವಿಣ್​ ಸೂದ್​ ಟ್ವೀಟ್, ಆಕಾಂಕ್ಷಿಗಳಲ್ಲಿ ಆಶಾಭಾವನೆ

ಇಂತಹ ಹೆಂಗಸು ನನಗೆ ಬೇಡ, ಮಗನೇ ನಿನ್ನ ಅಮ್ಮ ಸರಿಯಿಲ್ಲ, ಆಕೆ ಜತೆ ಇರಬೇಡ… ಎಂದು ಮನದ ನೋವು ಬಿಚ್ಚಿಟ್ಟು ದುರಂತ ಅಂತ್ಯ ಕಂಡ ತಂದೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 + 11 =
Remember me
