|ಎನ್.ಎಲ್.ಶಿವಮಾದುಬೆಂಗಳೂರು
ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಪದವಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ನೀಡುವ ‘ಟ್ಯಾಬ್’ ವಿತರಣೆಗೆ ಸರ್ಕಾರ ನಿರಾಸಕ್ತಿ ವಹಿಸಿದೆ. ರಾಜ್ಯದಲ್ಲಿ 2022-23ನೇ ಸಾಲಿನಲ್ಲಿ ಪ್ರವೇಶ ಪಡೆದಿರುವ ಪದವಿ ವಿದ್ಯಾರ್ಥಿಗಳಿಗೆ ಡಿ.31ಕ್ಕೆ ಮೊದಲ ಸೆಮಿಸ್ಟರ್​ನ ಬೋಧನಾ ಅವಧಿ ಮುಕ್ತಾಯವಾಗಿದ್ದು, ಜನವರಿ 2ನೇ ವಾರ ಮೊದಲ ಸೆಮಿಸ್ಟರ್ ಪರೀಕ್ಷೆಗಳು ಆರಂಭವಾಗಲಿವೆ. ಆದರೂ ಈವರೆಗೆ ಸರ್ಕಾರ ಮಾತ್ರ ವಿದ್ಯಾರ್ಥಿಗಳಿಗೆ ‘ಟ್ಯಾಬ್’ ವಿರಿಸುವ ಕಡೆ ಗಮನ ಹರಿಸಿಲ್ಲ.
ಸಾಮಾನ್ಯವಾಗಿ ಸರ್ಕಾರಿ ಮತ್ತು ಅನುದಾನಿತ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾಥಿಗಳು ಆರ್ಥಿಕವಾಗಿ ಹಿಂದುಳಿದವರಾಗಿರುತ್ತಾರೆ. ಗುಣಮಟ್ಟದ ಶಿಕ್ಷಣಕ್ಕೆ ಅನುಕೂಲವಾಗಲಿ ಎಂಬ ಕಾರಣದಿಂದ ಕಳೆದ ನಾಲ್ಕು ವರ್ಷಗಳಿಂದ ಸರ್ಕಾರವು ಆರಂಭದಲ್ಲಿ ಲ್ಯಾಪ್​ಟಾಪ್ ಮತ್ತು ಕಳೆದ ವರ್ಷದಿಂದ ಟ್ಯಾಬ್ ವಿತರಿಸುತ್ತಿದೆ. ಆದರೆ, ಈ ವರ್ಷ ಮಾತ್ರ ಇನ್ನೂ ಟ್ಯಾಬ್ ವಿತರಿಸಲು ಆಸಕ್ತಿ ತೋರಿಲ್ಲ.
ಟ್ಯಾಬ್ ಯಾಕಾಗಿ ಮುಖ್ಯ?:ರಾಜ್ಯದ ಸರ್ಕಾರಿ ಕಾಲೇಜಿನ 8,500 ಕೊಠಡಿಗಳನ್ನು ಸ್ಮಾರ್ಟ್ ತರಗತಿಗಳಾಗಿ ಅಭಿವೃದ್ದಿಪಡಿಸುತ್ತಿದೆ. ಈ ಪೈಕಿ 3,500 ಕೊಠಡಿಗಳು ಈಗಾಗಲೆ ಸ್ಮಾರ್ಟ್ ಆಗಿದ್ದು, ಉಳಿದ 5,000 ಕೊಠಡಿಗಳ ಕಾಮಗಾರಿ ಪ್ರಗತಿಯಲ್ಲಿದೆ. ರಾಷ್ಟ್ರೀಯ ಶಿಕ್ಷಣ ನೀತಿ-2020 (ಎನ್​ಇಪಿ) ಕೂಡ ಡಿಜಿಟಲ್ ಮತ್ತು ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡುತ್ತಿದೆ. ಇದರ ಜತೆಗೆ ವಿದ್ಯಾರ್ಥಿಗಳಿಗೆ ತಮ್ಮ ಕಾಲೇಜು ಮಾತ್ರವಲ್ಲ, ರಾಜ್ಯದ ಇತರೆ ಕಾಲೇಜುಗಳಲ್ಲಿ ಉತ್ತಮವಾಗಿ ಬೋಧನೆ ಮಾಡುವ ಪ್ರಾಧ್ಯಾಪಕರ ಪಾಠಗಳನ್ನು ಕೇಳಲು ಅನುಕೂಲ ಕಲ್ಪಿಸಿದ್ದು, ಕಲಿಕಾ ನಿರ್ವಹಣಾ ವ್ಯವಸ್ಥೆ (ಎಲ್​ಎಂಎಸ್) ಜಾರಿಗೊಳಿಸಿದೆ. ಈ ಸೌಲಭ್ಯಗಳನ್ನು ವಿದ್ಯಾರ್ಥಿಗಳು ಸಮರ್ಪಕವಾಗಿ ಬಳಸಿಕೊಳ್ಳುವುದಕ್ಕಾಗಿ ಟ್ಯಾಬ್ ಅತ್ಯಗತ್ಯ ಎಂದು ವಿದ್ಯಾರ್ಥಿಗಳು ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಎನ್​ಇಪಿ ಜಾರಿಯಾದ ಬಳಿಕ ಶಿಕ್ಷಣ ವ್ಯವಸ್ಥೆ ಬದಲಾಗಿದ್ದು, ಆಧುನಿಕ ಶಿಕ್ಷಣಕ್ಕೆ ತಕ್ಕಂತೆ ಕಲಿಕಾ ಪರಿಕರಗಳು ಕೂಡ ಮುಖ್ಯವಾಗುತ್ತವೆ. ಆರಂಭದಿಂದಲೇ ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಿಸಿದರೆ ಅನುಕೂಲವಾಗಲಿದೆ. ‘ಟ್ಯಾಬ್’ ಇದ್ದರೆ ಬೇರೆ ಕಾಲೇಜುಗಳ ಪ್ರಾಧ್ಯಾಪಕರ ಪಾಠಗಳನ್ನು ಕೂಡ ಕೇಳಲು ಮತ್ತು ಮಾಹಿತಿಗಳನ್ನು ತಿಳಿದುಕೊಳ್ಳಲು ಸಹಕಾರಿಯಾಗಲಿದೆ. ಈ ಕಾರಣಗಳಿಂದ ಟ್ಯಾಬ್ ನೀಡುವುದಕ್ಕೆ ಸರ್ಕಾರ ಗಮನ ಹರಿಸಬೇಕು ಸರ್ಕಾರಿ ಕಾಲೇಜಿನ ಪ್ರಾಧ್ಯಾಪಕರೊಬ್ಬರು ಅಭಿಪ್ರಾಯ ವ್ಯಕ್ತಪಡಿಸುತ್ತಾರೆ.
1.4 ಲಕ್ಷ ವಿದ್ಯಾರ್ಥಿಗಳು:ಸರ್ಕಾರಿ ಮತ್ತು ಅನುದಾನಿತ ಪದವಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುವ ಕಲಾ, ವಾಣಿಜ್ಯ, ವಿಜ್ಞಾನ, ಪಾಲಿಟೆಕ್ನಿಕ್, ಇಂಜಿನಿಯರಿಂಗ್ ಮತ್ತು ವೈದ್ಯಕೀಯ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಫಲಾನುಭವಿಗಳಾಗಲು ಅರ್ಹರಾಗಿರುತ್ತಾರೆ. 2022-23ನೇ ಸಾಲಿನಲ್ಲಿ ಒಟ್ಟಾರೆ ಅಂದಾಜು 1.4 ಲಕ್ಷ ವಿದ್ಯಾರ್ಥಿಗಳು ಯೋಜನೆಯ ಉಪಯೋಗ ಪಡೆಯಲು ಎದುರು ನೋಡುತ್ತಿದ್ದಾರೆ.
ಪದವಿ ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಿಸುವ ಸಂಬಂಧ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಸರ್ಕಾರಿದಿಂದ ಇನ್ನೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಸರ್ಕಾರ ಅನುಮತಿ ನೀಡಿದ ನಂತರ ವಿದ್ಯಾರ್ಥಿಗಳಿಗೆ ಕಾಲೇಜುಗಳಲ್ಲಿಯೇ ಟ್ಯಾಬ್ ವಿತರಿಸಲಾಗುತ್ತದೆ.
|ಪಿ.ಪ್ರದೀಪ್ಆಯುಕ್ತರು, ಕಾಲೇಜು ಶಿಕ್ಷಣ ಇಲಾಖೆ
ಪರೀಕ್ಷಾ ಸಮಯ ಬಂದಿರುವುದರಿಂದ ಈಗ ಟ್ಯಾಬ್ ವಿತರಿಸಿದರೆ, ವಿದ್ಯಾರ್ಥಿಗಳಿಗೆ ಹೆಚ್ಚಿನ ವ್ಯಾಸಂಗಕ್ಕೆ ಬಳಕೆಯಾಗಲಿದೆ. ಮೊದಲ ಸೆಮಿಸ್ಟರ್​ನಲ್ಲಿಯೇ ಸರ್ಕಾರದ ಯೋಜನೆ ವಿದ್ಯಾರ್ಥಿಗಳಿಗೆ ತಲುಪಿಸದರೆ ಒಳ್ಳೆಯದು.
| ಸರ್ಕಾರಿ ಕಾಲೇಜು ವಿದ್ಯಾರ್ಥಿ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × four =
Remember me
