ಬೆಂಗಳೂರು:ಬಿಜೆಪಿ ಶಾಸಕಾಂಗ ಸಭೆ ನಾಳೆಗೆ ಮುಂದೂಡಿಕೆಯಾಗಿದ್ದು ಈ ಕುರಿತಾಗಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.
ಈಗಾಗಲೇ ಸಿಎಂ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್​ನ ನಾಯಕರು ಅನೇಕ ಬಾರಿ ಬಿಜೆಪಿಯನ್ನು ಪ್ರತಿಪಕ್ಷ ನಾಯಕನ ಆಯ್ಕೆ ಮಾಡದ ಕುರಿತಾಗಿ ಟೀಕೆ ಮಾಡಿದ್ದಾರೆ. ಆದರೆ ಇದೀಗ ಬಿಜೆಪಿಯ ಶಾಸಕಾಂಗ ಸಭೆಯೇ ನಾಳೆಗೆ ಮುಂದೂಡಿಕೆ ಆಗಿದೆ. ರಾಜ್ಯ ಬಿಜೆಪಿ, ಇಂದು ಮಧ್ಯಾಹ್ನ ನಂತರ ಶಾಸಕಾಂಗ ಸಭೆ ಕರೆಯಲು ಮುಂದಾಗಿತ್ತು. ಆದರೆ ದೆಹಲಿಯಿಂದ ಬಂದಿಳಿದ ಬಿಎಸ್​ವೈ ಸುದ್ದಿಗಾರರೊಂದಿಗೆ ವಿಪಕ್ಷ ನಾಯಕನ ಆಯ್ಕೆ ನಾಳೆಗೆ ಮುಂದೂಡಿಕೆಯಾಗಿದೆ ಎಂದಿದ್ದಾರೆ.
ದೆಹಲಿಗೆ ತೆರಳಿದ್ದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ರಾಜ್ಯಕ್ಕೆ ವಾಪಸ್ ಆಗಿದ್ದು ವಿರೋಧ ಪಕ್ಷದ ನಾಯಕ ಆಯ್ಕೆ ವಿಚಾರವಾಗಿ ಹೇಳಿಕೆ ನೀಡಿದ್ದಾರೆ.
ಏರ್ಪೊಟ್​ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ “ನಾನು ಅಮಿತ್ ಷಾ ಹಾಗೂ ಬಿಜೆಪಿ ರಾಷ್ಟ್ರೀಯ ಅದ್ಯಕ್ಷ ನಡ್ಡಾ ಜೊತೆ ಸುಧಿರ್ಗ ಚರ್ಚೆ ಮಾಡಿದ್ದೇನೆ. ನಾಳೆ ವಿರೊಧ ಪಕ್ಷದ ನಾಯಕನನ್ನ ರಾಷ್ಟ್ರೀಯ ನಾಯಕರು ಘೊಷಣೆ ಮಾಡಲಿದ್ದಾರೆ” ಎಂದಿದ್ದಾರೆ.
ಇದೀಗ ಸದನ ಶುರುವಾಗಿದ್ದರೂ ವಿರೋಧಪಕ್ಷದ ನಾಯಕನ ಆಯ್ಕೆ ನಡೆಯದೇ ಇರುವ ಬಗ್ಗೆ ಕಾಂಗ್ರೆಸ್​ ಸರಣಿ ಟ್ವೀಟ್​ ಮಾಡಿ ಕುಟುಕಿದೆ.
ತನ್ನ ಟ್ವೀಟ್​ನಲ್ಲಿ ಕಾಂಗ್ರೆಸ್​ “ಸರ್ಕಾರ ರಚನೆ ಆಯ್ತು, ನಮ್ಮ ಸರ್ಕಾರ ಟೆಕಾಫ್ ಆಗಿ ಹಲವು ದಿನಗಳಾಯ್ತು. ನಮ್ಮ ಗ್ಯಾರಂಟಿ ಯೋಜನೆಗಳ ಜಾರಿಯೂ ಆಯ್ತು. dear @BJP4Karnataka ಸದನವೂ ಪ್ರಾರಂಭವಾಯ್ತು.ಎಲ್ಲಿ ನಿಮ್ಮ ವಿರೋಧ ಪಕ್ಷದ ನಾಯಕ? ಬಿಜೆಪಿಗೆ ವಿರೋಧ ಪಕ್ಷದ ನಾಯಕನ ಗ್ಯಾರಂಟಿಯನ್ನೂ ಕೊಡಲಾಗುತ್ತಿಲ್ಲ ಎಂದರೆ ಎಂತಹ ಹಿನಾಯ ಸ್ಥಿತಿಯಲ್ಲಿದೆ!” ಎಂದು ಕುಟುಕಿದೆ.

ಸರ್ಕಾರ ರಚನೆ ಆಯ್ತು, ನಮ್ಮ ಸರ್ಕಾರ ಟೆಕಾಫ್ ಆಗಿ ಹಲವು ದಿನಗಳಾಯ್ತು,ನಮ್ಮ ಗ್ಯಾರಂಟಿ ಯೋಜನೆಗಳ ಜಾರಿಯೂ ಆಯ್ತು,dear@BJP4Karnataka,ಸದನವೂ ಪ್ರಾರಂಭವಾಯ್ತು.ಎಲ್ಲಿ ನಿಮ್ಮ ವಿರೋಧ ಪಕ್ಷದ ನಾಯಕ?ಬಿಜೆಪಿಗೆ ವಿರೋಧ ಪಕ್ಷದ ನಾಯಕನ ಗ್ಯಾರಂಟಿಯನ್ನೂ ಕೊಡಲಾಗುತ್ತಿಲ್ಲ ಎಂದರೆ ಎಂತಹ ಹಿನಾಯ ಸ್ಥಿತಿಯಲ್ಲಿದೆ!pic.twitter.com/d4zQO0gzgF
ಮತ್ತೊಂದು ಟ್ವೀಟ್​ನಲ್ಲಿ ಕಾಂಗ್ರೆಸ್​, “ಬಿಜೆಪಿಗೆ ವಿರೋಧ ಪಕ್ಷದ ನಾಯಕನ ‘ಗ್ಯಾರಂಟಿ‘ಯೂ ಇಲ್ಲ. ವಿರೋಧ ಪಕ್ಷದ ನಾಯಕನಿಲ್ಲದೆ ಸದನ ಕಲಾಪ ನಡೆಯುತ್ತಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಕಪ್ಪು ಚುಕ್ಕೆ. ಈ ಕಪ್ಪು ಚುಕ್ಕೆಯನ್ನಿಟ್ಟಿದ್ದು ಬಿಜೆಪಿ” ಆರೋಪ ಮಾಡಿದೆ.

ಬಿಜೆಪಿಗೆ ವಿರೋಧ ಪಕ್ಷದ ನಾಯಕನ ‘ಗ್ಯಾರಂಟಿ‘ಯೂ ಇಲ್ಲ!ವಿರೋಧ ಪಕ್ಷದ ನಾಯಕನಿಲ್ಲದೆ ಸದನ ಕಲಾಪ ನಡೆಯುತ್ತಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಕಪ್ಪು ಚುಕ್ಕೆ.ಈ ಕಪ್ಪು ಚುಕ್ಕೆಯನ್ನಿಟ್ಟಿದ್ದು ಬಿಜೆಪಿ.

ಬಿಜೆಪಿಯ 66 ಶಾಸಕರಲ್ಲಿ ವಿರೋಧ ಪಕ್ಷದ ನಾಯಕನಾಗುವ ಅರ್ಹತೆ ಇರುವ ಒಬ್ಬೇ ಒಬ್ಬ ಶಾಸಕನಿಲ್ಲದಿರುವುದು ಅತ್ಯಂತ ನಾಚಿಕೆಗೇಡು.ಕರ್ನಾಟಕದದ ಇತಿಹಾಸದಲ್ಲಿ ವಿರೋಧ ಪಕ್ಷದ ನಾಯಕನಿಲ್ಲದೆ ನಡೆಯುತ್ತಿರುವ ಮೊದಲ ಅಧಿವೇಶನವಿದು.@BJP4Karnatakaಅಧಿಕಾರದಲ್ಲಿದ್ದಾಗಲೂ ಪ್ರಜಾಪ್ರಭುತ್ವವನ್ನು ಗೌರವಿಸಲಿಲ್ಲ, ವಿಪಕ್ಷದಲ್ಲಿದ್ದಾಗಲೂ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five + fourteen =
Remember me
