ಬೆಂಗಳೂರು:ರಾಜ್ಯದಲ್ಲಿ ಸ್ಮಾರ್ಟ್‌ಫೋನ್‌ಗಳ ಕ್ಯಾಮೆರಾ ಪರೀಕ್ಷಿಸುವ ಯಂತ್ರಗಳನ್ನು ತಯಾರಿಸುವ ಘಟಕ ಆರಂಭಿಸುವ ಯೋಜನೆಯ ಒಪ್ಪಂದಕ್ಕೆ ದಕ್ಷಿಣ ಕೊರಿಯಾದ ಹೈವಿಷನ್ ಕಂಪನಿಯು ಕರ್ನಾಟಕ ಸರ್ಕಾರದ ಜೊತೆ ಶುಕ್ರವಾರ ಸೋಲ್‌ನಲ್ಲಿ ಒಪ್ಪಂದಕ್ಕೆ ಸಹಿ ಹಾಕಿದೆ.
ಇದನ್ನೂ ಓದಿ:ಎಎಪಿ ಸಂಸದೀಯ ಪಕ್ಷದ ಅಧ್ಯಕ್ಷರನ್ನಾಗಿ ಸಂಜಯ್ ಸಿಂಗ್ ನೇಮಕ!
ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ ನೇತೃತ್ವದಲ್ಲಿ ಉನ್ನತ ಮಟ್ಟದ ನಿಯೋಗವು ದಕ್ಷಿಣ ಕೊರಿಯಾಕ್ಕೆ ಐದು ದಿನಗಳ ಭೇಟಿ ಕೈಗೊಂಡಿದೆ. ನಿಯೋಗದ ಜೊತೆಗೆ ಶುಕ್ರವಾರ ನಡೆದ ಸಭೆಯ ಸಂದರ್ಭದಲ್ಲಿ ಈ ಒಪ್ಪಂದಕ್ಕೆ ಸಹಿ ಹಾಕಲಾಯಿತು. ಕ್ಯಾಮೆರಾ ಇನ್‌ಸ್ಪೆಕ್ಷನ್‌ ಮಷಿನ್ಸ್‌ ತಯಾರಿಕಾ ಘಟಕವು ಫಾಕ್ಸ್‌ಕಾನ್‌ನ ತಯಾರಿಕಾ ಘಟಕದ ಸಮೀಪ ಕಾರ್ಯಾರಂಭ ಮಾಡಲಿದೆ. ಇದರಿಂದ ರಾಜ್ಯದ ಎಲೆಕ್ಟ್ರಾನಿಕ್ಸ್‌ ತಯಾರಿಕಾ ಉದ್ಯಮದ ಬೆಳವಣಿಗೆಗೆ ನೆರವಾಗಲಿದೆ.
ಎಲೆಕ್ಟ್ರಾನಿಕ್ಸ್‌ ವಲಯಕ್ಕೆ ದೇಶದಲ್ಲಿಯೇ ಗರಿಷ್ಠ ಮಟ್ಟವಾಗಿರುವ ಶೇ. 30-35ರಷ್ಟು ಸಬ್ಸಿಡಿಯನ್ನು ಕರ್ನಾಟಕ ಸರ್ಕಾರ ನೀಡುತ್ತಿರುವುದನ್ನು ಸಚಿವ ಪಾಟೀಲ ಅವರು ಹೈವಿಷನ್‌ ಕಂಪನಿಯ ಮುಖ್ಯಸ್ಥರ ಗಮನಕ್ಕೆ ತಂದರು. ರಾಜ್ಯದ ಉನ್ನತ ಮಟ್ಟದ ನಿಯೋಗವು ಎಲ್ಎಕ್ಸ್ ಇಂಟರ್‌ನ್ಯಾಷನಲ್ ಕಾರ್ಪ್‌, ಸ್ಯಾಮ್ಸಂಗ್‌ ಎಲೆಕ್ಟ್ರಾನಿಕ್ಸ್‌ ಮುಖ್ಯಸ್ಥರನ್ನೂ ಭೇಟಿಯಾಗಿ ಮಾತುಕತೆ ನಡೆಸಿತು.

ಎಲ್ಎಕ್ಸ್ ಇಂಟರ್‌ನ್ಯಾಷನಲ್ ಕಾರ್ಪ್‌ ಮುಖ್ಯಸ್ಥರ ಭೇಟಿ ಸಂದರ್ಭದಲ್ಲಿ ವಿದ್ಯುತ್‌ ಚಾಲಿತ ವಾಹನ, ಬ್ಯಾಟರಿ ತಯಾರಿಕೆ ಸಾಧ್ಯತೆ ಮತ್ತು ವಹಿವಾಟು ವಿಸ್ತರಣೆ ಅವಕಾಶಗಳ ಬಗ್ಗೆ ಸಚಿವ ಪಾಟೀಲ ಅವರು ಚರ್ಚೆ ನಡೆಸಿದರು. ಎಲ್‌ಜಿ ಕಾರ್ಪ್‌ನ ಪ್ರತ್ಯೇಕ ಕಂಪನಿಯಾಗಿರುವ ಎಲ್‌ಎಕ್ಸ್‌ ಇಂಟರ್‌ನ್ಯಾಷನಲ್‌ ಕಾರ್ಪ್‌ನ ವಿಭಿನ್ನ ವಹಿವಾಟುಗಳಾದ ಎಲ್‌ಎಕ್ಸ್‌ ಸೆಮಿಕಾನ್‌, ಎಲ್‌ಎಕ್ಸ್‌ ಗ್ಲಾಸ್‌, ಎಲ್‌ಎಕ್ಸ್‌ ಪ್ಲಾಸ್ಟಿಕ್‌ ಮತ್ತು ಎಲ್‌ಎಕ್ಸ್‌ ಹೌಸಸ್‌ ವಹಿವಾಟು ಮತ್ತು ಎಲ್‌ಜಿ ಎನರ್ಜಿ ಸೊಲುಷನ್ಸ್‌ ಜೊತೆಗಿನ ಸಹಯೋಗದ ಬಗ್ಗೆ ಚರ್ಚೆ ನಡೆಸಲಾಯಿತು.
ಸ್ಯಾಮ್ಸಂಗ್‌ ಎಲೆಕ್ಟ್ರಾನಿಕ್ಸ್‌ ಮುಖ್ಯಸ್ಥರ ಜೊತೆಗಿನ ಭೇಟಿ ಸಂದರ್ಭದಲ್ಲಿ ಸ್ಮಾರ್ಟ್‌ಫೋನ್‌, ಎಲೆಕ್ಟ್ರಾನಿಕ್ಸ್‌, ಬ್ಯಾಟರಿ ಸೆಲ್‌ ತಯಾರಿಕೆಗೆ ಕರ್ನಾಟಕದಲ್ಲಿ ಇರುವ ಅನುಕೂಲತೆಗಳನ್ನು ನಿಯೋಗವು ಮನವರಿಕೆ ಮಾಡಿಕೊಟ್ಟಿತು. ಸೆಮಿಕಂಡಕ್ಟರ್, ವಿದ್ಯುತ್‌ಚಾಲಿತ ವಾಹನ, ಜೈವಿಕ ತಂತ್ರಜ್ಞಾನ ವಲಯಗಳಲ್ಲಿ ಕರ್ನಾಟಕವು ಉತ್ಕೃಷ್ಟ ಮೂಲಸೌಲಭ್ಯ, ಪರಿಣತ ತಂತ್ರಜ್ಞರು, ಪೂರಕ ಪರಿಸರದ ನೆರವಿನಿಂದ ಜಾಗತಿಕ ಆವಿಷ್ಕಾರದಲ್ಲಿ ಮುನ್ನಡೆ ಸಾಧಿಸುತ್ತಿರುವುದನ್ನು ವಿವರಿಸಲಾಗಿದೆ.
ಭಾರತದ ರಾಯಭಾರಿಗೆ ಕೃತಜ್ಞತೆ ಸಲ್ಲಿಕೆ:ವಿವಿಧ ಕಂಪನಿಗಳ ಜೊತೆಗಿನ ಭೇಟಿ ಮತ್ತು ಸೋಲ್‌ನಲ್ಲಿ ಏರ್ಪಡಿಸಿದ್ದ ರೋಡ್‌ ಶೋ ಯಶಸ್ಸಿಗೆ ಸಹಕರಿಸಿದ ದಕ್ಷಿಣ ಕೊರಿಯಾದಲ್ಲಿನ ಭಾರತದ ರಾಯಭಾರಿ ಅಮಿತ್‌ ಕುಮಾರ್‌ ಅವರಿಗೆ ಸಚಿವ ಪಾಟೀಲ ಅವರು ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ.
ಕೆ. ಕವಿತಾ ನ್ಯಾಯಾಂಗ ಬಂಧನ ಅವಧಿ ಜುಲೈ 18ರವರೆಗೆ ವಿಸ್ತರಣೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 + nine =
Remember me
