ಅಥಣಿ (ಬೆಳಗಾವಿ):ಹೆರಿಗೆ ನೋವಿನಿಂದ ಬಳಲುತ್ತಿದ್ದ ತುಂಬು ಗರ್ಭಿಣಿಯರಿಬ್ಬರಿಗೂ ಒಂದೇ ಆಂಬುಲೆನ್ಸ್​ನಲ್ಲಿ ಹೆರಿಗೆ ಆಗಿದೆ.
ಇಂತಹ ಅಪರೂಪದ ಘಟನೆ ಭಾನುವಾರ ಜಿಲ್ಲೆಯಲ್ಲಿ ಸಂಭವಿಸಿದ್ದು, ಶುಶ್ರೂಷಕ ಮತ್ತು ಸಿಬ್ಬಂದಿ ಕಾರ್ಯಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.
ಅಥಣಿ ತಾಲೂಕಿನ ಮಲಾಬಾದ ಗ್ರಾಮದ ರುಕ್ಸಾನ್​ ಕಣಬರ್​ ಹಾಗೂ ಬಳ್ಳಿಗೇರಿ ಗ್ರಾಮದ ರಾಜಶ್ರೀ ಕುರಬರ ಅವರಿಗೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಅಥಣಿ ಸರ್ಕಾರಿ ಆಸ್ಪತ್ರೆಗೆ ಆಂಬುಲೆನ್ಸ್​ನಲ್ಲಿ ಕರೆತರಲಾಗುತ್ತಿತ್ತು. ಮಾರ್ಗಮಧ್ಯೆ ಅತೀವ ಹೆರಿಗೆ ನೋವಿನಿಂದ ಮಹಿಯರಿಬ್ಬರಿಗೂ ಆಂಬುಲೆನ್ಸ್​ನಲ್ಲೇ ಶುಶ್ರೂಷಕ ಮಹೇಂದ್ರ ಕೊಟಗಿ ಹಾಗೂ ಸಿಬ್ಬಂದಿ ಸಂಜೀವ ಕಬ್ಬೂರ ಅವರು ಯಶಸ್ವಿಯಾಗಿ ಹೆರಿಗೆ ಮಾಡಿಸಿದ್ದಾರೆ.
ರಾಜಶ್ರೀ ಹೆಣ್ಣು ಮಗುವಿಗೆ ಹಾಗೂ ರುಕ್ಸಾನಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ-ಮಗು ಆರೋಗ್ಯವಾಗಿವೆ. ಆಂಬುಲೆನ್ಸ್​ ಸಿಬ್ಬಂದಿ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
PHOTO GALLERY| ಚಿರು ಫೋಟೋ ಇಟ್ಟುಕೊಂಡು ಸೀಮಂತ ಶಾಸ್ತ್ರ ಮಾಡಿಸಿಕೊಂಡ ಮೇಘನಾ ರಾಜ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 + 9 =
Remember me
