| ಕೆ.ಎನ್.ರಾಘವೇಂದ್ರಮಂಡ್ಯಮುಂಬರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್‌ನಿಂದ ಸ್ಪರ್ಧಿಸಲು ಮಂಡ್ಯದಲ್ಲಿ ಪೈಪೋಟಿ ಜೋರಾಗಿದೆ. ಬಿ ಫಾರ್ಮ್ ಬೇಕಾದವರೂ ಅರ್ಜಿ ಸಲ್ಲಿಸುವಂತೆ ಕೆಪಿಸಿಸಿ ಅಧ್ಯಕ್ಷರು ಆಕಾಂಕ್ಷಿಗಳಿಂದ ಆಹ್ವಾನಿಸಿದ್ದರು. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಆಕಾಂಕ್ಷಿತರು ಪೈಪೋಟಿಗೆ ಬಿದ್ದವರಂತೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಅದರಲ್ಲೂ ಮಂಡ್ಯ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್​ ಅಭ್ಯರ್ಥಿಯಾಗಲು ಆಕಾಂಕ್ಷಿತರ ಪಟ್ಟಿ ಹೆಚ್ಚುತ್ತಲೇ ಇದೆ.
ಅರ್ಜಿ ಪಡೆದು ಶುಲ್ಕ ಸಹಿತ ಸಲ್ಲಿಸುವಂತೆ ಸೂಚನೆ ನೀಡಲಾಗಿತ್ತು. ಇದಕ್ಕಾಗಿ ನ.15ರವರೆಗೆ ಅವಕಾಶ ಕಲ್ಪಿಸಲಾಗಿತ್ತು. ಆದರೆ ಆಕಾಂಕ್ಷಿತರ ಸಂಖ್ಯೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ನ.21ರವರೆಗೆ ವಿಸ್ತರಣೆ ಮಾಡಲಾಗಿದೆ. ಆದರೆ ನ.15ರವರೆಗೆ ಪಕ್ಷದ ಮೂಲಗಳ ಪ್ರಕಾರ ಮಂಡ್ಯ ಕ್ಷೇತ್ರದಲ್ಲಿ 13, ಮದ್ದೂರಿನಲ್ಲಿ 1, ಮಳವಳ್ಳಿಯಲ್ಲಿ 3, ನಾಗಮಂಗಲದಲ್ಲಿ 1, ಶ್ರೀರಂಗಪಟ್ಟಣದಲ್ಲಿ 3, ಮೇಲುಕೋಟೆಯಲ್ಲಿ 4, ಕೆ.ಆರ್.ಪೇಟೆ ಕ್ಷೇತ್ರದಲ್ಲಿ 6 ಜನರು ಅರ್ಜಿ ಸಲ್ಲಿಸಿದ್ದಾರೆಂದು ತಿಳಿದುಬಂದಿದೆ. ಇದು ಪ್ರಾಥಮಿಕ ಮಾಹಿತಿಯಷ್ಟೇ ಆಗಿದ್ದು, ಅರ್ಜಿ ಹಾಕುವವರ ಸಂಖ್ಯೆ ಹೆಚ್ಚಿರುವ ಸಾಧ್ಯತೆ ಇದೆ. ವಿಶೇಷವೆಂದರೆ ಹೊರ ಜಿಲ್ಲೆಯವರೂ ಕೂಡ ಅರ್ಜಿ ಸಲ್ಲಿಸುತ್ತಿದ್ದಾರೆಂದು ತಿಳಿದುಬಂದಿದೆ.
ಪ್ರಮುಖವಾಗಿ ತೀವ್ರ ಕುತೂಹಲ ಕೆರಳಿಸಿರುವ ಹಾಗೂ ಪ್ರಮುಖ ಕ್ಷೇತ್ರವಾಗಿರುವ ಮಂಡ್ಯದಿಂದ ಮಾಜಿ ಸಚಿವ ಎಂ.ಎಸ್.ಆತ್ಮಾನಂದ, ಮಾಜಿ ಶಾಸಕ ಎಚ್.ವಿ.ರಾಮು, ಮನ್‌ಮುಲ್ ನಿರ್ದೇಶಕ ಉಮ್ಮಡಹಳ್ಳಿ ಶಿವಪ್ಪ, ಕಳೆದ ಚುನಾವಣೆಯಲ್ಲಿ ಪರಾಜಿತ ಅಭ್ಯರ್ಥಿ ಗಣಿಗ ರವಿಕುಮಾರ್, ಅಮರಾವತಿ ಚಂದ್ರಶೇಖರ್, ಹಾಲಹಳ್ಳಿ ರಾಮಲಿಂಗಯ್ಯ, ಹಾಲಹಳ್ಳಿ ಅಶೋಕ್, ಅಂಜನಾ ಶ್ರೀಕಾಂತ್, ಸಿದ್ಧಾರೂಢ ಸತೀಶ್, ಚಿದಂಬರ್, ಡಾ.ಕೃಷ್ಣ, ಬಿ.ಸಿ.ಶಿವಾನಂದ, ಹನಕೆರೆ ಶಿವರಾಮು ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಇವರೊಟ್ಟಿಗೆ ಹೊರೆ ಇಳಿಸಿ ಕೈ ಹಿಡಿಯಲು ಸಜ್ಜಾಗಿರುವ ಕೆ.ಕೆ.ರಾಧಾಕೃಷ್ಣ ಕೀಲಾರ ಅವರು ಅರ್ಜಿ ಸಲ್ಲಿಸಿದ್ದಾರೆಂದು ಹೇಳಲಾಗಿದೆ.
ಇನ್ನು ಮಳವಳ್ಳಿ ಕ್ಷೇತ್ರದಿಂದ ಮಾಜಿ ಸಚಿವ ಪಿ.ಎಂ.ನರೇಂದ್ರಸ್ವಾಮಿ ಅವರೊಟ್ಟಿಗೆ ಮಾಜಿ ಶಾಸಕಿ ಮಲ್ಲಾಜಮ್ಮ ಮತ್ತು ಡಾ.ಮೂರ್ತಿ ಅರ್ಜಿ ಸಲ್ಲಿಸಿದ್ದಾರೆಂದು ತಿಳಿದುಬಂದಿದೆ. ಶ್ರೀರಂಗಪಟ್ಟಣದಿಂದ ಮಾಜಿ ಶಾಸಕ ರಮೇಶ ಬಂಡಿಸಿದ್ದೇಗೌಡ, ಪುಟ್ಟೇಗೌಡ, ಚಂದ್ರಶೇಖರ್, ಮೇಲುಕೋಟೆಯಿಂದ ಡಾ.ರವೀಂದ್ರ, ಎಚ್.ಟಿ.ತ್ಯಾಗರಾಜು, ನಾಗಭೂಷಣ್ ಅವರೊಟ್ಟಿಗೆ ಎಲ್.ಡಿ.ರವಿ ಮತ್ತು ಕೆ.ಆರ್.ಪೇಟೆ ಕ್ಷೇತ್ರದಿಂದ ಉದ್ಯಮಿ ವಿಜಯ ರಾಮೇಗೌಡ, ಮಾಜಿ ಶಾಸಕರಾದ ಕೆ.ಬಿ.ಚಂದ್ರಶೇಖರ್, ಬಿ.ಪ್ರಕಾಶ್, ಕೃಷ್ಣಮೂರ್ತಿ, ನಾಗೇಂದ್ರಕುಮಾರ್, ಕಿಕ್ಕೇರಿ ಸುರೇಶ್ ಅರ್ಜಿ ಸಲ್ಲಿಸಿದ್ದಾರೆ ಎನ್ನಲಾಗಿದೆ.
ನಾಗಮಂಗಲ, ಮದ್ದೂರಿನಿಂದ ಒಂದೇ ಅರ್ಜಿ:ಉಳಿದ ಐದು ಕ್ಷೇತ್ರಗಳಿಗೆ ಹೋಲಿಸಿದರೆ ನಾಗಮಂಗಲ ಹಾಗೂ ಮದ್ದೂರು ಕ್ಷೇತ್ರದಿಂದ ತಲಾ ಒಂದೊಂದು ಅರ್ಜಿ ಸಲ್ಲಿಕೆಯಾಗಿದೆ. ನಾಗಮಂಗಲದಿಂದ ಕೆಪಿಸಿಸಿ ಉಪಾಧ್ಯಕ್ಷರೂ ಆದ ಮಾಜಿ ಸಚಿವ ಎನ್.ಚಲುವರಾಯಸ್ವಾಮಿ ಮತ್ತು ಮದ್ದೂರಿನಿಂದ ಮಾಜಿ ಸಿಎಂ ಎಸ್‌.ಎಂ.ಕೃಷ್ಣ ಕುಟುಂಬದ ಕುಡಿ ಜಿಪಂ ಮಾಜಿ ಅಧ್ಯಕ್ಷ ಎಸ್.ಗುರುಚರಣ್ ಅರ್ಜಿ ಹಾಕಿದ್ದಾರೆ.
ಭಾರತ್ ಜೋಡೋ ಎಫೆಕ್ಟ್:ಕಳೆದ ವಿಧಾನಸಭಾ ಚುನಾವಣೆಯಲ್ಲಿ ಏಳು ಕ್ಷೇತ್ರದಲ್ಲಿ ಹೀನಾಯ ಸೋಲು ಅನುಭವಿಸಿದ ಕಾಂಗ್ರೆಸ್, ಮಂಡ್ಯ ಜಿಲ್ಲೆಯಲ್ಲಿ ಅಸ್ಥಿತ್ವ ಕಳೆದುಕೊಂಡಿದೆ ಎನ್ನುವಂತಹ ಸ್ಥಿತಿ ಇತ್ತು. ಆದರೆ ಕೆಪಿಸಿಸಿ ಉಪಾಧ್ಯಕ್ಷರೂ ಆದ ಮಾಜಿ ಸಚಿವರಾದ ಎನ್.ಚಲುವರಾಯಸ್ವಾಮಿ ಹಾಗೂ ಪಿ.ಎಂ.ನರೇಂದ್ರಸ್ವಾಮಿ ಅವರ ಸಂಘಟನೆಯಿಂದಾಗಿ ಜಿಲ್ಲೆಯಲ್ಲಿ ಪಕ್ಷ ಬಲವಾಗುತ್ತಿದೆ. ಮಾತ್ರವಲ್ಲದೆ ಎರಡು ಎಂಎಲ್‌ಸಿ ಚುನಾವಣೆಯನ್ನು ಭರ್ಜರಿಯಾಗಿಯೇ ಗೆದ್ದುಕೊಂಡರು.
ಈ ನಡುವೆ ಜಿಲ್ಲೆಯಲ್ಲಿ ನಡೆದ ಭಾರತ್ ಜೋಡೋ ಯಾತ್ರೆಯ ಅದ್ಭುತ ಯಶಸ್ಸು ಪಕ್ಷದಲ್ಲಿ ಹೊಸ ಹುಮ್ಮಸ್ಸನ್ನು ತಂದಿದೆ. ಇದನ್ನು ಸ್ವತಃ ರಾಷ್ಟ್ರ ಹಾಗೂ ರಾಜ್ಯಮಟ್ಟದ ನಾಯಕರೇ ಹೇಳಿದ್ದರು. ಮೂರು ದಿನದ ಯಾತ್ರೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಾಂಗ್ರೆಸ್ ಶಕ್ತಿ ಪ್ರದರ್ಶನ ಮಾಡಿದ್ದರು. ಇದು ಮುಖಂಡರು, ಕಾರ್ಯಕರ್ತರಲ್ಲಿ ಚೈತನ್ಯ ಮೂಡುವಂತೆ ಮಾಡಿದೆ. ಈ ಹಿನ್ನೆಲೆಯಲ್ಲಿ ವಿಧಾನಸಭಾ ಚುನಾವಣಾ ಅಖಾಡಕ್ಕೆ ಇಳಿಯಲು ಸಜ್ಜಾಗುತ್ತಿದ್ದಾರೆ.
ರೇಸ್‌ನಲ್ಲಿ ಮಾಜಿ ಸಂಸದೆ?:ಚುನಾವಣಾ ಸ್ಪರ್ಧಾಕಾಂಕ್ಷಿಗಳ ಪಟ್ಟಿಯಲ್ಲಿ ಮಾಜಿ ಸಂಸದೆ ರಮ್ಯಾ ಅವರ ಹೆಸರು ಕೇಳಿಬರುತ್ತಿದೆ. ಮಂಡ್ಯ ಜಿಲ್ಲೆಯಿಂದ ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸಲು ಅರ್ಜಿ ಸಲ್ಲಿಸಿದ್ದಾರೆನ್ನುವ ಚರ್ಚೆ ಕ್ಷೇತ್ರದಲ್ಲಿ ನಡೆಯುತ್ತಿದೆ. ಆದರೆ ಈ ಬಗ್ಗೆ ಪಕ್ಷದ ಮುಖಂಡರು ಸ್ಪಷ್ಟತೆ ನೀಡಿಲ್ಲ.
ಮುಂಬರುವ ಚುನಾವಣೆಯಲ್ಲಿ ಪಕ್ಷದಿಂದ ಸ್ಪರ್ಧಿಸುವವರಿಗೆ ಅರ್ಜಿ ಸಲ್ಲಿಸುವಂತೆ ಸೂಚನೆ ನೀಡಲಾಗಿತ್ತು. ಅದರಂತೆ ಹೆಚ್ಚಿನ ಸಂಖ್ಯೆಯಲ್ಲಿ ಆಕಾಂಕ್ಷಿತರು ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಇದು ಪಕ್ಷ ಸದೃಢವಾಗಿದೆ ಎನ್ನುವುದನ್ನು ತೋರಿಸಿದೆ. ಆದರೆ ವರಿಷ್ಠರು ಯಾರಿಗೆ ಸ್ಪರ್ಧಿಸಲು ಅವಕಾಶ ಕೊಟ್ಟರೂ ಉಳಿದ ಆಕಾಂಕ್ಷಿತರು ಒಗ್ಗಟ್ಟಾಗಿ ಚುನಾವಣೆ ಮಾಡಿ ಅಭ್ಯರ್ಥಿಯನ್ನು ಗೆಲ್ಲಿಸಲು ಶ್ರಮಿಸಬೇಕಿದೆ.| ಸಿ.ಡಿ.ಗಂಗಾಧರಕಾಂಗ್ರೆಸ್ ಜಿಲ್ಲಾಧ್ಯಕ್ಷ
ತೆನೆ ಇಳಿಸಿ ಕೈ ಹಿಡಿಯಲು ಒಪ್ಪಿದ ಅರಸೀಕೆರೆ ಶಾಸಕ ಶಿವಲಿಂಗೇಗೌಡ!

ಆನೆ ದಂತದಿಂದ ತಯಾರಿಸಿದ ವಾಕಿಂಗ್ ಸ್ಟಿಕ್ ಸೇರಿದಂತೆ ಪುರಾತನ ಕಾಲದ ವಸ್ತುಗಳ ಸಮೇತ ಸಿಸಿಬಿಗೆ ಸಿಕ್ಕಿಬಿದ್ದ ಗ್ಯಾಂಗ್​!

ಇಂತಹ ಹೆಂಗಸು ನನಗೆ ಬೇಡ, ಮಗನೇ ನಿನ್ನ ಅಮ್ಮ ಸರಿಯಿಲ್ಲ, ಆಕೆ ಜತೆ ಇರಬೇಡ… ಎಂದು ಮನದ ನೋವು ಬಿಚ್ಚಿಟ್ಟು ದುರಂತ ಅಂತ್ಯ ಕಂಡ ತಂದೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − eight =
Remember me
