ಬೆಂಗಳೂರು:ಚನ್ನಪಟ್ಟಣ, ರಾಮನಗರ, ಮಾಗಡಿ, ಕನಕಪುರ ಮತ್ತು ಹಾರೋಹಳ್ಳಿ ಸೇರಿಸಿ ಬೆಂಗಳೂರು ದಕ್ಷಿಣ ಜಿಲ್ಲೆ ಮಾಡಬೇಕೆಂಬ ಮನವಿಯನ್ನು ಡಿಸಿಎಂ ಡಿ. ಕೆ. ಶಿವಕುಮಾರ್ ನೇತೃತ್ವದ ಜನಪ್ರತಿನಿಧಿಗಳ ನಿಯೋಗವು ಸಿಎಂ ಸಿದ್ದರಾಮಯ್ಯ ಅವರಿಗೆ ವಿಧಾನಸೌಧದಲ್ಲಿ ಮಂಗಳವಾರ ಸಲ್ಲಿಸಿತು.
ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ, ಶಾಸಕ ಇಕ್ಬಾಲ್ ಹುಸೈನ್, ಮಾಜಿ ಸಂಸದ ಡಿ ಕೆ ಸುರೇಶ್, ಎಂಎಲ್​ಸಿಗಳಾದ ಪುಟ್ಟಣ್ಣ, ಎಸ್ ರವಿ, ಸುಧಾಮದಾಸ್, ಬೆಂಗಳೂರು ಮೈಸೂರು ಇನ್ ಫ್ರಾಸ್ಟ್ರಕ್ಚರ್ ಕಾರಿಡಾರ್ ಪ್ರದೇಶ ಯೋಜನೆ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಘುನಂದನ್ ರಾಮಣ್ಣ, ಮಾಜಿ ಶಾಸಕರಾದ ಸಿ. ಎಂ. ಲಿಂಗಪ್ಪ, ರಾಜು, ಅಶ್ವಥ್ ಮತ್ತಿತರರು ಉಪಸ್ಥಿತರಿದ್ದರು.
ಪ್ರಸ್ತುತ ಚನ್ನಪಟ್ಟಣ, ರಾಮನಗರ, ಕನಕಪುರ, ಮಾಗಡಿ ವಿಧಾನಸಭಾ ಕ್ಷೇತ್ರ ರಾಮನಗರ ಜಿಲ್ಲಾ ವ್ಯಾಪ್ತಿಗೆ ಸೇರಿವೆ. ಈಗಿನ ಬೇಡಿಕೆಯಂತೆ ರಾಮನಗರ ಜಿಲ್ಲೆಯ ಬದಲು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಪರಿಗಣಿಸಲು ಒತ್ತಾಯಿಸಲಾಗಿದೆ.
ರಾಮನಗರ ಜಿಲ್ಲೆ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಯವರ ಮಹತ್ವಾಕಾಂಕ್ಷಿಯಿಂದ ರೂಪುಗೊಂಡು ಬೆಳೆದು ನಿಂತಿದೆ. ಒಂದುವೇಳೆ ಡಿ.ಕೆ.ಶಿವಕುಮಾರ್ ಬೇಡಿಕೆಗೆ ಮಣೆ ಹಾಕಿದ್ದೇ ಆದರೆ ಮತ್ತೊಂದು ರಾಜಕೀಯ ಸಂಘರ್ಷಕ್ಕೂ ಹಾದಿ‌ಮಾಡಿಕೊಟ್ಟಂತಾಗಲಿದೆ.
ಸಚಿನ್​​ ಅಲ್ಲ ಭಾರತೀಯ ಕ್ರಿಕೆಟ್​ ಇತಿಹಾಸದಲ್ಲಿ ಈತನೇ ಶ್ರೇಷ್ಠ ಕ್ರಿಕೆಟಿಗ​: ಸಿಕ್ಸರ್​ ಸಿಧು ಅಚ್ಚರಿಯ ಹೇಳಿಕೆ

ಹುಟ್ಟುವ ಮಗು ರೇಣುಕಾಸ್ವಾಮಿಯಂತಹ ತಂದೆ ಮುಖ ನೋಡದಿರುವುದೇ ಒಳಿತು! ದಚ್ಚು ಪರ ನಿಂತ ಬಿಗ್​ಬಾಸ್​ ಬ್ಯೂಟಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven − three =
Remember me
