ನವದೆಹಲಿ:ಪಿಎಂ ಕುಸುಮ್ ಯೋಜನೆಯಡಿ ಸೋಲಾರ್ ಪಂಪ್ಸೆಟ್ ಅಳವಡಿಕೆಗೆ ಕರ್ನಾಟಕದಿಂದಲೇ 1.79 ಲಕ್ಷ ರೈತರು ಬೇಡಿಕೆ ಇಟ್ಟಿದ್ದಾರೆ ಎಂದು ಕೇಂದ್ರ ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ ಹೇಳಿದರು.
ಇದನ್ನೂ ಓದಿ:ಶ್ರೀಲಂಕಾ ಮಡಿಲಿಗೆ ಟ್ರೋಫಿ: 27 ವರ್ಷಗಳಲ್ಲಿ ಶ್ರೀಲಂಕಾ ವಿರುದ್ಧ ಭಾರತಕ್ಕೆ ಸರಣಿ ಸೋಲು!
ಸಂಸತ್ ಅಧಿವೇಶನದಲ್ಲಿ ಈ ಬಗ್ಗೆ ಪ್ರಸ್ತಾಪಿಸಿದ ಸಚಿವರು, ಕರ್ನಾಟಕದಿಂದ ನಮಗೆ ಬರೋಬ್ಬರಿ 1,79,588 ಸೋಲಾರ್ ಪಂಪ್‌ ಅಳವಡಿಕೆಗೆ ಬೇಡಿಕೆ ಬಂದಿದೆ ಎಂದು ವಿವರಿಸಿದರು.
ವಿಫಲವಾಗಿದ್ರೆ ಬೇಡಿಕೆ ಏಕಿರುತ್ತಿತ್ತು? ವಿಪಕ್ಷದವರು ಪಿಎಂ ಕುಸುಮ್ ಯೋಜನೆ ಬಗ್ಗೆ ಇಲ್ಲ-ಸಲ್ಲದ ಮಾತನಾಡುತ್ತಾರೆ. ಹಾಗೊಂದು ವೇಳೆ ಈ ಯೋಜನೆ ವಿಫಲವಾಗಿದ್ದರೆ ಪ್ರಸ್ತುತ ಕಾಂಗ್ರೆಸ್ ಆಡಳಿತದಲ್ಲಿರುವ ಕರ್ನಾಟಕ ಸರ್ಕಾರದವರು ಏಕೆ ಅಧಿಕೃತವಾಗಿ ನಮಗೆ ಇಷ್ಟೊಂದು ಬೇಡಿಕೆ ಕಳುಹಿಸುತ್ತಿದ್ದರು? ಎಂದು ಸಚಿವರು ಪ್ರಶ್ನಿಸಿದರು.
ಪಿಎಂ ಕುಸುಮ್ ಯೋಜನೆಯನ್ನು 2019 ರಲ್ಲಿ ಪ್ರಾರಂಭಿಸಿದ್ದು, ಸ್ವತಂತ್ರ ಸೋಲಾರ್ ಪಂಪ್‌ಗಳ ಸ್ಥಾಪನೆಗೆ ರೈತರಿಗೆ ಹಣಕಾಸಿನ ನೆರವು ಕೂಡ ನೀಡಲಾಗಿದೆ. ರೈತರಿಗೆ ಇದು ಆಶಾದಾಯಕ ವಾಗಿದೆ ಎಂದು ಪ್ರತಿಪಾದಿಸಿದರು.
ಸೂರ್ಯ ಘರ್ ಗೆ 1.30 ಕೋಟಿ ನೋಂದಣಿ:ಇನ್ನು, ಪ್ರಧಾನ ಮಂತ್ರಿ ಸೂರ್ಯ ಘರ್ ಮುಫ್ತ್ ಬಿಜ್ಲಿ ಯೋಜನೆಗೆ ಜನರಿಂದ ಅಗಾಧ ಪ್ರತಿಕ್ರಿಯೆ ವ್ಯಕ್ತವಾಗಿದೆ. ಜುಲೈ 2024ರವರೆಗೆ 1.30 ಕೋಟಿಗೂ ಹೆಚ್ಚು ಜನರು ನೋಂದಣಿ ಮಾಡಿಕೊಂಡಿದ್ದಾರೆ ಎಂದರು. ಸೂರ್ಯ ಘರ್ ಯೋಜನೆಗೆ ಈಗಾಗಲೇ 15 ಲಕ್ಷಕ್ಕೂ ಹೆಚ್ಚು ಗ್ರಾಹಕರ ಅರ್ಜಿ ಸ್ವೀಕರಿಸಲಾಗಿದೆ. ಸುಮಾರು 2.3 ಲಕ್ಷ ಸೌರ ಮೇಲ್ಛಾವಣಿ ಸ್ಥಾಪಿಸಲಾಗಿದೆ ಎಂದರು.
ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಕೇಂದ್ರ ಸರ್ಕಾರ ಕೈಗೊಂಡ ಐತಿಹಾಸಿಕ ನಿರ್ಧಾರಗಳಿಂದಾಗಿ, ನವೀಕರಿಸಬಹುದಾದ ಇಂಧನ ಸ್ಥಾಪಿತ ಸಾಮರ್ಥ್ಯದಲ್ಲಿ ಭಾರತ ನಂ.4ನೇ ಸ್ಥಾನದಲ್ಲಿದೆ. ಪವನ ಶಕ್ತಿ ಸಾಮರ್ಥ್ಯದಲ್ಲಿ 4ನೇ ಸ್ಥಾನ ಮತ್ತು ಸೌರ ಪಿವಿ ಸಾಮರ್ಥ್ಯದಲ್ಲಿ 5ನೇ ಸ್ಥಾನದಲ್ಲಿದ್ದೇವೆ ಎಂದು ಸದನಕ್ಕೆ ಮಾಹಿತಿ ನೀಡಿದರು.
ಎನ್​ಡಿಎ ಸರ್ಕಾರ 21000 ಕೋಟಿ ವೆಚ್ಚ ಮಾಡಲಿದೆ:ಯುಪಿಎ ಆಡಳಿತಾವಧಿಯ ಒಂದು ದಶಕದಲ್ಲಿ ನವೀಕರಿಸಬಹುದಾದ ಇಂಧನ ಬಳಕೆಗೆ ಸರ್ಕಾರ ಕೇವಲ 6091 ಕೋಟಿ ರೂ. ವೆಚ್ಚ ಮಾಡಿತ್ತು. ಆದರೆ, NDA ಸರ್ಕಾರ ಈ ವರ್ಷವೇ ಬರೋಬ್ಬರಿ 21,000 ಕೋಟಿ ರೂ.ವೆಚ್ಚ ಮಾಡಲಿದೆ ಎಂದು ತಿಳಿಸಿದರು.
ಪ್ರಥಮ ಪ್ರಧಾನ ಕಚೇರಿ:ಪ್ರಧಾನಿ ಮೋದಿಯವರ ದೂರದೃಷ್ಟಿಯಿಂದಾಗಿ ಭಾರತ ಈಗ ಅಂತಾರಾಷ್ಟ್ರೀಯ ಸೌರ ಒಕ್ಕೂಟದ ಪ್ರಧಾನ ಕಚೇರಿಯನ್ನು ಹೊಂದಿದೆ. ಸ್ವಾತಂತ್ರ್ಯ ಬಂದಾಗಿನಿಂದ ಯಾವ ಅಂತರಾಷ್ಟ್ರೀಯ ಸಂಸ್ಥೆಯು ಭಾರತದಲ್ಲಿ ಪ್ರಧಾನ ಕಛೇರಿಯನ್ನು ಸ್ಥಾಪಿಸಲು ಯೋಚನೆಯನ್ನೇ ಮಾಡಿರಲಿಲ್ಲ. ಮೋದಿ ಕಾಲಘಟ್ಟದಲ್ಲಿ ಇದು ಸಾಧ್ಯವಾಗಿದ್ದು, ದೂರದೃಷ್ಟಿಯ ಅವರ ನಾಯಕತ್ವಕ್ಕೆ ಇದೊಂದು ನಿದರ್ಶನ ಎಂದು ಜೋಶಿ ಬಣ್ಣಿಸಿದರು.
ಶ್ರೀಲಂಕಾ ಮಡಿಲಿಗೆ ಟ್ರೋಫಿ: 27 ವರ್ಷಗಳಲ್ಲಿ ಶ್ರೀಲಂಕಾ ವಿರುದ್ಧ ಭಾರತಕ್ಕೆ ಸರಣಿ ಸೋಲು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two + 17 =
Remember me
