ವಿಜಯವಾಣಿ ಸುದ್ದಿಜಾಲ ಬೆಂಗಳೂರು
ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್ಸಿ) ಆ.25ರಂದು ನಡೆಸಲು ನಿರ್ಧರಿಸಿರುವ ಕೆಎಎಸ್ ಪೂರ್ವಭಾವಿ ಪರೀಕ್ಷೆ ದಿನವೇ ಐಬಿಪಿಎಸ್​ನ ಬ್ಯಾಂಕ್ ಕ್ಲರಿಕಲ್ ಹುದ್ದೆಗಳ ಪರೀಕ್ಷೆ ನಡೆಸುತ್ತಿರುವ ಕಾರಣ ಕೆಎಎಸ್ ಪರೀಕ್ಷೆಯನ್ನು ಮುಂದೂಡುವಂತೆ ಅಭ್ಯರ್ಥಿಗಳು ಒತ್ತಾಯಿಸಿದ್ದಾರೆ.
ಕೆಎಎಸ್ ಪ್ರಿಲಿಮ್ಸ್​ ಪರೀಕ್ಷೆಗೆ 2,10,541 ಮಂದಿ ನೋಂದಣಿ ಮಾಡಿಕೊಂಡಿದ್ದು, ಐಬಿಪಿಎಸ್ ಕ್ಲರಿಕಲ್ ಹುದ್ದೆಗೆ 50 ಸಾವಿರಕ್ಕೂ ಹೆಚ್ಚಿನ ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಎರಡೂ ಪರೀಕ್ಷೆಗೆ ನೋಂದಣಿ ಮಾಡಿಕೊಂಡಿರುವ ಅಭ್ಯರ್ಥಿಗಳಿಗೆ ಒಂದು ಪರೀಕ್ಷೆ ಕೈತಪ್ಪಲಿದೆ. ಕೆಎಎಸ್ ಪರೀಕ್ಷೆ ಮುಂದೂಡಿದರೆ ರಾಜ್ಯದವರಿಗೇ ಲಾಭವಾಗಲಿದೆ. ಇಲ್ಲವಾದಲ್ಲಿ ಕೇಂದ್ರ ಸರ್ಕಾರದ ಹುದ್ದೆಗಳ ವಿಚಾರದಲ್ಲಿ ರಾಜ್ಯದ ಉದ್ಯೋಕಾಂಕ್ಷಿಗಳಿಗೆ ಅನ್ಯಾಯವಾಗಲಿದೆ ಎನ್ನುತ್ತಾರೆ ಅಭ್ಯರ್ಥಿ ರಾಜೇಶ್.
ಕೆಎಎಸ್ ಪರೀಕ್ಷೆ ನಿಗದಿಗೂ ಮೊದಲೇ ಐಬಿಪಿಎಸ್ ಪರೀಕ್ಷೆ ನಿಗದಿಯಾಗಿದೆ. ಅಲ್ಲದೆ, ಕನ್ನಡ ಭಾಷೆಯಲ್ಲಿ ಐಬಿಪಿಎಸ್ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿರುವುದರಿಂದ ಸ್ಥಳೀಯವಾಗಿ 50 ಸಾವಿರಕ್ಕೂ ಹೆಚ್ಚಿನ ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದಾರೆ. ರಾಜ್ಯದ ಆಕಾಂಕ್ಷಿಗಳ ಹಿತದೃಷ್ಟಿಯಿಂದ ಪರೀಕ್ಷೆಯನ್ನು ಮುಂದೂಡಬೇಕೆಂದು ಕೆಪಿಎಸ್ಸಿ ಅಧ್ಯಕ್ಷರಿಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಪತ್ರ ಬರೆದು ಒತ್ತಾಯಿಸಿದ್ದಾರೆ. ಕೆಎಎಸ್, ಐಬಿಪಿಎಸ್ ಪರೀಕ್ಷೆ ಜತೆಗೆ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ನಡೆಸುವ ಜಂಟಿ ಸಿಎಸ್​ಐಆರ್ ಯುಜಿಸಿ ನೆಟ್ ಪರೀಕ್ಷೆ ಕೂಡ ಅದೇ ದಿನ ನಡೆಸಲಾಗುತ್ತಿದೆ. ಖಾನಾಪುರ ಶಾಸಕ ವಿಠ್ಠಲ್ ಎಸ್ ಹಲಗೇಕರ್, ಸಂಸದರಾದ ಶ್ರೇಯಸ್ ಎಂ. ಪಟೇಲ್, ತೇಜಸ್ವಿಸೂರ್ಯ ಸೇರಿ ಹಲವರು ಸಿಎಂಗೆ ಪತ್ರ ಬರೆದು ಪರೀಕ್ಷೆ ಮುಂದೂಡಲು ಮನವಿ ಮಾಡಿದ್ದಾರೆ.
ಕೆಪಿಎಸ್ಸಿ ವಾದವೇನು?:ರಾಜ್ಯದಲ್ಲಿ 2023-24ನೇ ಸಾಲಿನ 384 ಕೆಎಎಸ್ ಜೆಗೆಟೆಡ್ ಪ್ರೊಬೇಷನರಿಸ್ ಹುದ್ದೆಗಳನ್ನು ಭರ್ತಿ ಮಾಡಲು ಮೇ 5ರಂದು ಪೂರ್ವಭಾವಿ ಪರೀಕ್ಷೆ ನಡೆಸಲು ನಿರ್ಧರಿಸಲಾಗಿತ್ತು. ಲೋಕಸಭಾ ಚುನಾವಣೆ ಹಿನ್ನೆಲ್ಲಿಯಲ್ಲಿ ಜು.21ಕ್ಕೆ ಮುಂದೂಡಲಾಯಿತು. ಬಳಿಕ 2017-18ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದ ಎಲ್ಲ ಅಭ್ಯರ್ಥಿಗಳಿಗೆ ವಯಸ್ಸಿನ ನಿರ್ಬಂಧವಿಲ್ಲದೆ ಒಂದು ಬಾರಿಗೆ ಸೀಮಿತಗೊಳಿಸಿ ಅರ್ಜಿ ಸಲ್ಲಿಸಲು ಹೆಚ್ಚುವರಿ ವಿಶೇಷ ಅವಕಾಶವನ್ನು ನೀಡಿದ್ದರಿಂದ ಅರ್ಜಿ ಸಲ್ಲಿಸಲು 15 ದಿನಗಳ ಅವಕಾಶ ನೀಡಿ ಪರೀಕ್ಷೆಯನ್ನು ಆ.25ಕ್ಕೆ ಮರು ನಿಗದಿ ಮಾಡಲಾಗಿದೆ. ಆಯೋಗವು ನಡೆಸುವ ವಿವಿಧ ನೇಮಕಾತಿ ಪರೀಕ್ಷೆಗಳ ದಿನಾಂಕವನ್ನು ನಿಗದಿ ಮಾಡುವ ಮುನ್ನ ಯುಪಿಎಸ್ಸಿ, ಎಸ್​ಎಸ್​ಸಿ ಹಾಗೂ ಕೆಇಎ ವಿವಿಧ ಪ್ರಾಧಿಕಾರಗಳನ್ನು ಪರಿಶೀಲಿಸಿದ ನಂತರವೇ ಪರೀಕ್ಷಾ ದಿನಾಂಕವನ್ನು ನಿಗದಿ ಮಾಡಲಾಗುತ್ತದೆ. ಆ.25ರಂದು ಯಾವುದೇ ಪರೀಕ್ಷೆಗಳು ನಿಗದಿಯಾಗದಿರುವ ಕಾರಣ ಪರೀಕ್ಷೆಯನ್ನು ನಿಗದಿ ಮಾಡಲಾಗಿದೆ. ರಾಜ್ಯದ 700 ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲು ಎಲ್ಲ ರೀತಿಯ ಪೂರ್ವಭಾವಿ ಸಿದ್ಧತೆಗಳನ್ನು ಈಗಾಗಲೇ ಮಾಡಿಕೊಳ್ಳಲಾಗುತ್ತಿದೆ. ಅಧಿಸೂಚನೆ ಹೊರಡಿಸಿದ ಒಂದು ವರ್ಷದೊಳಗೆ ಪರೀಕ್ಷಾ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕಿದೆ. ಪೂರ್ವಭಾವಿ, ಮುಖ್ಯ ಪರೀಕ್ಷೆ ಮತ್ತು ವ್ಯಕ್ತಿತ್ವ ಪರೀಕ್ಷೆ ಸೇರಿ ಮೂರು ಹಂತದಲ್ಲಿ ಪ್ರಕ್ರಿಯೆ ನಡೆಸಬೇಕಿದೆ. ಒಂದು ವೇಳೆ ಮತ್ತೊಮ್ಮೆ ಪರೀಕ್ಷೆ ಮುಂದೂಡಿದರೆ, ನಿಗದಿತ ಕಾಲಮಿತಿಯಲ್ಲಿ ಪರೀಕ್ಷೆ ನಡೆಸಲು ಕಷ್ಟವಾಗಲಿದೆ ಎಂಬುದು ಕೆಪಿಎಸ್ಸಿ ವಾದವಾಗಿದೆ.
ಕೆಎಎಸ್ ಪೂರ್ವಭಾವಿ ಪರೀಕ್ಷೆಗೆ ಈಗಾಗಲೇ ಎಲ್ಲ ರೀತಿಯ ಸಿದ್ಧತೆಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಆ.25 ರಂದು ನಡೆಸಲು ತೀರ್ವನಿಸಿರುವ ಪರೀಕ್ಷಾ ದಿನಾಂಕದಲ್ಲಿ ಯಾವುದೇ ಬದಲಾವಣೆ ಮಾಡದಿರಲು ತೀರ್ವನಿಸಲಾಗಿದೆ.
| ಡಾ. ರಾಕೇಶ್​ಕುಮಾರ್ ಕೆಪಿಎಸ್ಸಿ ಕಾರ್ಯದರ್ಶಿ
ಜೈಲಿನಿಂದ ನ್ಯಾಯಾಧೀಶರಿಗೆ ನಟ ದರ್ಶನ್ ಮನವಿ; ಪತ್ರದಲ್ಲಿ ಏನೇನಿದೆ..?

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:18 − 7 =
Remember me
