ಬೆಂಗಳೂರು:ಶಾಲೆ ಆರಂಭಕ್ಕೆ ಸರ್ಕಾರ ಸಿದ್ಧತೆ ನಡೆಸುತ್ತಿರುವ ಮಧ್ಯೆಯೇ ಖಾಸಗಿ ಶಾಲೆಗಳು ನಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಪಟ್ಟು ಹಿಡಿದಿವೆ.
ರಾಜ್ಯ ಸರ್ಕಾರ ಜ.1ರಿಂದ 10 ಮತ್ತು ದ್ವಿತೀಯ ಪಿಯು ಶಾಲೆಗಳನ್ನು ಆರಂಭಿಸುವುದಕ್ಕೆ ಸಿದ್ಧತೆ ನಡೆಸುತ್ತಿದೆ. ಈ ಮಧ್ಯೆ ಖಾಸಗಿ ಶಾಲೆಗಳು ತಮ್ಮ ಬೇಡಿಕೆ ಈಡೇರಿಸಿದ ಬಳಿಕ ಪ್ರಾರಂಭ ಮಾಡುವಂತೆ ಸರ್ಕಾರದ ಮೇಲೆ ಒತ್ತಡ ಹಾಕಿವೆ. ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ಡಿ.20ರ ನಂತರ ಆನ್​ಲೈನ್ ಕ್ಲಾಸ್ ಬಂದ್ ಮಾಡುವುದಾಗಿ ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘ(ರುಪ್ಸಾ) ಘೋಷಿಸಿದೆ.
ಆದರೆ, ನಾವು ಯಾವುದೇ ಆನ್​ಲೈನ್ ಕ್ಲಾಸ್ ಬಂದ್ ಮಾಡುವುದಿಲ್ಲ. ಬದಲಾಗಿ ಶಾಲೆ ಆರಂಭಿಸುವ ಮುನ್ನ ರಾಜ್ಯ ಸರ್ಕಾರ ವಿದ್ಯಾಗಮ, ಶಾಲೆ ಹಾಗೂ ಖಾಸಗಿ ಶಾಲೆ ಗಳೆಂಬಂತೆ ಪ್ರತ್ಯೇಕ ಪ್ರಮಾಣಿತ ಕಾರ್ಯಚರಣಾ ವಿಧಾನ (ಎಸ್​ಒಪಿ) ಹೊರಡಿಸಬೇಕು. ಶಿಕ್ಷಕರು ಕರೊನಾಗೆ ತುತ್ತಾ ದರೆ ಅದರ ವೆಚ್ಚವನ್ನು ಸರ್ಕಾರವೇ ಭರಿಸಬೇಕೆಂದು ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಆಡಳಿತ ಮಂಡಳಿಗಳ ಒಕ್ಕೂಟ(ಕ್ಯಾಮ್್ಸ) ಸಂಘಟನೆ ಒತ್ತಾಯಿಸಿದೆ. ಈಗಾಗಲೇ ಎರಡೂ ಸಂಘಟನೆಗಳು ಪ್ರತಿಭಟನೆ ಮೂಲಕ ಸರ್ಕಾರದ ಗಮನ ಸೆಳೆದಿವೆ. ಬೇಡಿಕೆ ಈಡೇರಿಸುವುದಾಗಿ ಸರ್ಕಾರ ಭರವಸೆ ನೀಡಿದ್ದರೂ ಸಮಸ್ಯೆ ಮಾತ್ರ ಬಗೆಹರಿದಿಲ್ಲ.
ಪಾಲಕರ ವಾದ:ಸರ್ಕಾರ ಮೊದಲ ಕಂತಿನ ಶುಲ್ಕ ಪಾವತಿಗೆ ಮಾತ್ರ ಅವಕಾಶ ನೀಡಿದೆ. ಆದರೆ, ಬಲವಂತವಾಗಿ ಶುಲ್ಕ ವಸೂಲಿ ಮಾಡದಂತೆ ಹೇಳಿದೆ. ಕರೊನಾ ಸಂಕಷ್ಟದ ಸ್ಥಿತಿಯಲ್ಲೂ ನಾವು ಮೊದಲ ಕಂತು ಪಾವತಿಸಿದ್ದೇವೆ. ಈಗ ಶಾಲೆಗಳು ಎರಡನೇ ಕಂತು ಪಾವತಿಗೆ ಒತ್ತಡ ಹಾಕುತ್ತಿವೆ. ಆನ್​ಲೈನ್ ಶಿಕ್ಷಣ ನಿಲ್ಲಿಸುವ ಬೆದರಿಕೆ ಮುಂದುವರಿಸಿವೆ ಎಂದು ಪಾಲಕರು ಬೇಸರ ವ್ಯಕ್ತಪಡಿಸಿದ್ದಾರೆ.
ಕ್ಯಾಮ್್ಸ ಬೇಡಿಕೆಗಳು
ರುಪ್ಸಾ ಬೇಡಿಕೆಗಳು
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × three =
Remember me
