ಬೆಂಗಳೂರು:ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆಯ ವಿರುದ್ಧ ಕಾಂಗ್ರೆಸ್​ ಪ್ರತಿಭಟನೆ ಇಳಿದಿದ್ದರೆ ಮತ್ತೊಂದಡೆ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಲು ಬಿಜೆಪಿ ತೀರ್ಮಾನ ಮಾಡಿದೆ. ನಾಳೆ ಬೆಳಗ್ಗೆ 11.30ಕ್ಕೆ ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ಮಾಡೋದಾಗಿ ವಿಪಕ್ಷ ನಾಯಕ ಆರ್.ಅಶೋಕ್ ತಿಳಿಸಿದ್ದಾರೆ.
ಇದನ್ನೂ ಓದಿ:ಮಹಾರಾಷ್ಟ್ರ: ಬಿಸ್ಕತ್ ತಿಂದು 250ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ! ಅಷ್ಟಕ್ಕೂ ಆ ಶಾಲೆಯಲ್ಲಿ ಆಗಿದ್ದೇನು?
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು. ಕಾಂಗ್ರೆಸ್​ನ ನಡಿಗೆ, ಭ್ರಷ್ಟಾಚಾರದ ಕಡೆಗೆ ಎಂಬಂತಾಗಿದೆ. ಈ ಸರ್ಕಾರ ಬಂದಾಗ ಜನರು ಗ್ಯಾರಂಟಿಗಳ ಬಗ್ಗೆ ಭರವಸೆ ಇಟ್ಟುಕೊಂಡಿದ್ದರು. ಆದರೆ ಜನರ ಅಪೇಕ್ಷೆಗೆ ವಿರುದ್ಧವಾಗಿ ಸರ್ಕಾರ ನಡೆಯುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ 65 ಕೇಸುಗಳಿದ್ದು, ಅದನ್ನು ಮುಚ್ಚಿಹಾಕಲು ಯತ್ನಿಸಿದ್ದಾರೆ. ಅಂದಮೇಲೆ ಅವರು ಹೇಗೆ ಕ್ಲೀನ್ ಎನ್ನುವುದು ತಿಳಿದಿಲ್ಲ. ಈಗ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿರುವುದನ್ನು ಕಾಂಗ್ರೆಸ್ ಸ್ವಾಗತ ಮಾಡಬೇಕಿತ್ತು‌. ತನಿಖೆಯಾಗಿ ಸ್ವಚ್ಛವಾಗಿ ಹೊರಬಂದರೆ ಕ್ಲೀನ್ ಎಂದು ನಂಬಹುದು. ಅದನ್ನು ಬಿಟ್ಟು ರಾಜ್ಯಾದ್ಯಂತ ಹೋರಾಟ ಮಾಡಲು ಮುಂದಾಗಿದ್ದಾರೆ ಎಂದು ಕಾಂಗ್ರೆಸ್​ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಸಿಎಂ ಸಿದ್ದರಾಮಯ್ಯ ಅಧಿವೇಶನದಲ್ಲಿ ಉತ್ತರ ಕೊಡದೆ ಪಲಾಯನ ಮಾಡಿದ್ದಾರೆ. ಜೊತೆಗೆ ಪ್ರಕರಣ ಮುಚ್ಚಿಹಾಕಲು ಬೇಕಾದವರನ್ನು ನೇಮಿಸಿದ್ದಾರೆ. ಹೈಕಮಾಂಡ್ ಕೂಡ ಸಿದ್ದರಾಮಯ್ಯ ಅವರ ಭ್ರಷ್ಟಾಚಾರವನ್ನು ಬೆಂಬಲಿಸಿದೆ. ಯಾವ ನೈತಿಕತೆ ಇಟ್ಟುಕೊಂಡು ಇವರು ಹೋರಾಟ ಮಾಡುತ್ತಾರೆ? ಎಂದು ಪ್ರಶ್ನೆ ಮಾಡಿದರು.
ಕಾಂಗ್ರೆಸ್ ಸರ್ಕಾರ, ದೆಹಲಿ ಹೈಕಮಾಂಡ್​ಗೆ ಎಟಿಎಂ ಆಗಿದೆ‌. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಮೇಲೆ ಆರೋಪ ಬಂದಾಗ, ಎಲ್.ಕೆ.ಅಡ್ವಾಣಿ ಮೇಲೆ ಆರೋಪ ಬಂದಾಗ ರಾಜೀನಾಮೆ ಪಡೆಯಲಾಗಿತ್ತು. ಆದರೆ ಈ ಪರಂಪರೆ ಕಾಂಗ್ರೆಸ್ ಗಿಲ್ಲ. ಕಾಂಗ್ರೆಸ್ ನಾಯಕರು ಜಾಮೀನಿನ ಮೇಲೆ ಹೊರಗಿದ್ದಾರೆ. ಅವರ ಅಜೆಂಡಾವೇ ಭ್ರಷ್ಟಾಚಾರ ಎಂದು ವಾಗ್ದಾಳಿ ನಡೆಸಿದರು.
ಸಿದ್ದರಾಮಯ್ಯ ಕಾನೂನಿಗೆ ತಲೆ ಬಾಗಬೇಕು: ಈಗ ಕಾಂಗ್ರೆಸ್ ಪಕ್ಷದ ಸರ್ಕಾರವೇ ಇದೆ. ಆದ್ದರಿಂದ ಯಾವುದೇ ಪ್ರಕರಣದ ತನಿಖೆ ಬೇಕಾದರೂ ಮಾಡಲಿ. ಮುಡಾ ಹಗರಣದಲ್ಲಿ ನಾನು ಯಾವುದಕ್ಕೂ ಸಹಿ ಹಾಕಿಲ್ಲ, ದಾಖಲೆ ನೋಡಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಆದರೆ ಅವರೇ 62 ಕೋಟಿ ರೂ. ಕೊಡಿ ಎಂದು ಹೇಳಿರುವಾಗ ಅದಕ್ಕಿಂತ ದೊಡ್ಡ ಸಾಕ್ಷಿ ಬೇಡ. ಸಿದ್ದರಾಮಯ್ಯ ಈಗ ಕಾನೂನಿಗೆ ತಲೆ ಬಾಗಬೇಕು. ಯಡಿಯೂರಪ್ಪ ಪ್ರಕರಣವೇ ಬೇರೆ, ಸಿದ್ದರಾಮಯ್ಯ ಪ್ರಕರಣವೇ ಬೇರೆ ಎಂದು ಕಾಂಗ್ರೆಸ್ ನಾಯಕರು ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ ಎಂದರು.
ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಒಳಗೊಂದು ಹೊರಗೊಂದು ಎಂಬಂತೆ ಇದ್ದಾರೆ. ತಾವು ಸಿಎಂ ಆಗಬೇಕೆಂದೇ ಅವರು ಹೇಳಿದ್ದಾರೆ. ಮುಖ್ಯಮಂತ್ರಿ ಯಾರಾಗಬೇಕೆಂಬುದು ಅವರ ಪಕ್ಷಕ್ಕೆ ಬಿಟ್ಟ ನಿರ್ಧಾರ. ಮಲ್ಲಿಕಾರ್ಜುನ ಖರ್ಗೆಯವರು ಸುದೀರ್ಘ ರಾಜಕೀಯ ಹಿನ್ನೆಲೆ ಹಾಗೂ ಕಾನೂನು ಪ್ರಕಾರ ಪ್ರತಿಕ್ರಿಯೆ ನೀಡಿದ್ದಾರೆ. ಅವರು ಹೇಳಿರುವುದು ಸರಿ ಇದೆ ಎಂದರು.
ಆತ್ಮಸಾಕ್ಷಿ ಇದ್ರೆ ರಾಜೀನಾಮೆ ಕೊಟ್ಟು ತನಿಖೆ ಎದುರಿಸಲಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:four × one =
Remember me
