ಬೆಂಗಳೂರು:ಪ್ರೌಢಶಾಲಾ ಸಹ ಶಿಕ್ಷಕ ಗ್ರೇಡ್​-2 ಹುದ್ದೆಗಳಿಗೆ ಬಡ್ತಿ ಪಡೆಯಲು 1 ರಿಂದ 5ನೇ ತರಗತಿಗೆ ಬೋಧಿಸುವ ಪ್ರಾಥಮಿಕ ಶಾಲಾ ಶಿಕ್ಷಕರು ಅರ್ಹರಲ್ಲ ಎಂದು ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ (ಕೆಎಟಿ) ಆದೇಶಿಸಿದೆ. ಇಂಥ ಶಿಕ್ಷಕರಿಗೆ ಈಗಾಗಲೇ ಬಡ್ತಿ ನೀಡಿದ್ದರೆ ಅದನ್ನು ರದ್ದುಪಡಿಸುವಂತೆ ಸರ್ಕಾರಕ್ಕೆ ಆದೇಶಿಸಿದೆ. ಹೀಗಾಗಿ ರಾಜ್ಯದಲ್ಲಿ ಈಗಾಗಲೇ ಬಡ್ತಿ ಪಡೆದಿರುವ ಸುಮಾರು 8 ಸಾವಿರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಹಿಂಬಡ್ತಿಯಾಗಲಿದೆ.
2018ರಿಂದ 2021ರವರೆಗೆ ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 1.30 ಲಕ್ಷ ಪ್ರಾಥಮಿಕ ಶಾಲಾ ಶಿಕ್ಷಕರು ತಮ್ಮನ್ನು ಪ್ರೌಢಶಾಲಾ ಸಹ ಶಿಕ್ಷಕ ಗ್ರೇಡ್​2 ಹುದ್ದೆಯ ಪದೋನ್ನತಿಗೆ ಪರಿಗಣಿಸಬೇಕೆಂದು ಸರ್ಕಾರದ ಮೇಲೆ ಒತ್ತಡ ತಂದಿದ್ದರು. ಈ ಪೈಕಿ 7 ರಿಂದ 8 ಸಾವಿರ ಶಿಕ್ಷಕರಿಗೆ ಪದೋನ್ನತಿಯೂ ದೊರೆತಿತ್ತು. ಇದರ ಬೆನ್ನಲ್ಲೇ ಕೆಎಟಿಗೆ ವೊರೆ ಹೋಗಿದ್ದ 6 ರಿಂದ 8ನೇ ತರಗತಿಗಳಿಗೆ ಬೋಧಿಸುವ ನೂರಾರು ಪದವೀಧರ ಶಿಕ್ಷಕರು, ಪ್ರೌಢಶಾಲಾ ಸಹ ಶಿಕ್ಷಕ ಗ್ರೇಡ್-2 ಹುದ್ದೆಗೆ ಬಡ್ತಿ ಪಡೆಯಲು 6ರಿಂದ 8ನೇ ತರಗತಿ ಬೋಧಿಸುವ ಪದವೀಧರ ಶಿಕ್ಷಕರು ಮಾತ್ರವೇ ಅರ್ಹರಾಗಿದ್ದು, ತಮ್ಮನ್ನು ಬಡ್ತಿಗೆ ಪರಿಗಣಿಸುವಂತೆ ಸರ್ಕಾರಕ್ಕೆ ನಿರ್ದೇಶಿಸಬೇಕೆಂದು ಕೋರಿದ್ದರು.
ಅರ್ಜಿ ವಿಚಾರಣೆ ನಡೆಸಿದ ಕೆಎಟಿ ಹಂಗಾಮಿ ಅಧ್ಯಕ್ಷ ನ್ಯಾಯಮೂರ್ತಿ ಆರ್.ಬಿ. ಬೂದಿಹಾಳ್ ನೇತೃತ್ವದ ಪೀಠ, ಪ್ರೌಢಶಾಲಾ ಸಹ ಶಿಕ್ಷಕ ಗ್ರೇಡ್-2 ಹುದ್ದೆಗೆ ಪದೋನ್ನತಿ ಪಡೆಯಲು ಪ್ರಾಥಮಿಕ ಶಾಲಾ ಶಿಕ್ಷಕರು ಅರ್ಹರಲ್ಲ. ಬದಲಿಗೆ, 6ರಿಂದ 8ನೇ ತರಗತಿ ಬೋಧಿಸುವ ಹಿರಿಯ ಪ್ರಾಥಮಿಕ ಶಿಕ್ಷಕರು ಮಾತ್ರ ಅರ್ಹರೆಂದು ಆದೇಶಿಸಿದೆ. ಇದರಿಂದ ರಾಜ್ಯದಲ್ಲಿ 6 ರಿಂದ 8ನೇ ತರಗತಿಗಳಿಗೆ ಬೋಧಿಸುತ್ತಿರುವ 13 ಸಾವಿರ ಶಿಕ್ಷಕರಿಗೆ ಸಿಹಿ ಸುದ್ದಿ ದೊರೆತಂತಾಗಿದೆ.
ಹೈಕೋರ್ಟ್ ಮೆಟ್ಟಿಲೇರುವ ಸಾಧ್ಯತೆ:ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಪ್ರೌಢಶಾಲಾ ಸಹ ಶಿಕ್ಷಕ ಗ್ರೇಡ್​ 2 ಹುದ್ದೆಗೆ ಪದೋನ್ನತಿಯನ್ನು 2018ರಿಂದ 21ರವರೆಗೆ ನೀಡುತ್ತಲೇ ಬಂದಿದ್ದಾರೆ. ಕೆಲವು ಶಿಕ್ಷಕರು ಇಲಾಖೆಗೆ ಸುಳ್ಳು ಮಾಹಿತಿ ನೀಡಿ ಈ ರೀತಿ ಪದೋನ್ನತಿ ಪಡೆದಿರುವ ಬಗ್ಗೆ ಆರೋಪ ಕೂಡ ಕೇಳಿ ಬಂದಿದೆ. ಇದೀಗ ಕೆಎಟಿ ಆದೇಶ ನೀಡಿರುವುದು ಮತ್ತು ಬಡ್ತಿ ಪಡೆದಿರುವವರಿಗೆ ಹಿಂಬಡ್ತಿ ನೀಡುತ್ತಿರುವುದನ್ನು ಪ್ರಶ್ನಿಸಿ ಇವರು ಹೈಕೋರ್ಟ್ ಮೆಟ್ಟಿಲೇರುವ ಸಾಧ್ಯತೆ ಹೆಚ್ಚಿದೆ ಎಂದು ತಿಳಿದು ಬಂದಿದೆ.
ಕೆಎಟಿ ನೀಡಿರುವ ತೀರ್ಪಿಗೆ ನಾವು ತಲೆಬಾಗಬೇಕಿದೆ. ಆದರೆ, ಇದರಿಂದ ಪ್ರಾಥಮಿಕ ಶಾಲಾ ಶಿಕ್ಷಕರು ಧೃತಿಗೆಡುವ ಅವಶ್ಯಕತೆ ಇಲ್ಲ. ಇದರ ವಿರುದ್ಧವಾಗಿ ಹೋರಾಟ ಮಾಡುವುದಕ್ಕೆ ಸಿದ್ಧರಾಗುತ್ತೇವೆ.
|ಯಲ್ಲಪ್ಪಗೌಡಅಧ್ಯಕ್ಷ, ರಾಜ್ಯ ಸರ್ಕಾರಿ ಬಡ್ತಿ ಪ್ರೌಢಶಾಲಾ ಶಿಕ್ಷಕರ ಸಂಘ
ಮದ್ವೆಯಾಗಿ ನಾಲ್ಕೇ ದಿನಗಳಲ್ಲಿ ಕರೊನಾಗೆ ಬಲಿಯಾದ ಯುವತಿ; ಸೋಂಕಿರುವುದು ಆಕೆಯ ಮರಣದ ಬಳಿಕ ಗೊತ್ತಾಯಿತು..!
ಆತ್ಮಹತ್ಯೆಯಿಂದ ಪತ್ನಿ ಸತ್ತ ಬೆನ್ನಿಗೇ ನೇಣು ಹಾಕಿಕೊಂಡ ಪತಿ; 4 ತಿಂಗಳ ಹಿಂದಷ್ಟೇ ಮದುವೆ ಆಗಿದ್ದ ಪ್ರೇಮಿಗಳು..


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 − 5 =
Remember me
