ಬೆಂಗಳೂರು: ಹವಾಮಾನ ಬದಲಾವಣೆಯಿಂದಾಗಿ ರಾಜ್ಯದಲ್ಲಿ ಡೆಂಘಿ ಪ್ರಕರಣಗಳ ಸಂಖ್ಯೆ ಏರುಗತಿ ಪಡೆದುಕೊಂಡಿದ್ದು, ಕೇವಲ ಒಂದು ತಿಂಗಳಲ್ಲಿ 3,797 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಪ್ರಕರಣಗಳ ಒಟ್ಟು ಸಂಖ್ಯೆ 10 ಸಾವಿರ ಗಡಿ ದಾಟಿದೆ.
ರಾಜ್ಯದಲ್ಲಿ ಈಗಾಗಲೇ ಒಂದು ಲಕ್ಷಕ್ಕೂ ಅಕ ಶಂಕಿತರನ್ನು ತಪಾಸಣೆಗೆ ಒಳಪಡಿಸಲಾಗಿದ್ದು, ಅವರಲ್ಲಿ 70 ಸಾವಿರಕ್ಕೂ ಅಕ ಮಂದಿಯ ರಕ್ತದ ಮಾದರಿ ಪರೀಕ್ಷೆ ಮಾಡಲಾಗಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 5,756 ಹಾಗೂ ಇತರೆ ಜಿಲ್ಲೆಗಳಲ್ಲಿ 4,504 ಸೇರಿ ರಾಜ್ಯಾದ್ಯಂತ 10,260 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ 23,191 ಶಂಕಿತರನ್ನ ತಪಾಸಣೆಗೆ ಒಳಪಡಿಸಲಾಗಿದೆ. ಅವರಲ್ಲಿ 18,378 ಮಂದಿಯ ರಕ್ತದ ಮಾದರಿಯನ್ನು ಪರೀಕ್ಷೆ ಮಾಡಲಾಗಿದೆ. ಕಳೆದ ಒಂದು ತಿಂಗಳಲ್ಲಿ 2,302 ಮಂದಿಯಲ್ಲಿ ಸೋಂಕು ವರದಿಯಾಗಿದೆ.
ಉಡುಪಿಯಲ್ಲಿ 590, ಮೈಸೂರಿನಲ್ಲಿ 486, ಶಿವಮೊಗ್ಗದಲ್ಲಿ 264, ಕಲಬುರಗಿಯಲ್ಲಿ 219, ದಕ್ಷಿಣ ಕನ್ನಡದಲ್ಲಿ 210 ಪ್ರಕರಣಗಳು ಖಚಿತಪಟ್ಟಿವೆ. ಉಳಿದ ಜಿಲ್ಲೆಗಳಲ್ಲಿ ಈ ಸಂಖ್ಯೆ 200ಕ್ಕಿಂತ ಕಡಿಮೆಯಿದೆ.
ಚಿಕೂನ್ ಗುನ್ಯಾ:ರಾಜ್ಯದ 28 ಜಿಲ್ಲೆಗಳಲ್ಲಿ ಚಿಕೂನ್‌ಗುನ್ಯಾ ಪ್ರಕರಣಗಳು ಪತ್ತೆಯಾಗಿವೆ. 36 ಸಾವಿರಕ್ಕೂ ಅಕ ಮಂದಿ ಚಿಕೂನ್‌ಗುನ್ಯಾ ಶಂಕಿತರನ್ನು ಗುರುತಿಸಲಾಗಿದ್ದು, 22 ಸಾವಿರಕ್ಕೂ ಅಕ ಮಂದಿಯ ರಕ್ತ ಪರೀಕ್ಷೆ ನಡೆಸಲಾಗಿದೆ. ಅವರಲ್ಲಿ 1,023 ಮಂದಿಯಲ್ಲಿ ಜ್ವರ ಕಾಣಿಸಿಕೊಂಡಿದೆ. ಮೈಸೂರು 168 ಹಾಗೂ ವಿಜಯಪುರದಲ್ಲಿ 112 ಅಕ ಪ್ರಕರಣಗಳು ವರದಿಯಾಗಿವೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 − 2 =
Remember me
