ಬೆಂಗಳೂರು:ಮುನಿದಿರುವ ಮುಂಗಾರು ನಡುವೆಯೇ ಆಗಾಗ್ಗೆ ಸರಿಯುತ್ತಿರುವ ಮಳೆಯಿಂದ ರೋಗಕಾರಕ ಈಡಿಸ್ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗಿದೆ. ಇದರಿಂದ ರಾಜ್ಯದಲ್ಲಿ ಡೆಂಘೆ ಹಾಗೂ ಚಿಕೂನ್ ಗುನ್ಯಾ ಪ್ರಕರಗಣಗಳು ಏರಿಕೆಯಾಗುತ್ತಿದ್ದು, ಜನರು ಜ್ವರ ಬಾಧೆಯಿಂದ ಕಂಗಾಲಾಗಿದ್ದಾರೆ. ಡೆಂಘೆ ಪ್ರಕರಣಗಳ ಸಂಖ್ಯೆ 10 ಸಾವಿರ ಗಡಿ ಸಮೀಪಿಸಿದ್ದು, ಚಿಕೂನ್ಯ ಗುನ್ಯಾ ಸೋಂಕಿತರ ಸಂಖ್ಯೆಯೂ ಒಂದು ಸಾವಿರಕ್ಕೆ ಹತ್ತಿರದಲ್ಲಿದೆ.
ಈವರೆಗೂ 68 ಸಾವಿರಕ್ಕೂ ಅಧಿಕ ಡೆಂಘೆ ಶಂಕಿತರ ರಕ್ತದ ಮಾದರಿ ಸಂಗ್ರಹಿಸಲಾಗಿದ್ದು, 9,559 ಮಂದಿಗೆ ಸೋಂಕು ದೃಢಪಟ್ಟಿದೆ. ಅದೇ ರೀತಿ 22 ಸಾವಿರಕ್ಕೂ ಅಧಿಕ ಚಿಕೂನ್ ಗುನ್ಯಾ ಶಂಕತರ ರಕ್ತದ ಮಾದರಿ ಪರೀಕ್ಷಿಸಲಾಗಿದ್ದು, ಇದುವರೆಗೂ 982 ಮಂದಿ ರೋಗದಿಂದ ಬಳಲಿದ್ದಾರೆ.
ಈಡಿಸ್ ಸೊಳ್ಳೆಗಳ ಕಡಿತದಿಂದ ಹರಡುವ ಡೆಂಘೆ ಹಾಗೂ ಚಿಕೂನ್‌ಗುನ್ಯಾ ರೋಗವು ವೈರಾಣು ಸೋಂಕಾಗಿದೆ. ಇದು ಹಗಲು ಹೊತ್ತಿನಲ್ಲಿ ಕಚ್ಚುವ ಸೊಳ್ಳೆ. ಇದರಿಂದ ಹರಡುವ ರೋಗಕ್ಕೆ ಯಾವುದೇ ನಿರ್ದಿಷ್ಟ ಲಸಿಕೆ ಅಥವಾ ಚಿಕಿತ್ಸೆ ಇಲ್ಲದಿರುವ ಕಾರಣ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ದೊರೆಯದಿದ್ದರೆ ರೋಗ ಉಲ್ಬಣಗೊಂಡು, ಮಾರಣಾಂತಿಕವಾಗುವ ಸಾಧ್ಯತೆಗಳಿವೆ.
ಎಲ್ಲೆಲ್ಲಿ ಡೆಂಘೆ ಆತಂಕ:ಬೆಂಗಳೂರು ನಗರ (5,511), ಮೈಸೂರು (454), ಉಡುಪಿ (429),ಶಿವಮೊಗ್ಗ (232), ಕಲಬುರಗಿ (219), ದಕ್ಷಿಣ ಕನ್ನಡ (210), ವಿಜಯಪುರ (188), ಚಿತ್ರದುರ್ಗ (167), ಬೆಳಗಾವಿ (154), ದಾವಣಗೆರೆ (152), ಹಾಸನ (145),ಚಿಕ್ಕಮಗಳೂರು (143),ತುಮಕೂರು (136), ಕೊಡಗು (119) ಧಾರವಾಡ (115), ಚಾಮರಾಜನಗರ (113), ಮಂಡ್ಯ (108), ಕೋಲಾರ (106) ಹೆಚ್ಚಿನ ಡೆಂಘೆ ಪ್ರಕರಣಗಳು ವರದಿಯಾಗಿವೆ.
ಡೆಂಘೆ ಜ್ವರ ರೋಗ ಲಕ್ಷಣಗಳು:ಇದ್ದಕ್ಕಿದ್ದಂತೆ ವಿಪರೀತ ಜ್ವರ, ಕಣ್ಣಿನ ಗುಡ್ಡೆಗಳ ಹಿಂಭಾಗದಲ್ಲಿ ನೋವು, ತೀವ್ರ ತಲೆನೋವು, ಮೈಕೈ ಮತ್ತು ಕೀಲು ನೋವು, ವಾಕರಿಕೆ, ವಾಂತಿ ಇವುಗಳ ಜೊತೆಗೆ ತೀವ್ರ ಹೊಟ್ಟೆ ನೋವು, ಬಾಯಿ, ಮೂಗು ಮತ್ತು ವಸಡುಗಳಲ್ಲಿ ರಕ್ತಸ್ರಾವ, ಚರ್ಮದ ಮೇಲೆ ಕೆಂಪು ಗಂಧೆ ಹಾಗೂ ರಕ್ತಸ್ರಾವದ ಗುರುತು, ಕಪ್ಪು ಬಣ್ಣದ ಮಲ ವಿಸರ್ಜನೆ, ವಿಪರೀತ ಬಾಯಾರಿಕೆ, ತಣ್ಣನೆಯ ಬಿಳಿಚಿದ ಚರ್ಮ, ಜ್ಞಾನ ತಪ್ಪುವುದು, ರಕ್ತದ ಒತ್ತಡದ ಕುಸಿತ, ನಾಡಿ ಬಡಿತದ ಕುಸಿತ ಡೆಂಘೆ ರೋಗದ ಲಕ್ಷಣಗಳು.
ಚಿಕೂನ್ ಗುನ್ಯಾ ಲಕ್ಷಣಗಳು:ಇದೂ ಸಹ ಈಡಿಸ್ ಜಾತಿಯ ಸೊಳ್ಳೆ ಕಚ್ಚುವುದರಿಂದ ಬರಲಿದ್ದು, ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ಇದಕ್ಕೂ ನಿರ್ದಿಷ್ಟ ಚಿಕಿತ್ಸೆ ಇಲ್ಲ. ಆದರೆ ಇದು ಮಾರಣಾಂತಿಕಲ್ಲ. ಬದಲಿಗೆ ತೀವ್ರ ಯಾತನೆಯಿಂದ ಕೂಡಿರುತ್ತದೆ. ಜ್ವರ, ಕೀಲುಗಳಲ್ಲಿ ತೀವ್ರವಾದ ನೋವು ಮತ್ತು ಊತ ಕಾಣಿಸಿಕೊಳ್ಳುತ್ತದೆ. ರೋಗ ಲಕ್ಷಣ ಕಂಡು ಬಂದ ಕೂಡಲೇ ವೈದ್ಯರಲ್ಲಿ ಪರೀಕ್ಷಿಸಿಕೊಳ್ಳಬೇಕು.
ಈಡಿಸ್ ಸೊಳ್ಳೆಗಳ ಉತ್ಪತ್ತಿ ತಾಣ:ಹಗಲು ಹೊತ್ತಿನಲ್ಲಿ ಕಚ್ಚುವ ಈಡಿಸ್ ಸೊಳ್ಳೆಗಳು ಮನೆಗಳಲ್ಲಿನ ನೀರು ಶೇಖರಣಾ ಸಂಗ್ರಹಗಳಾದ ಸಿಮೆಂಟ್ ತೊಟ್ಟಿಗಳು, ಬ್ಯಾರಲ್, ಡ್ರಂ, ಹೂ ಕುಂಡಗಳ ಕೆಳಗಿನ ತಟ್ಟೆ, ಏರ್ ಕೂಲರ್, ರೆಫ್ರಿಜರೇಟರ್‌ನ ಡೀ್ರೆೆಸ್ಟ್ ಟ್ರೇಗಳಲ್ಲಿ ಹಾಗೂ ಮನೆಯ ಸುತ್ತಮುತ್ತಲಿನ ಪರಿಸರದಲ್ಲಿ ಬಿಸಾಡಿದ ಒಡೆದ ಬಾಟಲಿ, ಟೈರು, ಪ್ಲಾಸ್ಟಿಕ್ ಗ್ಲೌಸ್, ಎಳನೀರಿನ ಚಿಪ್ಪು ಹಾಗೂ ಇತರೆ ಘನತ್ಯಾಜ ವಸ್ತುಗಳಲ್ಲಿ ಸಂಗ್ರಹವಾದ ಮಳೆಯ ನೀರಿನಲ್ಲಿ ಈಡಿಸ್ ಸೊಳ್ಳೆ ಉತ್ಪತ್ತಿಯಾಗುತ್ತದೆ.
ಎಚ್ಚರಿಕೆ ಕ್ರಮಗಳು:* ನೀರಿನ ಸಂಗ್ರಹಕಗಳನ್ನು ಸರಿಯಾದ ರೀತಿಯಲ್ಲಿ ಮುಚ್ಚಬೇಕು. ಅವುಗಳನ್ನು ವಾರಕ್ಕೆ ಒಮ್ಮೆ ಸ್ವಚ್ಛಗೊಳಿಸಬೇಕು.* ಮನೆಯ ಸುತ್ತಮುತ್ತ ತ್ಯಾಜ್ಯ ಸಂಗ್ರಹವಾಗದಂತೆ ಹಾಗೂ ನೀರು ನಿಲ್ಲದಂತೆ ಎಚ್ಚರವಹಿಸಬೇಕು.* ಏರ್ ಕೂಲರ್‌ಗಳಲ್ಲಿನ ನೀರನ್ನು ವಾರಕ್ಕೆ ಒಮ್ಮೆ ಬದಲಿಸಬೇಕು.* ಸೊಳ್ಳೆ ಕಚ್ಚದಂತೆ ಮೈ ತುಂಬಾ ಬಟ್ಟೆ ಧರಿಸಬೇಕು.ಮಲಗುವಾಗ ಸೊಳ್ಳೆ ಪರದೆ ತಪ್ಪದೇ ಬಳಸಬೇಕು.* ಜ್ವರ ಪೀಡಿತರು ಸಾಕಷ್ಟು ದ್ರವಾಹಾರ ಸೇವಿಸಬೇಕು ಹಾಗೂ ಅಗತ್ಯ ವಿಶ್ರಾಂತಿ ಪಡೆಯಬೇಕು.
ಸೂಚನೆ:ಯಾವುದೇ ರೀತಿಯ ಜ್ವರ ಇರಲಿ ಹತ್ತಿರದ ಸರ್ಕಾರಿ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ದೊರೆಯಲಿದ್ದು, ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ರಕ್ತಪರೀಕ್ಷೆ ಹಾಗೂ ಚಿಕಿತ್ಸೆ ದೊರೆಯಲಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × three =
Remember me
