ಬೆಂಗಳೂರು:ರಾಜಧಾನಿ ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಡೆಂಘೆ ಜ್ವರ ಉಲ್ಬಣಿಸಿರುವುದಕ್ಕೆ ಕಾಂಗ್ರೆಸ್ ಸರ್ಕಾರ, ಬೆಂಗಳೂರು ಉಸ್ತುವಾರಿಯೂ ಆದ ಡಿಸಿಎಂ ಡಿ.ಕೆ.ಶಿವಕುಮಾರ್ ನೇರ ಹೊಣೆಗಾರರು ಎಂದು ಪ್ರತಿಪಕ್ಷ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರನ್ನು ಪಕ್ಷದ ನಿಯೋಗ ಶನಿವಾರ ಭೇಟಿಯಾಗಿ, ಬೆಂಗಳೂರಿನಲ್ಲಿ ಸೊಳ್ಳೆಗಳು ಉತ್ಪತ್ತಿಯಾಗಿ ಡೆಂಘೆ ಕಾಯಿಲೆ ಹರಡಿದೆ.
ಎರಡು ಸಾವಿರಕ್ಕೂ ಹೆಚ್ಚು ಜನರು ಈ ಜ್ವರದಿಂದ ಬಳಲುತ್ತಿದ್ದು, ಮೈಸೂರು ಜಿಲ್ಲೆಯ ಆರೋಗ್ಯಾಧಿಕಾರಿ ಮರಣ ಹೊಂದಿರುವುದು ದುರದೃಷ್ಟಕರ ಎಂದು ವಿಷಾದಿಸಿದೆ.
ರಾಜ್ಯ ಸರ್ಕಾರ ಮುನ್ನೆಚ್ಚರಿಕೆ ಕ್ರಮವಹಿಸಿದ್ದರೆ ಡೆಂಘೆ ಕಾಯಿಲೆ ನಿಯಂತ್ರಣ ಸಾಧ್ಯವಿತ್ತು. ಈಗ ಪರಿಸ್ಥಿತಿ ಉಲ್ಬಣಿಸಿದ್ದು, ಯುದ್ಧೋಪಾದಿಯಲ್ಲಿ ಕ್ರಮಕೈಗೊಳ್ಳಲು 10 ದಿನಗಳ ಗಡುವು ನೀಡುತ್ತೇವೆ. ನಿರ್ಲಕ್ಷಿಸಿದರೆ ಬೆಂಗಳೂರಿನಾದ್ಯಂತ ಹೋರಾಟಕ್ಕೆ ಇಳಿಯಬೇಕಾಗುತ್ತದೆ ಎಂದು ಬಿಜೆಪಿ ಎಚ್ಚರಿಕೆ ನೀಡಿದೆ.
ಆಮೆವೇಗದ ನಿರ್ಮಾಣ ಕಾಮಗಾರಿಗಳು, ಪ್ರತಿದಿನ ಕಸಗುಡಿಸದೇ ಇರುವುದು, ರಾಜಕಾಲುವೆಗಳಿಗೆ ಕೊಳಚೆ ನೀರು ಬಿಟ್ಟಿರುವುದು, ಉದ್ಯಾನವನಗಳಲ್ಲಿ ಕಸದ ರಾಶಿ, ಮಳೆಯಿಂದ ಬಿದ್ದ ಮರಗಳ ಎಲೆ, ರೆಂಬೆ ತೆರವು ಮಾಡದಿರುವುದು ಇತ್ಯಾದಿ ಕಾರಣಗಳಿಂದ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗಿದೆ ಎಂದು ಮನವಿಪತ್ರದಲ್ಲಿ ವಿವರಿಸಿದೆ.
ಡೆಂಘೆ ಪರೀಕ್ಷೆಗೆ ಸರ್ಕಾರ 300 ರೂ. ಶುಲ್ಕ ನಿಗದಿಪಡಿಸಿದೆ. ಅನೇಕ ಖಾಸಗಿ ಆಸ್ಪತ್ರೆಗಳು ಹೆಚ್ಚಿನ ದರ ವಸೂಲಿ ಮಾಡುತ್ತಿವೆ. ಸರ್ಕಾರ ಹೊರಡಿಸಿದ ಆದೇಶವನ್ನು ಪರಿಣಾಮಕಾರಿ ಜಾರಿಗೂ ಗಮನ ನೀಡಬೇಕು ಎಂದು ಬಿಜೆಪಿ ಒತ್ತಾಯಿಸಿದೆ.
ನಿಯೋಗದಲ್ಲಿ ಶಾಸಕ ಸಿ.ಕೆ.ರಾಮಮೂರ್ತಿ, ಪಕ್ಷದ ಬೆಂಗಳೂರು ಉತ್ತರ ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಹರೀಶ್, ಕೇಂದ್ರ ಜಿಲ್ಲಾ ಘಟಕದ ಅಧ್ಯಕ್ಷ ಸಪ್ತಗಿರಿಗೌಡ, ಮುಖಂಡರಾದ ಸಂಕೀರ್ತ, ಉಮೇಶ್ ಶೆಟ್ಟಿ, ಸೋಮಶೇಖರ, ಗಂಗ ಬೈರಯ್ಯ ಇದ್ದರು.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:eleven + three =
Remember me
