ಬೆಂಗಳೂರು:ಯುಗಾದಿ ಹೊಸತೊಡಕು ಸಂಭ್ರಮಕ್ಕೆ ಅಡ್ಡಿ ಮಾಡುವ ಮೂಲಕ ಕಾಂಗ್ರೆಸ್ ಹಿಂದೂ ಸಂಸ್ಕೃತಿಯ ಮೇಲೆ ತನ್ನ ಕಾಕದೃಷ್ಟಿ ಬೀರಿದೆ ಎಂದು ಜಾತ್ಯತೀತ ಜನತಾದಳ ಆಕ್ರೋಶ ವ್ಯಕ್ತಪಡಿಸಿದೆ.
ಹೊಸತೊಡಕು ಆಚರಣೆ ಹಿಂದಿನಿಂದಲೂ ನಡೆದುಕೊಂಡು ಬಂದಿರುವ ಸಂಪ್ರದಾಯ. ಕಾಂಗ್ರೆಸ್ ಬಾಡೂಟವನ್ನು ಭಯೋತ್ಪಾದನೆಯಂತೆ ವೈಭವೀಕರಿಸುತ್ತಿದೆ ಎಂದು ಕಿಡಿಕಾರಿದೆ.
ಪ್ರತಿಯೊಬ್ಬ ಹಿಂದೂ ಮನೆಯಲ್ಲಿ ನಡೆಯುವಂತೆ ಕುಮಾರಸ್ವಾಮಿ ಅವರ ಮನೆಯಲ್ಲಿಯೂ ಹೊಸತೊಡಕು ಆಚರಣೆ ನಡೆಯುತ್ತಿದೆ. ಅದರಲ್ಲಿ ವಿಶೇಷವೇನೂ ಇಲ್ಲ. ಹೊಸತೊಡಕು ಊಟಕ್ಕೆ ಸಂಬಂಧಿಕರು, ಸ್ನೇಹಿತರು ಹಾಗೂ ರಾಜಕೀಯ ಸಹಪಾಠಿಗಳನ್ನು ಆಹ್ವಾನಿಸಿದ್ದಾರೆ. ಮಾಂಸದ ಅಡುಗೆ ಈ ದಿನದ ಸಾಮಾನ್ಯ ತಿನಿಸು. ಈ ಊಟಕ್ಕೂ ಕಾಂಗ್ರೆಸ್ ಕಲ್ಲು ಹಾಕಿ ವಿಕೃತಿ ಮೆರೆದಿದೆ ಎಂದು ಜೆಡಿಎಸ್ ಆರೋಪಿಸಿದೆ.
ಮತಕ್ಕಾಗಿ ಹಣ, ಹೆಂಡ, ಸೀರೆ, ಕುಕ್ಕರ್, ಪ್ರಿಜ್, ಕೂಪನ್ ಹಂಚುವ ಸತ್ಸಂಪ್ರದಾಯ ಹೊಂದಿರುವ ಕಾಂಗ್ರೆಸ್ಸಿಗೆ ಮೇಕೆದಾಟು ಪಾದಯಾತ್ರೆಯಲ್ಲಿ ಹರಿದ ಮಾಂಸ, ಮದ್ಯದ ಹೊಳೆಯನ್ನು ಕಾಣದವರು ಯಾರೂ ಇಲ್ಲ. ಆದರೆ ಆ ಪಕ್ಷದ ಕಾಮಾಲೆ ಕಣ್ಣು ಹಿಂದೂಗಳ ಹಬ್ಬಗಳ ಮೇಲೆಯೇ ಬಿದ್ದಿದೆ. ಜಾತಿ, ಧರ್ಮಗಳ ತುಷ್ಟೀಕರಣ ಜಾಡ್ಯ ಕಾಂಗ್ರೆಸ್‌ನ್ನು ಅಂಟಿಕೊಂಡಿದೆ ಎಂದು ಜೆಡಿಎಸ್ ದೂರಿದೆ.
ಕಾಂಗ್ರೆಸ್ ಸೋಲಿನ ಹತಾಶೆಯಿಂದ ಜೆಡಿಎಸ್ ಹಾಗೂ ಬಿಜೆಪಿ ಪಕ್ಷಗಳನ್ನು ಟೀಕಿಸುವ ಬರದಲ್ಲಿ ನಮ್ಮ ಹಿಂದೂ ಸಂಪ್ರದಾಯದ ಬಗ್ಗೆ ಅವಹೇಳನ ಮಾಡಿದೆ. ಅದರ ಕೊಳಕುತನ ಎದ್ದು ಕಾಣುತ್ತಿದೆ. ನಿರಂತರವಾಗಿ ಹಿಂದೂ ವಿರೋಧಿ, ದ್ರೋಹಿ ಆಗಿರುವ ಕಾಂಗ್ರೆಸ್ ಪಕ್ಷಕ್ಕೆ ಹೊಸತೊಡಕುಗಿಂತ ಇಫ್ತಾರ್ ಕೂಟದಲ್ಲಿಯೇ ಹೆಚ್ಚು ಪ್ರೀತಿ. ಜನ್ಮದಾರಭ್ಯ ಬಂದಿದ್ದನ್ನು ನಾವಂತೂ ಅವಹೇಳನ ಮಾಡುವುದಿಲ್ಲ ಎಂದು ಜೆಡಿಎಸ್ ಟಾಂಗ್ ಕೊಟ್ಟಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − twelve =
Remember me
